LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಮೊದಲು ದುಡ್ಡು ಕೊಡಿಸಲಿ, ಖಾಲಿ ಮಾತನಾಡುವುದು ಬೇಡ'- ಹೆಚ್‌ಡಿಕೆ ವಿರುದ್ಧ ಡಿಕೆಶಿ ವ್ಯಂಗ್ಯ

ನವದೆಹಲಿ : ಮೊದಲು ದುಡ್ಡು ಕೊಡಿಸಲಿ, ಕೇವಲ ಖಾಲಿ ಮಾತನಾಡುವುದು ಬೇಡ ಎಂದು ಹೆಚ್.ಡಿ.ಕುಮಾರಸ್ವಾಮಿಯನ್ನು ಉದ್ದೇಶಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವ್ಯಂಗ್ಯವಾಡಿದ್ದಾರೆ.

ದೆಹಲಿಯ ಕರ್ನಾಟಕ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಟನಲ್ ರಸ್ತೆ ವಿಚಾರವಾಗಿ ನಿತಿನ್ ಗಡ್ಕರಿ ಅವರನ್ನು ಹೆಚ್‌ಡಿಕೆ ಭೇಟಿಯಾಗಿ ಚರ್ಚೆ ನಡೆಸಿರೋದು ಕ್ರೆಡಿಟ್ ವಾರ್ ಆಗುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, "ಕುಮಾರಸ್ವಾಮಿ ಅವರ ಸಲಹೆ ಮತ್ತು ನಿಮ್ಮ ಸಲಹೆಯನ್ನು ನಾನು ಸ್ವೀಕರಿಸುತ್ತೇನೆ. ಕ್ರೆಡಿಟ್ ಯಾರು ಬೇಕಾದರೂ ಪಡೆದುಕೊಳ್ಳಲಿ" ಎಂದಿದ್ದಾರೆ.

ಸಂಪುಟ ಬದಲಾವಣೆಗಾಗಿ ಸಿಎಂ ದೆಹಲಿ ಭೇಟಿ ನೀಡಿದ್ದಾರೆಯೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಸದ್ಯಕ್ಕೆ ಸಂಚಿವ ಸಂಪುಟ ಬದಲಾವಣೆ ಕುರಿತು ಯಾವುದೇ ಚರ್ಚೆಯಿಲ್ಲ. ನಾವು ಬಂದಿರುವುದು ಅಭಿವೃದ್ಧಿ ವಿಚಾರಗಳನ್ನು ಚರ್ಚೆ ನಡೆಸಲು, ಬೆಂಗಳೂರಿನಲ್ಲಿ ಒಂದಷ್ಟು ರಸ್ತೆಗಳನ್ನು ಅಗಲೀಕರಣ ಮಾಡಬೇಕಿದೆ. ಇದಕ್ಕೆ ರಕ್ಷಣಾ ಇಲಾಖೆ ಭೂಮಿಗಳ ಅವಶ್ಯಕತೆಯಿದೆ. ಈ ಕಾರಣಕ್ಕೆ ಹಾಗೂ ದಸರಾ ವೇಳೆ ಚುಟುಕು ಏರ್ ಶೋ ನಡೆಸಲು ರಕ್ಷಣಾ ಸಚಿವರನ್ನು ಭೇಟಿ ಮಾಡುವುದಕ್ಕಾಗಿ ಬಂದಿದ್ದೇವೆ" ಎಂದು ತಿಳಿಸಿದ್ದಾರೆ.

"ನಾಲ್ಕು ಎಂಎಲ್‌ಸಿ ಸ್ಥಾನಗಳ ನಾಮನಿರ್ದೇಶನ ಯಾವಾಗ ಎಂಬ ಪ್ರಶ್ನೆಗೆ ಅವರು, ವಿಧಾನಸಭಾ ಅಧಿವೇಶನದ ಮುಂಚಿತವಾಗಿ ಮುಗಿಯುತ್ತದೆ. ಮಾಧ್ಯಮದವರಿಗೂ ಒಂದು ಸ್ಥಾನ ನೀಡಲಾಗುವುದು" ಎಂದು ಉತ್ತರಿಸಿದ್ದಾರೆ.

"ನೀವು ಸೋನಿಯಾ ಗಾಂಧಿ ಹಾಗೂ ಇತರೆ ಹಿರಿಯ ನಾಯಕರನ್ನು ಭೇಟಿಯಾಗಿದ್ದೀರಾ ಎಂದು ಕೇಳಿದಾಗ, ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿಲ್ಲ. ಹಿರಿಯ ನಾಯಕರ ಭೇಟಿಗೆ ಸಮಯ ಕೇಳಿದ್ದೇನೆ. ಸಮಯ ನೀಡದಿದ್ದರೆ ಯಾರನ್ನೂ ಭೇಟಿಯಾಗಲು ಆಗುವುದಿಲ್ಲ. ರಾಹುಲ್ ಗಾಂಧಿ ಅವರು ಪಾಟ್ನಾಗೆ ತೆರಳಿದ್ದಾರೆ" ಎಂದು ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026