LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣ: ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹ

ಮಂಗಳೂರು: ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್ಐಟಿ)ದ ಅಧಿಕಾರಿಗಳು ದೂರುಗಳ ಆಲಿಸಲು ಸಹಾಯವಾಣಿ ಆರಂಭಿಸುವಂತೆ ನಾಪತ್ತೆಯಾಗಿರುವ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರ ಪರ ವಕೀಲರು ಮನವಿ ಮಾಡಿದ್ದಾರೆ.

ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳ ಸ್ಥಾಪಿಸಿದೆ. ನಾಪತ್ತೆಯಾಗಿರುವ ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ಹಾಗೂ ಭವಿಷ್ಯದಲ್ಲಿ ಬೆಳಕಿಗೆ ಬರುವ ಪ್ರಕರಣಗಳನ್ನೂ ತನಿಖೆ ನಡೆಸುವಂತೆ ಸೂಚಿಸಿದೆ. ಎಸ್ಐಟಿ ರಚನೆ ಬಳಿಕ ಸಾಕಷ್ಟು ಮಂದಿ ನನಗೆ ಕಲೆ ಮಾಡಿ, ತಮಗಾದ ಭಯಾನಕ ಅನುಭವ ಹಾಗೂ ದುರಂತಗಳ ಬಗ್ಗೆ ತಿಳಿಸುತ್ತಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿನ ಅನಾನುಕೂಲತೆಗಳಿಂದಾಗ ದೂರು ನೀಡಲು ಹಿಂಜರಿಯುತ್ತಿದ್ದಾರೆ. ಹೀಗಾಗಿ ಎಸ್ಐಟಿ ರಚಿಸಿರುವ ಸರ್ಕಾರ, ಸಹಾಯವಾಣಿಯನ್ನು ಆರಂಭಿಸಬೇಕೆಂದು ಮನವಿ ಮಾಡುತ್ತಿದ್ದೇನೆಂದು ಹೇಳಿದ್ದಾರೆ.

ಇದಲ್ಲದೆ, ಮುಂದೆ ಬರುವ ದೂರುಗಳನ್ನು ಸ್ವೀಕರಿಸಲು ಎಸ್ಐಟಿ ಕಚೇರಿಯೇ ಪೊಲೀಸ್ ಠಾಣೆಯೆಂದು ತಿಳಿಸಬೇಕು. ಇಲ್ಲದಿದ್ದರೆ, “ಎಸ್‌ಐಟಿ ‘ಪೊಲೀಸ್ ಠಾಣೆ’ಯಾಗಿ ಕಾರ್ಯನಿರ್ವಹಿಸಿದರೂ ‘ಪೊಲೀಸ್ ಠಾಣೆ’ ಎಂದು ಅಧಿಸೂಚನೆಗೊಳ್ಳದ ಹಿನ್ನೆಲೆಯಲ್ಲಿ ಆರೋಪಿಗಳು ಅದನ್ನು ದುರುಪಯೋಗಪಡಿಸಿಕೊಂಡು ನ್ಯಾಯಾಲಯಗಳಿಂದ ತಡೆಯಾಜ್ಞೆ ಪಡೆಯುವ ಸಾಧ್ಯತೆಗಳಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026