Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಧರ್ಮೇಂದ್ರ ಪ್ರಧಾನ ರಾಜೀನಾಮೆ ವಿದ್ಯಾರ್ಥಿ–ಯುವಜನರ ಗೆಲುವು: ಸಿದ್ದರಾಮಯ್ಯ

ಬೆಂಗಳೂರು, ಜುಲೈ 25: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆ ದೇಶದ ಎಚ್ಚೆತ್ತ ವಿದ್ಯಾರ್ಥಿ–ಯುವಜನರ ಹೋರಾಟದ ಗೆಲುವಾಗಿದ್ದು, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ವಿಜಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ಬಿಸಿಲು, ಮಳೆ, ಹಸಿವು ಮತ್ತು ಆರೋಗ್ಯದ ಸವಾಲುಗಳನ್ನು ಲೆಕ್ಕಿಸದೆ ದೆಹಲಿಯಲ್ಲಿ ಹಲವು ದಿನಗಳ ಕಾಲ ಬೀಡುಬಿಟ್ಟು, ಪೊಲೀಸರ ದೌರ್ಜನ್ಯ ಮತ್ತು ಪ್ರಚೋದನೆಗಳ ನಡುವೆಯೂ ಶಾಂತಿಯುತ ಹೋರಾಟ ನಡೆಸಿದ ಲಕ್ಷಾಂತರ ವಿದ್ಯಾರ್ಥಿ–ಯುವಜನರು ದೇಶದಲ್ಲಿ ಹೊಸ ಭರವಸೆ ಮೂಡಿಸಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷವು ಕಾಲದ ಕರೆಗೆ ಸ್ಪಂದಿಸಿ ಜವಾಬ್ದಾರಿಯುತ ವಿರೋಧ ಪಕ್ಷವಾಗಿ ತನ್ನ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಿದೆ ಎಂದು ಅವರು ಹೇಳಿದ್ದಾರೆ. ಹೋರಾಟಕ್ಕೆ ಸೂಕ್ತ ಸಮಯದಲ್ಲಿ ನಾಯಕತ್ವ ನೀಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಇದೇ ಸಂದರ್ಭದಲ್ಲಿ ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.

ಶಿಕ್ಷಣ ಸಚಿವರ ರಾಜೀನಾಮೆಯಿಂದ ಶಿಕ್ಷಣ ಕ್ಷೇತ್ರದ ಎಲ್ಲ ಸಮಸ್ಯೆಗಳು ಪರಿಹಾರವಾಗುವುದಿಲ್ಲ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. "ಸರ್ವಾಧಿಕಾರ ಮತ್ತು ದುರಾಡಳಿತದ ಶಾಲೆಯ ಗುರುಗಳು ಕುರ್ಚಿಯಲ್ಲಿ ಭದ್ರವಾಗಿ ಕುಳಿತಿರುವಾಗ ಇಂತಹ ಶಿಷ್ಯರ ನಿರ್ಗಮನದಿಂದ ಶಾಲೆಯ ಸುಧಾರಣೆಯಾಗುವುದಿಲ್ಲ. ರಾಜಕೀಯದಿಂದ ಶಿಕ್ಷಣದವರೆಗೆ ಎಲ್ಲವನ್ನೂ ವ್ಯಾಪಾರೀಕರಣಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅಧಿಕಾರದಲ್ಲಿ ಇರುವವರೆಗೆ ಶಿಕ್ಷಣ ವ್ಯವಸ್ಥೆಯೂ ಸುಧಾರಣೆಯಾಗದು, ಭಾರತವೂ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಉಳಿಯುವುದಿಲ್ಲ" ಎಂದು ಅವರು ಟೀಕಿಸಿದ್ದಾರೆ.

ಒಬ್ಬ ಸಚಿವರ ರಾಜೀನಾಮೆಗೆ ಮಾತ್ರ ಸಂಭ್ರಮಾಚರಣೆ ಮಾಡದೆ, ದೇಶದ ವಿದ್ಯಾರ್ಥಿ–ಯುವಜನರು ಕೇಂದ್ರದಲ್ಲಿರುವ ಅಸಮರ್ಥ ಮತ್ತು ಭ್ರಷ್ಟ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೆ ತಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಅವರು ಕರೆ ನೀಡಿದ್ದಾರೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷ ಸದಾ ಜನರೊಂದಿಗೆ ಇರುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ