LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತುಂಗಭದ್ರ ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ನದಿಪಾತ್ರದ ಜನರು ಎಚ್ಚರವಹಿಸುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ





ಬಳ್ಳಾರಿ,ಜು30

ತುಂಗಭದ್ರಾ ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗಿದ್ದು, ಕಂಪ್ಲಿ ಗಂಗಾವತಿ ಮೇಲ್ಸೇತುವೆ ಮೇಲೆ ನೀರು ಹರಿಯುತ್ತಿರುವುದರಿಂದ ಮುಂಜಾಗ್ರತೆಗಾಗಿ ವಾಹನಗಳ ಸಂಚಾರ ಸ್ಥಗಿತ ಮತ್ತು ನದಿ ಭಾಗದಲ್ಲಿ ತೊಂದರೆಯಾಗದAತೆ ತುರ್ತು ಪರಿಸ್ಥಿತಿಗೆ ಬೋಟ್‌ಗಳ ವ್ಯವಸ್ಥೆಯನ್ನು ಮಾಡಲು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಂಗಳವಾರ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕಾಗಿದ್ದು, ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತಷ್ಟು ಹೆಚ್ಚಳವಾಗಿದ್ದು, ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗುತ್ತಿದೆ. ಜಲಾಶಯಗಳ ನೀರಿನ ಮಟ್ಟ, ಒಳ ಹರಿವು, ಹೊರ ಹರಿವು ಹೆಚ್ಚಾಗಿದ್ದು ಜಲಾಶಯದಲ್ಲಿ 105.788 ಟಿ.ಎಂ.ಸಿ ನೀರಿನ ಸಂಗ್ರಹಣಾ ಸಾಮರ್ಥ್ಯ ಹೊಂದಿದ್ದು, ಈಗಾಗಲೇ 80.001 ಟಿ.ಎಂ.ಸಿ ಭರ್ತಿಯಾಗಿದೆ. ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದ್ದು, ಕಂಪ್ಲಿ ಗಂಗಾವತಿ ಮೇಲ್ಸೇತುವೆ ಮುಳುಗಡೆಯಾಗಿದೆ. ಸೇತುವೆ ಮೇಲೆ ವಾಹನ ಸಂಚಾರವನ್ನು ಸ್ಥಗಿತ ಮಾಡಲಾಗಿದೆ. ಕಂಪ್ಲಿ ತಾಲ್ಲೂಕಿನ ತಹಶೀಲ್ದಾರರು, ಆರ್‌ಐ ಅಧಿಕಾರಿಗಳು ದೈನಂದಿನ ನೀರಿನ ಮಟ್ಟವನ್ನು ತಿಳಿದು ನದಿ ಪಾತ್ರದಲ್ಲಿರುವ ಸಾರ್ವಜನಿಕರಲ್ಲಿ ಎಚ್ಚರಿಕೆಯನ್ನು ನೀಡಬೇಕು ಎಂದು ತಿಳಿಸಿದರು.

ನದಿ ಪಾತ್ರದಲ್ಲಿರುವ ಜನರಲ್ಲಿ ಆರೋಗ್ಯ, ಊಟದ ವ್ಯವಸ್ಥೆ, ಮೂಲ ಸೌಕರ್ಯವನ್ನು ಕಲ್ಪಿಸಬೇಕು. ಜಿಲ್ಲೆಯಲ್ಲಿ ಹೆಚ್ಚು ಮಳೆಯಿಂದ ಶಾಲೆಗಳ ಮೇಲ್ಚವಾಣಿ ಹಾನಿಯಾಗಿದ್ದರೆ ಅದನ್ನು ಸರಿಪಡಿಸಿ ಮಾಹಿತಿ ನೀಡಬೇಕು. ಕಂಪ್ಲಿ ತಾಲ್ಲೂಕಿನಲ್ಲಿ ಒಂದು ವಾರದಿಂದ ಮಳೆ ಸುರಿತ್ತಿರುವುದರಿಂದ ಇಟಿಗಿ ಗ್ರಾಮದ ಹಳ್ಳದ ಮೇಲ್ಸೇತುವೆ ನೀರು ಹರಿಯುತ್ತಿದ್ದು, ಜನರಿಗೆ ಎಚ್ಚರಿಕೆಯನ್ನು ನೀಡಲು ಅಧಿಕಾರಿಗಳಿಗೆ ತಿಳಿಸಿದರು.

ಕೇಂದ್ರ ಸರ್ಕಾರದಿಂದ ರಸಗೊಬ್ಬರ ಹಂಚಿಕೆ ಮತ್ತು ಸರಬರಾಜು ಪ್ರಕ್ರಿಯೆ ಆರಂಭವಾಗಿದ್ದು, ಇದರಿಂದಾಗಿ ರಾಜ್ಯದಲ್ಲಿ ಯೂರಿಯಾ ರಸಗೊಬ್ಬರದ ಪ್ರಾರಂಬಿಕ ದಾಸ್ತಾನನ್ನು ಪರಿಗಣಿಸಿ, ಯೂರಿಯಾ ರಸಗೊಬ್ಬರದ ಕಡಿಮೆ ಹಂಚಿಕೆ ಮಾಡಿರುವುದು ಕೊರತೆಗೆ ಮೂಲ ಕಾರಣವಾಗಿದೆ. ರಸಗೊಬ್ಬರದ ಬಗ್ಗೆ ಸ್ಥಳೀಯ ರೈತರಿಂದ ಮಾಹಿತಿಯನ್ನು ತಿಳಿದುಕೊಳ್ಳಬೇಕು. ತಾಲ್ಲೂಕುವಾರು ತಹಶೀಲ್ದಾರರು ಮತ್ತು ರೈತ ಸಂಪರ್ಕ ಕೇಂದ್ರ ಅಧಿಕಾರಿಗಳು ರೈತರಿಗೆ ಹೋಲ್ ಸೇಲ್, ರಿಟೇಲ್ ಅಂಗಡಿಗಳಿ0ದ ತೊಂದರೆಯಾದರೆ ಕ್ರಮವಹಿಸಬೇಕು ಎಂದರು.

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಪಿ.ಪ್ರಮೋದ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟ ಅಧಿಕಾರಿಗಳು ಇತರರು ಉಪಸ್ಥಿತರಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು