ಮೇ.16 ರಂದು ನೇರ ನೇಮಕಾತಿ ಸಂದರ್ಶನ
ಚಿತ್ರದುರ್ಗ: ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಮೇ.16ರಂದು ಬೆಳಿಗ್ಗೆ 10 ರಿಂದ 2 ರವರೆಗೆ ನೇರ ನೇಮಕಾತಿ ಸಂದರ್ಶನ ನಡೆಯಲಿದೆ.
ಈ ಮೇಳದಲ್ಲಿ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ, ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದು, ಅಭ್ಯರ್ಥಿಗಳು ಅಗತ್ಯ ದಾಖಲೆಗಳಾದ 5 ಬಯೋಡಾಟಾ ಪ್ರತಿಗಳು, ಫೋಟೋಸ್, ವಿದ್ಯಾರ್ಹತೆಯ ಜೆರಾಕ್ಸ್ ಪ್ರತಿಗಳೊಂದಿಗೆ ಭಾಗವಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರದ ಹಳೇ ವೈಶಾಲಿ ಗೇಟ್ ಹತ್ತಿರ, ಸ್ಟೇಡಿಯಂ ತಿರುವು, ಉದ್ಯೋಗ ವಿನಿಮಯ ಕೇಂದ್ರ ಕಚೇರಿ, ಚಿತ್ರದುರ್ಗ ದೂರವಾಣಿ ಸಂಖ್ಯೆ 7022459064, 9945587060, 8105619020 ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.