LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗಂಭೀರ ಆರೋಗ್ಯ ಸಮಸ್ಯೆಗಳ ಪತ್ತೆಗಾಗಿ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಅಳವಡಿಸಿರುವ ಇಸಿಜಿ ಯಂತ್ರಗಳ ಸದುಪಯೋಗ ಪಡೆಯಿರಿ: ಡಿಹೆಚ್‌ಓ ಡಾ.ಯಲ್ಲಾ ರಮೇಶಬಾಬು





ಬಳ್ಳಾರಿ,ಏ.28

ವ್ಯಕ್ತಿಗೆ ಆಕಸ್ಮಿಕವಾಗಿ ಒದಗುವ ಆರೋಗ್ಯದ ಸಮಸ್ಯೆಗಳನ್ನು ಗುರ್ತಿಸಲು ಇಸಿಜಿ ಮಷಿನ್ ಅತ್ಯಂತ ಮಹತ್ವದ್ದಾಗಿದ್ದು, ಅದರಲ್ಲೂ ಮುಖ್ಯವಾಗಿ ಹೃದಯದ ಮೌಲ್ಯಮಾಪನ ಮಾಡುವ ಮೂಲಕ ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಪರೀಕ್ಷಿಸಿ ಹೃದಯದ ಸಮಸ್ಯೆ ಹಾಗೂ ಆರೋಗ್ಯವನ್ನು ಮೇಲ್ವಿಚಾರಣೆ ಮಾಡುವ ಇಸಿಜಿ ಯಂತ್ರಗಳ ಗ್ರಾಮೀಣ ಜನತೆಯು ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು.

ಸೋಮವಾರ ಕಂಪ್ಲಿ ತಾಲೂಕಿನ ಎಮ್ಮಿಗನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಸಿಜಿ ಮೂಲಕ ವ್ಯಕ್ತಿಯ ಆರೋಗ್ಯ ಪರೀಕ್ಷಾ ಕಾರ್ಯ ಪರಿಶೀಲಿಸಿ ಅವರು ಮಾತನಾಡಿದರು.

ಜಿಲ್ಲೆಯಾದ್ಯಂತ 2 ತಾಲ್ಲೂಕು ಆಸ್ಪತ್ರೆ, 6 ಸಮುದಾಯ ಆರೋಗ್ಯ ಕೇಂದ್ರ, 29 ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು 09 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಇಸಿಜಿ ಮೆಷಿನ್ ಲಭ್ಯವಿದ್ದು, ಇಲ್ಲಿ ತಜ್ಞರು ಹಾಗೂ ತರಬೇತಿ ಪಡೆದ ವೈದ್ಯರು ಪರೀಕ್ಷೆ ಮಾಡಲು ಅವಕಾಶ ಮಾಡಲಾಗಿದೆ ಎಂದರು.

*ಯಾವ ಲಕ್ಷಣಗಳಿಗೆ ಇಸಿಜಿ ಮಾಡಿಸಬೇಕು?”*

ಎದೆ ನೋವು, ತಲೆತಿರುಗುವಿಕೆ, ತಲೆತಿರುಗುವಿಕೆ ಅಥವಾ ಗೊಂದಲ, ಹೃದಯ ಬಡಿತ ಏರಿಳಿತ, ತ್ವರಿತ ನಾಡಿಮಿಡಿತ, ಉಸಿರಾಟದ ತೊಂದರೆ, ದೌರ್ಬಲ್ಯ, ಆಯಾಸ, ಅಥವಾ ವ್ಯಾಯಾಮ ಮಾಡುವ ಸಾಮರ್ಥ್ಯ ಕಡಿಮೆಯಾಗುವುದು.

*ಇಸಿಜಿಯಿಂದ ಸ್ಥಳದಲ್ಲಿಯೇ ಗುರ್ತಿಸಬಹುದಾದ ಸಮಸ್ಯೆಗಳು:*

ಹೃದಯದಲ್ಲಿ ನಿರ್ಬಂಧಿಸಲಾದ ಅಥವಾ ಕಿರಿದಾದ ಅಪಧಮನಿಗಳು (ಕರೋನರಿ ಅಪಧಮನಿ ಕಾಯಿಲೆ) ಎದೆ ನೋವು ಅಥವಾ ಹೃದಯಾಘಾತಕ್ಕೆ ಕಾರಣವಾಗಿದ್ದರೆ. ಈ ಹಿಂದೆ ಹೃದಯಾಘಾತವಾಗಿದ್ದರೆ, ಪೇಸ್‌ಮೇಕರ್‌ನಂತಹ ನಿರ್ದಿಷ್ಟ ಹೃದಯ ಕಾಯಿಲೆ ಚಿಕಿತ್ಸೆಯ ಕಾರ್ಯನಿರ್ವಹಣೆ, ಅನಿಯಮಿತ ಹೃದಯ ಬಡಿತಗಳು (ಆರ್ಹೆತ್ಮಿಯಾ).

*ಟೆಲಿ ಐಸಿಯು ಹಬ್ ಮೂಲಕ ಜಿಲ್ಲೆಯಲ್ಲಿ ಅನೂಕೂಲ:*

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಪಾಸಣೆ ಮಾಡಿದಾಗ ಯಾವುದೇ ವ್ಯತ್ಯಾಸ ಕಂಡುಬ0ದಲ್ಲಿ ತಕ್ಷಣ ತಾಲೂಕು ಮಟ್ಟದ ಅಸ್ಪತ್ರೆಗೆ ದಾಖಲಿಸಿ, ಅಲ್ಲಿಯ ತಜ್ಞರು ಜಿಲ್ಲಾ ಆಸ್ಪತ್ರೆಯಲ್ಲಿ ಅಳವಡಿಸಿರುವ ಟೆಲಿ ಐಸಿಯು ಹಬ್‌ನ ತಜ್ಞವೈದ್ಯರಿಗೆ ನೇರವಾಗಿ ರೋಗಿಯನ್ನು ವಿಡಿಯೋ ಮುಲಕ ಸಂಪರ್ಕಿಸಿ ಚಿಕಿತ್ಸೆ ಒದಗಿಸಲು ಅಥವಾ ತುರ್ತು ಅಗತ್ಯವೆನಿಸಿದರೆ ಜಿಲ್ಲಾ ಆಸ್ಪತ್ರೆ ಅಥವಾ ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರ ಕ್ಕೆ ದಾಖಲಿಸಲು ಸಹಕಾರಿಯಾಗಿ ವ್ಯಕ್ತಿಯ ಜೀವ ಉಳಿಸಲು ಸಹಾಯಕವಾಗಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರು ಜಿಲ್ಲೆಯ ಎಲ್ಲ ಆಸ್ಪತ್ರೆಗಳಲ್ಲಿ ಲಭ್ಯವಿರುವ ಇಸಿಜಿ ಮೆಷಿನ್‌ಗಳ ಸದುಪಯೋಗ ಪಡೆಯಲು ವಿನಂತಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್, ಅಡಳಿತ ವೈದ್ಯಾಧಿಕಾರಿ ಡಾ.ಫಾರೂಖ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಅರೋಗ್ಯ ನಿರೀಕ್ಷಣಾಧಿಕಾರಿ ಬಸವನಗೌಡ, ಕೃಷ್ಣಮೂರ್ತಿ, ಸಿಬ್ಬಂದಿಯವರಾದ ಪೂಜಾ, ಉಮಾಮಹೇಶ್ವರಿ, ಕನಕಪ್ಪ, ಅಶ್ವಿನಿ ಸೇರಿದಂತೆ ಇತರರು ಉಪಸ್ಥಿತರಿದ್ದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು