ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ
ಚಿತ್ರದುರ್ಗ: ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮ ರೀತಿಯಲ್ಲಿ ತಲುಪಿಸಿರುವ ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಅಭಿನಂದನಾ ಸಭೆಯಲ್ಲಿ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ರಶ್ಮಿ ವಿ ಮಹೇಶ್ ಅವರು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024ರ ಪ್ರಶಸ್ತಿ ನೀಡಿ ಗೌರವಿಸಿದರು.
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಜನಸ್ನೇಹಿ ಹಾಗೂ ನಾಗರಿಕ ಸ್ನೇಹಿ ಸೇವೆಗಳನ್ನು ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ, ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ರೂಪಿಸಿದ್ದಾರೆ. ಈ ಎಲ್ಲಾ ಕೊಡುಗೆಗಳನ್ನು ಆಧರಿಸಿ, ಕಂದಾಯ ಇಲಾಖೆ ವತಿಯಿಂದ 2023-24ನೇ ಸಾಲಿಗೆ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.