ಬೆಳಗಾವಿ :
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಮಾನ್ಯತಾ ಕಾರ್ಡ್ ಹೊಂದಿರುವ ಹಿಂದುಳಿದ ವರ್ಗಗಳ ಪತ್ರಕರ್ತರಿಗೆ ಸರಕಾರ ಕೊಡಮಾಡಿದ ಲ್ಯಾಪ್ ಟಾಪ್, ಡಿಎಸ್‌ಎಲ್‌ಆರ್ ಕ್ಯಾಮೆರಾ ಒಳಗೊಂಡAತೆ ಮಾಧ್ಯಮ ಕಿಟ್ ಗಳನ್ನು ವಿತರಿಸಲಾಯಿತು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕರಾದ ಗುರುನಾಥ ಕಡಬೂರ ಅವರು ನಗರದ ವಾರ್ತಾ ಭವನದಲ್ಲಿ ಗುರುವಾರ (ಜೂ.೧೫) ಮಾಧ್ಯಮ ಕಿಟ್ ಗಳನ್ನು ವಿತರಿಸಿದರು.
ನಂತರ ಮಾತನಾಡಿದ ಅವರು, ಮಾಧ್ಯಮ ಪ್ರತಿನಿಧಿಗಳಿಗೆ ವೃತ್ತಿ ಕೌಶಲ ಹೆಚ್ಚಿಸಿಕೊಳ್ಳುವುದರ ಜತೆಗೆ ಪರಿಣಾಮಕಾರಿಯಾಗಿ ಕೆಲಸ ಮಾಡಲು ಅನುಕೂಲವಾಗುವಂತಹ ಪರಿಕರಗಳನ್ನು ಸರಕಾರ ನೀಡಿದೆ. ಅವುಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಇಲಾಖೆಯ ಸಿಬ್ಬಂದಿ ಅನಂತ ಪಪ್ಪು, ಎಂ.ಎಲ್ ಜಮಾದಾರ ಸೇರಿದಂತೆ ಅನೇಕ ಮಾಧ್ಯಮ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.