LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯದಲ್ಲಿ ಕೊರೊನಾ ಹೆಚ್ಚಳ: 'ಇನ್ಮುಂದೆ ಕೋವಿಡ್ ಟೆಸ್ಟ್ ಕಡ್ಡಾಯ'- ದಿನೇಶ್ ಗುಂಡೂರಾವ್ ಸೂಚನೆ

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಉಸಿರಾಟ ಸಮಸ್ಯೆ ಮತ್ತು ಹೃದಯಸಂಬಂಧಿ ಕಾಯಿಲೆ ಇರುವವರಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಒಂದು ತಿಂಗಳಿಗಾಗುವಷ್ಟು ಎಲ್ಲಾ ಆಸ್ಪತ್ರೆಗಳು ಟೆಸ್ಟ್ ಕಿಟ್ ತೆಗೆದಿಡಬೇಕು. ರಾಜ್ಯದಲ್ಲಿ ಒಟ್ಟು 35 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ ದೃಢಪಟ್ಟಿವೆ ಎಂದಿದ್ದಾರೆ.

ಉಸಿರಾಟ ಹಾಗೂ ಹೃದಯಸಂಬಂಧಿ ಕಾಯಿಲೆಯಿಂದ ದಾಖಲಾಗಿರುವ ರೋಗಿಗಳಿಂದ ಆಸ್ಪತ್ರೆ ಸಿಬ್ಬಂದಿ ಸ್ಯಾಂಪಲ್ಸ್ ಕಲೆಕ್ಟ್ ಮಾಡಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಬೇಕು. ಜನಸಂದಣಿಯಲ್ಲಿ ಮಾಸ್ಕ್ ಧರಿಸಿ. ಯಾರೂ ಕೂಡ ಭಯ ಪಡುವ ಅಗತ್ಯವಿಲ್ಲ. ಕೋವಿಡ್ ಬಂದಿದೆ ಎಂದು ಆತಂಕ ಪಡುವ ಅಗತ್ಯವಿಲ್ಲ. ಆರೋಗ್ಯ ಇಲಾಖೆಯ ಮಾರ್ಗಸೂಚಿಯನ್ನು ಪಾಲಿಸಿ, ಮುಂಜಾಗ್ರತೆ ವಹಿಸಿದರೆ ಸಾಕು ಎಂದು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೃಷಿ ಅಧಿಕಾರಿಗಳು ಮತ್ತು ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಸ್ಥಗಿತ.!ಈ ಭಾಗಗಳಲ್ಲಿ ಬೆಳಿಗ್ಗೆ ಭಯಂಕರ ಬಿಸಿಲು ಸಂಜೆ ಮಳೆಯ ವಾತಾವರಣ .!ವಚನ: -ಮಡಿವಾಳ ಮಾಚಿದೇವ .!ರಾಗಿ ಖರೀದಿ ಪ್ರಕ್ರಿಯೆ: ನೋಂದಾಯಿತ ರೈತರಿಗೆ ಮೇ 5 ರವರೆಗೆ ಮಾರಾಟಕ್ಕೆ ಅಂತಿಮ ಅವಕಾಶಮೂರನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ತೇಜಸ್ವಿ ದೇಶಪಾಂಡೆ ಯಶೋಗಾಥೆ.!ಮೇ 5 ರಂದು ಈ ಊರಲ್ಲಿ ಮದ್ಯ ನಿಷೇಧ.!ಮನೆಯಲ್ಲಿರುವ ದುಷ್ಟ ಶಕ್ತಿಗಳು ತಂತ್ರಶಕ್ತಿಗಳು ಹೊರಹೋಗಲಿಕ್ಕೆ ಸೋಮವಾರದ ದಿನ ಬಿಳಿ ಸಾಸಿವೆಯಿಂದ ಈ ತಂತ್ರ ಮಾಡಿ ಸಾಕು!ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಕಾರ್ಮೋಡಕ್ಕೆ ತೆರೆ ಡೊನಾಲ್ಡ್ ಟ್ರಂಪ್.!ಇನ್ಮುಂದೆ ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ.!ಸಿಬ್ಬಂದಿ ನೇಮಕಾತಿ ಆಯೋಗ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ