LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಕೋವಿಡ್ ಲಸಿಕೆ ಹೃದಯಾಘಾತಕ್ಕೆ ನೇರ ಕಾರಣವಲ್ಲ'- ದಿನೇಶ್ ಗುಂಡೂರಾವ್

ಬೆಂಗಳೂರು : ಕೋವಿಡ್ ಲಸಿಕೆ ಹೃದಯಾಘಾತಕ್ಕೆ ನೇರ ಕಾರಣ ಅಲ್ಲ. ವರದಿಯಲ್ಲಿ ಕೊರೊನಾದಿಂದ ಗುಣಮುಖರಾದವರಿಗೆ ಹೃದಯಾಘಾತವಾಗಿದೆ ಅಂತ ಇದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಹೃದಯಾಘಾತ ಕುರಿತು ಸಮೀಕ್ಷೆ ನಡೆಸಿದ ತಾಂತ್ರಿಕ ಸಲಹಾ ಸಮಿತಿಯಿಂದ ವರದಿ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಕೋವಿಡ್ ಲಸಿಕೆ ಹೃದಯಾಘಾತಕ್ಕೆ ನೇರ ಕಾರಣ ಅಲ್ಲ. ಮಧುಮೇಹ, ಕೊಬ್ಬು ಸೇರಿದಂತೆ ಅನೇಕ ಅಡ್ಡ ಪರಿಣಾಮಗಳು ಹೃದಯಾಘಾತಕ್ಕೆ ಕಾರಣ ಆಗಿವೆ. ರಕ್ತದೊತ್ತಡ, ಶುಗರ್, ದಪ್ಪ ಆಗಿರೋದು, ದೈಹಿಕ ಚಟುವಟಿಕೆ ಇಲ್ಲದೇ ಇರೋದು. ಹೃದಯಾಘಾತ ಹೆಚ್ಚಾಗೋದಕ್ಕೆ ಕಾರಣ ಆಗಿದೆ. ಜನರ ಜೀವನ ಶೈಲಿ ಕೂಡ ಹೃದಯಾಘಾತಕ್ಕೆ ಕಾರಣ ಆಗಿದೆ. ಕೊವಿಡ್ ಲಸಿಕೆಯಿಂದ ನೇರವಾಗಿ ಕಾರಣ ಅಲ್ಲ ಎಂದಿದ್ದಾರೆ.

ಎಂಆರ್‌ಎನ್‌ಎ ವ್ಯಾಕ್ಸಿನ್ ಬಗ್ಗೆ ಅನುಮಾನ ಇದೆ. ಆದ್ರೆ ನಮ್ಮ ದೇಶದಲ್ಲಿ ಯಾರೂ ಈ ಲಸಿಕೆ ತೆಗೆದುಕೊಂಡಿಲ್ಲ. ನಮ್ಮ ಅಧ್ಯಯನದಲ್ಲಿ ಇದು ಬಯಲಾಗಿಲ್ಲ ವಿಶ್ವಮಟ್ಟದ ಅಧ್ಯಯನದಲ್ಲಿ ಬಯಲಾಗಿದೆ ಎಂದು ಹೇಳಿದ್ದಾರೆ.

ಹೃದಯಾಘಾತ ಪ್ರಕರಣಗಳು ಹೆಚ್ಚಾದ ಹಿನ್ನೆಲೆ ಕೆಲವು ತಿಂಗಳ ಹಿಂದೆ ಸಿಎಂ ಅವರು ತನಿಖೆಗೆ ಸೂಚಿಸಿದ್ರು. ತಜ್ಞರ ಸಮಿತಿ ಮಾಡಿ ವರದಿಗೆ ಆದೇಶ ಮಾಡಿದ್ರು. ಕೊವಿಡ್ ಅಥವಾ ಕೊವಿಡ್ ಲಸಿಕೆ ಅಡ್ಡ ಪರಿಣಾಮಗಳು ಏನು? ಸಾವು ಹೇಗೆ ಅಂತಾ ತನಿಖೆ ಮಾಡೋಕೆ ಹೇಳಿದ್ರು. ಮುಖ್ಯ ಕಾರ್ಯದರ್ಶಿ ಸಮಿತಿ ರಚನೆ ಮಾಡಿ ಜಯದೇವ ನಿರ್ದೇಶಕರು ಸೇರಿದಂತೆ ಹಲವು ತಜ್ಞರು ಇದ್ದರು. ಅದರಂತೆ ವಿಶ್ವ ಮಟ್ಟದಲ್ಲಿ ಏನು ತನಿಖೆ ಆಗಿದೆ ಎಂಬುದನ್ನು ವಿಶ್ಲೇಷಣೆ ಮಾಡಲಾಗಿದೆ ಜೊತೆಗೆ ಜಯದೇವ ಆಸ್ಫತ್ರೆಯಲ್ಲೂ ತನಿಖೆ ಮಾಡಿದ್ದಾರೆ. ಈ ವರದಿಯಲ್ಲಿ ಕೊವಿಡ್ ಯಾರಿಗೆ ಆಗಿತ್ತು ಅವರಿಗೆ ಹೃದಯಾಘಾತ ಹೆಚ್ಚಾಗಿ ಆಗಿರೋದು ಅನ್ನೋದು ಕಂಡುಬಂದಿದೆ. ಕೊವಿಡ್ ಬಂದವರಿಗೆ ಹೃದಯಾಘಾತ ಆಗಿರೋದು ವರದಿ ಬಹಿರಂಗ ಆಗಿದೆ ಎಂದು ವಿವರಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026