LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚಿತ್ರದುರ್ಗ ತಾಲ್ಲೂಕಿನ ವಸತಿ ಶಾಲೆಗಳಲ್ಲಿ ಖಾಲಿ ಸ್ಥಾನಗಳಿಗೆ ವಿದ್ಯಾರ್ಥಿಗಳಿಗೆ ನೇರ ಪ್ರವೇಶ

 

ಚಿತ್ರದುರ್ಗ : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿ ಕಾರ್ಯನಿರ್ವಹಿಸುತ್ತಿರುವ ಮೋರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಇಂದಿರಾಗಾಂಧಿ ವಸತಿ ಶಾಲೆಗಳಲ್ಲಿ ಖಾಲಿ ಇರುವ 9 ಮತ್ತು 10 ನೇ ತರಗತಿಯಲ್ಲಿ ಸ್ಥಾನಗಳಿಗೆ ನೇರ ಪ್ರವೇಶ ನೀಡಲಾಗುತ್ತಿದೆ.

ಈಗಾಗಲೇ ಸರ್ಕಾರ ಆದೇಶದಂತೆ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆ ಸಮಿತಿಯಲ್ಲಿ ತಾಲ್ಲೂಕುವಾರು ಖಾಲಿ ಇರುವ ಸ್ಥಾನಗಳಿಗೆ ಮೀಸಲಾತಿ ಗುರುತಿಸಲಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 9ನೇ ತರಗತಿಗೆ 8 ಹಾಗೂ 10ನೇ ತರಗತಿಗೆ 28 ಸ್ಥಾನಗಳು ಖಾಲಿಯಿವೆ. ಚಳ್ಳಕೆರೆ ತಾಲ್ಲೂಕಿನಲ್ಲಿ 9ನೇ ತರಗತಿಗೆ 6 ಹಾಗೂ 10ನೇ ತರಗತಿಗೆ 13, ಹಿರಿಯೂರು ತಾಲ್ಲೂಕಿನಲ್ಲಿ 9ನೇ ತರಗತಿಗೆ 5 ಹಾಗೂ 10ನೇ ತರಗತಿಗೆ 22, ಹೊಳಲ್ಕೆರೆ ತಾಲ್ಲೂಕಿನಲ್ಲಿ 9ನೇ ತರಗತಿಗೆ 15 ಹಾಗೂ 10ನೇ ತರಗತಿಗೆ 27,ಹೊಸದುರ್ಗ ತಾಲ್ಲೂಕಿನಲ್ಲಿ 9ನೇ ತರಗತಿಗೆ 18 ಹಾಗೂ 10ನೇತರಗತಿಗೆ 19 ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 9ನೇ ತರಗತಿಗೆ 2 ಹಾಗೂ 10ನೇ ತರಗತಿಗೆ 1 ಸ್ಥಾನ ಖಾಲಿಯಿದೆ.

ಅರ್ಹ ಅಭ್ಯರ್ಥಿಗಳು ತಮಗೆ ಸಮೀಪವಿರುವ ವಸತಿ ಶಾಲೆಗೆ ಭೇಟಿ ನೀಡಿ ನೇರ ಪ್ರವೇಶ ಪಡೆಯಬಹುದು. 2024-25ನೇ ಸಾಲಿನಲ್ಲಿ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಿ ಶೇ.75ಕ್ಕಿಂತ ಹೆಚ್ಚಿನ ಅಂಕಗಳೊAದಿಗೆ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಮೊಹಮ್ಮದ್ ಜಿಲಾನಿ ಖುರೇಷಿ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026