ಈ ವಿದ್ಯಾರ್ಹತೆಯ ಇರುವವರು ನ.30ರಂದು ನೇರ ನೇಮಕಾತಿ ಸಂದರ್ಶನ.!
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಇದೇ ನ.30ರಂದು ಶನಿವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ನಡೆಯಲಿದೆ.
ಸಂದರ್ಶನದಲ್ಲಿ ಮೂರಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪ್ಲೊಮಾ, ಐಟಿಐ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದು, ಅಭ್ಯರ್ಥಿಗಳು 5 ಬಯೋಡಾಟಾ ಪ್ರತಿಗಳು, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಹಾಗೂ ಫೋಟೊಗಳೊಂದಿಗೆ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಹಳೇ ವೈಶಾಲಿ ಗೇಟ್ ಹತ್ತಿರದ ಸ್ಟೇಡಿಯಂ ರಸ್ತೆಯಲ್ಲಿನ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 7022459064, 8105619020, 9945587060, 9964528212, 7019755147 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.