LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾ ಆಯುಷ್ ಇಲಾಖೆ ಅ.29 ರಂದು ರಾಷ್ಟ್ರೀಯ ಆಯುರ್ವೇದ ದಿನಾಚರಣೆ.


ಧಾರವಾಡ ಅಕ್ಟೋಬರ್ 24: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಆಯು ಇಲಾಖೆ ಇವರ ಸಹಯೋಗದಲ್ಲಿ 9 ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಅಕ್ಟೋಬರ್ 29 ರಂದು ಬೆಳಿಗ್ಗೆ 9 ಗಂಟೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಭಾಭವನದಲ್ಲಿ ಆಯೋಜಿಸಲಾಗಿದೆ.



ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು.

ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.



ಕರ್ನಾಟಕ ವಿಧಾನ ಪರಿಷತ್ನ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ, ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಅಧ್ಯಕ್ಷ ವಿನಯ ಕುಲಕರ್ಣಿ, ಶಾಸಕ ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ, ಶಾಸಕ ಹಾಗೂ ವಾಯವ್ಯ ಸಾರಿಗೆ ನಿಗಮದ ಅಧ್ಯಕ್ಷ ಭರಮಗೌಡ ಅಲಗೌಡ ಕಾಗೆ, ಶಾಸಕರು ಹಾಗೂ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜೆ.ಎನ್.ಗಣೇಶ ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸುವರು.



ಶಾಸಕರಾದ ಅರವಿಂದ ಚಂದ್ರಕಾಂತ ಬೆಲ್ಲದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.



ಮುಖ್ಯ ಅತಿಥಿಗಳಾಗಿ ಶಾಸಕರಾದ ಎನ್.ಎಚ್ ಕೋನರಡ್ಡಿ, ಎಸ್.ವ್ಹಿ.ಸಂಕನೂರ, ಪ್ರದೀಪ ಶೆಟ್ಟರ, ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ್, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ರಾಮಪ್ಪ ಕೃಷ್ಣಪ್ಪ ಬಡಿಗೇರ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕಿರ್ ಸನದಿ ಅವರು ಪಾಲ್ಗೋಳುವರು.



ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆಯ ಆಯುಕ್ತ ಶ್ರೀನಿವಾಸುಲು, ಜಿಲ್ಲಾಧಿಕಾರಿ ದಿವ್ಯ ಪ್ರಭು, ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶಶಿ ಪಾಟೀಲ ಅವರು ಭಾಗವಹಿಸುವರೆಂದು ಜಿಲ್ಲಾ ಆಯುಷ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.



**

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು