ಜುಲೈ 15 ರಂದು ನೇರ ನೇಮಕಾತಿ ಸಂದರ್ಶನ
ಚಿತ್ರದುರ್ಗ: ಚಿತ್ರದುರ್ಗ ನಗರದ ಸ್ಟೇಡಿಯಂ ರಸ್ತೆ ತಿರುವಿನ ಹಳೇ ವೈಶಾಲಿ ಗೇಟ್ ಹತ್ತಿರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜುಲೈ 15 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ನೇರ ನೇಮಕಾತಿ ಸಂದರ್ಶನ ನಡೆಯಲಿದೆ.
ವಿವಿಧ ಖಾಸಗಿ ಕಂಪನಿಗಳು ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಸೇರಿದಂತೆ ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ ಹಾಗೂ ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಉದ್ಯೋಗಕ್ಕೆ ಮಾಡಿಕೊಳ್ಳವರು.
ಆಸಕ್ತ ಅಭ್ಯರ್ಥಿಗಳು 5 ಬಯೋಡಾಟಾ ಪ್ರತಿಗಳು, ವಿದ್ಯಾರ್ಹತೆಯ ಜೆರಾಕ್ಸ್ ಪ್ರತಿ, ಅಗತ್ಯ ದಾಖಲೆಗಳು ಹಾಗೂ ಪೋಟೋಗಳೊಂದಿಗೆ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ, ಮೊಬೈಲ್ ಸಂಖ್ಯೆಗಳಾದ, 7022459064, 7019755147, 9945587060, ಹಾಗೂ 8105619020 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.