Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bellary

ಚುನಾವಣಾ ಕಾರ್ಯಕ್ಕೆ ಸಹಕರಿಸಲು ಜಿಲ್ಲಾಧಿಕಾರಿಗಳ ಮನವಿ

ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ

 



ಕೊಪ್ಪಳ ಸೆಪ್ಟೆಂಬರ್ 25: ಭಾರತ ಚುನಾವಣಾ ಆಯೋಗವು ಸೆಪ್ಟೆಂಬರ್ 22 ರಂದು ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದ್ದು, ಅದರಂತೆ ಪ್ರತಿಯೊಂದು ರಾಜಕೀಯ ಪಕ್ಷಗಳು ಚುನಾವಣಾ ಕಾರ್ಯಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ.ಇಟ್ನಾಳ ಅವರು ಹೇಳಿದರು.
ಸೆ.23ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳೊಂದಿಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
 ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಸೆಪ್ಟೆಂಬರ್ 29ರ ಮಂಗಳವಾರದAದು ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ ಅಧಿಸೂಚನೆ ಪ್ರಕಟಗೊಳ್ಳಲಿದೆ. ಅಕ್ಟೋಬರ್ 6ರ ಮಂಗಳವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 7 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 9 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಅಕ್ಟೋಬರ್ 23ರ ಶುಕ್ರವಾರದಂದು ಬೆಳಿಗ್ಗೆ 8 ಗಂಟೆಯಿAದ ಸಂಜೆ 4 ಗಂಟೆವರೆಗೆ ಚುನಾವಣೆ ನಡೆಯಲಿದೆ. ಅಕ್ಟೋಬರ್ 27 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಅಕ್ಟೋಬರ್ 31 ರಂದು ನೀತಿ ಸಂಹಿತೆಯೊAದಿಗೆ ಚುನಾವಣಾ ಪ್ರಕ್ರಿಯೆ ಸಂಪೂರ್ಣ ಮುಕ್ತಾಯಗೊಳ್ಳಲಿದೆ ಎಂದು ಅವರು ವೇಳಾಪಟ್ಟಿ ಕುರಿತು ಮಾಹಿತಿ ನೀಡಿದರು.
 ಕೊಪ್ಪಳ ಜಿಲ್ಲೆಗೆ ಸಂಬAಧಿಸಿದAತೆ ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯಲ್ಲಿ 1805 ಪುರುಷ ಮತದಾರರು ಹಾಗೂ 857 ಮಹಿಳಾ ಮತದಾರರು ಸೇರಿದಂತೆ ಒಟ್ಟು 2662 ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಅವರು ಮತದಾರರ ವಿವರಗಳನ್ನು ನೀಡಿದರು.
 ನಾಮಪತ್ರಗಳ ನಮೂನೆಗಳನ್ನು ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಚುನಾವಣಾ ಶಾಖೆಯಿಂದ ಪಡೆಯಬಹುದು. ಭರ್ತಿ ಮಾಡಿದ ನಾಮಪತ್ರಗಳನ್ನು ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಕಾನ್ಫರೆನ್ಸ್ ಹಾಲ್, ಜಿಲ್ಲಾಡಳಿತ ಭವನ, ಕಲಬುರಗಿಯಲ್ಲಿ ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 6 ರವರೆಗೆ ಬೆಳಿಗ್ಗೆ 11 ಗಂಟೆಯಿAದ ಸಂಜೆ 6 ಗಂಟೆಯವರೆಗೆ ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ ಸಲ್ಲಿಸಬಹುದಾಗಿದೆ. ಸ್ವೀಕೃತವಾದ ಎಲ್ಲ ನಾಮಪತ್ರಗಳನ್ನು ಅಕ್ಟೋಬರ್ 7 ರಂದು ಬೆಳಿಗ್ಗೆ 11 ಗಂಟೆಗೆ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಕಾನ್ಫರೆನ್ಸ್ ಹಾಲ್, ಜಿಲ್ಲಾಡಳಿತ ಭವನ, ಕಲಬುರಗಿಯಲ್ಲಿ ಪರಿಶೀಲನೆಗೆ ತೆಗೆದುಕೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಮಾದರಿ ನೀತಿ ಸಂಹಿತೆ: ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ ನಡೆಸಲು ಸೆ.22ರಿಂದ ಅಕ್ಟೋಬರ್ 31ರವರೆಗೆ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.
ಸಭೆಯಲ್ಲಿ ಚುನಾವಣಾ ತಹಶೀಲ್ದಾರ ರವಿಕುಮಾರ ವಸ್ತçದ, ಚುನಾವಣಾ ಶಾಖೆಯ ನಾಗರಾಜ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಕೃಷ್ಣಪ್ಪ ಎಂ.ಇಟ್ಟAಗಿ, ಬಿಜೆಪಿ ಪಕ್ಷದ ರಾಜು ಬಾಕಳೆ, ಬಿ.ಎಸ್.ಪಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಸ್. ಮೈಲಾರಪ್ಪ, ರವಿ ಹಿರೇಮನಿ ಸೇರಿದಂತೆ ಚುನಾವಣಾ ಶಾಖೆಯ ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ