Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Belagavi

ಯಶಸ್ಸು ಸಾಧಿಸಲು ಶಿಸ್ತು ಮತ್ತು ಶ್ರದ್ಧೆ ಅವಶ್ಯ: ಡಾ. ಸರಜೂ ಕಾಟ್ಕರ್

ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದಿಂದ  ಡಾ. ಸರಜೂ ಕಾಟ್ಕರ್ ಅವರಿಗೆ ಸನ್ಮಾನ



ಬೆಳಗಾವಿ: ಜೀವನದಲ್ಲಿ ಯಶಸ್ಸು ಸಾಧಿಸಲು ಶಿಸ್ತು, ಶ್ರದ್ಧೆ ಮತ್ತು ನಿರಂತರ ಪರಿಶ್ರಮ ಅತ್ಯಂತ ಮಹತ್ವದ ಪಾತ್ರ ವಹಿಸುತ್ತವೆ ಎಂದು ಪ್ರತಿಷ್ಠಿತ ನೃಪತುಂಗ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ಡಾ. ಸರಜೂ ಕಾಟ್ಕರ್ ಅಭಿಪ್ರಾಯಪಟ್ಟರು.
ನಗರದ ಕೇಂದ್ರ ಗ್ರಂಥಾಲಯದಲ್ಲಿ ಗುರುವಾರ ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ಆಯೋಜಿಸಿದ್ದ  "ಬೆಳ್ಳಿ ಬೆಡಗು" ದತ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸಾಧನೆಯ ಹಾದಿಯಲ್ಲಿ ಎದುರಾಗುವ ಸವಾಲುಗಳನ್ನು ಧೈರ್ಯದಿಂದ ಎದುರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಯಾವುದೇ ಕಾರ್ಯವನ್ನು ಕೈಗೆತ್ತಿಕೊಂಡರೂ ಶ್ರದ್ಧೆ, ಪರಿಶ್ರಮ ಮತ್ತು ಸಮಯಪ್ರಜ್ಞೆಯಿಂದ ನಿರ್ವಹಿಸಿದಾಗ ಯಶಸ್ಸು ಗಳಿಸಲು ಸಾಧ್ಯ. ಶಿಸ್ತು ಜೀವನಕ್ಕೆ ಸರಿಯಾದ ದಿಕ್ಕು ನೀಡಿದರೆ, ಶ್ರದ್ಧೆ ಗುರಿ ತಲುಪಲು ಪ್ರೇರಣೆ ನೀಡುತ್ತದೆ. ಸೋಲು ಎದುರಾದಾಗ ನಿರಾಶರಾಗದೆ, ಅದನ್ನು ಅನುಭವವಾಗಿ ಸ್ವೀಕರಿಸಿ ಮುಂದಿನ ಪ್ರಯತ್ನಗಳಿಗೆ ಸಿದ್ಧರಾಗಬೇಕು. ಪ್ರತಿಯೊಬ್ಬರಲ್ಲಿಯೂ ಪ್ರತಿಭೆ ಮತ್ತು ಸಾಧಿಸುವ ಸಾಮರ್ಥ್ಯವಿದ್ದು, ಅದನ್ನು ಗುರುತಿಸಿ ಸೂಕ್ತ ದಿಕ್ಕಿನಲ್ಲಿ ಮುನ್ನಡೆದರೆ ಯಶಸ್ಸು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಜೀವನದಲ್ಲಿ ಉನ್ನತ ಸ್ಥಾನಕ್ಕೇರಲು ಕೇವಲ ಪ್ರತಿಭೆ ಸಾಕಾಗುವುದಿಲ್ಲ. ಶಿಸ್ತು, ಶ್ರದ್ಧೆ, ಪರಿಶ್ರಮ ಹಾಗೂ ನಿರಂತರ ಕಲಿಕೆಯ ಮನೋಭಾವವೂ ಅಗತ್ಯ. ಈ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ವೈಯಕ್ತಿಕ ಬೆಳವಣಿಗೆಯೊಂದಿಗೆ ಸಮಾಜಕ್ಕೂ ಕೊಡುಗೆ ನೀಡಲು ಸಾಧ್ಯ ಎಂದು ಹೇಳಿದರು.
ದತ್ತಿ ಕಾರ್ಯಕ್ರಮ ಹಾಗೂ ಕವನ ವಿಮರ್ಶೆ:- ಕಾರ್ಯಕ್ರಮದಲ್ಲಿ ಸುಮಿತ್ರಾ ಪ್ರಭುಲಿಂಗಯ್ಯ ಚರಂತಿಮಠ ದತ್ತಿ ನಿಧಿ, ಲಿಂ. ಬಸನಗೌಡ ಪಾಟೀಲ ಮೆಡ್ಲೇರಿ ದತ್ತಿ ನಿಧಿ, ಲಿಂ. ದುರದುಂಡೇಶ್ವರ ಸಿದ್ದಯ್ಯ ಮಲ್ಲಾಪುರ ದತ್ತಿ ನಿಧಿ ಹಾಗೂ ಲಿಂ. ಶಾಂತಾ ಕಬ್ಬೂರ ದತ್ತಿ ನಿಧಿಗಳ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಡಾ. ಸರಜೂ ಕಾಟ್ಕರ್ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಸಂಘದ ಸದಸ್ಯರಿಗಾಗಿ ಕವನ ವಿಮರ್ಶೆ ಸ್ಪರ್ಧೆಯನ್ನೂ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜನಂದಾ ಘಾರ್ಗಿ ವಹಿಸಿದ್ದರು. ದತ್ತಿ ದಾನಿಗಳಾದ ಡಾ. ಭಾರತಿ ಮಠದ, ಅನ್ನಪೂರ್ಣಾ ಅಗಡಿ ಹಾಗೂ ಸುಮಿತ್ರಾ ಮಲ್ಲಾಪುರ ವೇದಿಕೆಯಲ್ಲಿದ್ದರು.
ಈ ಸಂದರ್ಭದಲ್ಲಿ ಸುನೀತಾ ಸೊಲ್ಲಾಪುರೆ ಪ್ರಾರ್ಥಿಸಿದರು. ಸಂಘದ ಕಾರ್ಯದರ್ಶಿ ವಿದ್ಯಾ ಹುಂಡೇಕರ ಸ್ವಾಗತಿಸಿದರು. ಡಾ. ಭಾರತಿ ಮಠದ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಾದೇವಿ ಅಜ್ವಾನ ದತ್ತಿ ದಾನಿಗಳ ಪರಿಚಯ ಮಾಡಿಕೊಟ್ಟರು. ಡಾ. ನಿರ್ಮಲಾ ಬಟ್ಟಲ ಹಾಗೂ ಸರ್ವಮಂಗಳಾ ಅರಳಿಮಟ್ಟಿ ಅವರು ಡಾ. ಸರಜೂ ಕಾಟಕರ ಅವರ ಕವನಗಳನ್ನು ವಾಚಿಸಿದರು. ಆಶಾ ಯಮಕನಮರಡಿ ಹಾಗೂ ಆಶಾ ಸಂಸುದ್ದಿ ಕವನ ಗಾಯನ ಮಾಡಿದರು. ಸುಮಾ ಕಾಟಕರ, ಸಂಘದ ಮಾಜಿ ಅಧ್ಯಕ್ಷರಾದ ನೀಲಗಂಗಾ ಚರಂತಿಮಠ, ಸುಮಾ ಕಿತ್ತೂರ, ಸುನಂದಾ ಎಮ್ಮಿ, ಜ್ಯೋತಿ ಬದಾಮಿ ಹಾಗೂ ನೂತನ ಕುಲಕರ್ಣಿ  ನಿರೂಪಿಸಿ, ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ