Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

 

ಬೆಳಗಾವಿ :
ಪ್ರಸಕ್ತ ಸಾಲಿನ ಬೆಳಗಾವಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೆ. 25,26 ರಂದು ಹಮ್ಮಿಕೊಳ್ಳಲಾಗಿದೆ.

ಸೆ.25 ರಂದು ಅಥ್ಲೆಟಿಕ್ಸ್, ವಾಲಿಬಾಲ್, ಕಬಡ್ಡಿ, ಬಾಸ್ಕೇಟಬಾಲ್, ಕುಸ್ತಿ, ಶಟಲ್ ಬ್ಯಾಡ್ಮಿಂಟನ್, ಹಾಕಿ, ಈಜು (ಆಯ್ಕೆ), ನೆಟ್‌ಬಾಲ್ (ಆಯ್ಕೆ) ಹಾಗೂ ಸೆ. 26 ರಂದು ಖೋಖೋ, ಫುಟಬಾಲ್, ಬಾಲ್ ಬ್ಯಾಡ್ಮಿಂಟನ್, ಥ್ರೋಬಾಲ್, ಹ್ಯಾಂಡ್‌ಬಾಲ್, ಟೆನ್ನಿಸ್ (ಆಯ್ಕೆ), ಯೋಗ, ಟೇಬಲ್ ಟೆನ್ನಿಸ್ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಬಾಸ್ಕೇಟ್‌ಬಾಲ್, ಕುಸ್ತಿ, ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡಬಾಲ್, ಟೇಬಲ್ ಟೆನ್ನಿಸ್, ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳನ್ನು ನೇರವಾಗಿ ಜಿಲ್ಲಾ ಮಟ್ಟದಲ್ಲಿ ನಡೆಸಲಾಗುತ್ತಿದ್ದು, ತಂಡಗಳು ಜಿಲ್ಲಾ ಮಟ್ಟಕ್ಕೆ ನೇರವಾಗಿ ಭಾಗವಹಿಸಬಹುದಾಗಿದೆ. ಲಾನ್‌ಟೆನ್ನಿಸ್, ನೆಟ್‌ಬಾಲ್ ಹಾಗೂ ಈಜು ಕ್ರೀಡೆಗಳಿಗೆ ಜಿಲ್ಲಾ ಮಟ್ಟದಲ್ಲಿ ಆಯ್ಕೆಗಳನ್ನು ನಡೆಸಲಾಗುವುದು, ಭಾಗವಹಿಸುವ ಪುರುಷ ಮತ್ತು ಮಹಿಳೆಯರು ನೇರವಾಗಿ ಭಾಗವಹಿಸಬಹುದಾಗಿದೆ.
ನಿಯಮಗಳು
ತಾಲೂಕಾ ಮಟ್ಟದಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಮತ್ತು ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದವರು ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ, ಕ್ರೀಡಾಕೂಟದಲ್ಲಿ ರಕ್ಷಣಾ ಪಡೆ, ಅರೆರಕ್ಷಣಾ ಪಡೆಗೆ ಸೇರಿದ ಕ್ರೀಡಾಪಟುಗಳು ಭಾಗವಹಿಸಲು ಅರ್ಹರಲ್ಲ, ಬಾಸ್ಕೇಟ್‌ಬಾಲ್, ಕುಸ್ತಿ, ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡಬಾಲ್, ಟೇಬಲ್ ಟೆನ್ನಿಸ್, ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳನ್ನು ನೇರವಾಗಿ ಜಿಲ್ಲಾ ಮಟ್ಟದಲ್ಲಿ ಸಂಘಟಿಸಲಾಗುವುದು, ಲಾನ್‌ಟೆನ್ನಿಸ್, ನೆಟ್‌ಬಾಲ್ ಹಾಗೂ ಈಜು ಕ್ರೀಡೆಗಳಿಗೆ ಜಿಲ್ಲಾ ಮಟ್ಟದಲ್ಲಿ ಆಯ್ಕೆಗಳನ್ನು ನಡೆಸಲಾಗುವುದು, ನಿರ್ಣಾಯಕರ ನಿರ್ಣಯವೇ ಅಂತಿಮವಾಗಿರುತ್ತದೆ, ಕ್ರೀಡಾಕೂಟದಲ್ಲಿ ಅಸಭ್ಯವಾಗಿ ವರ್ತಿಸಿದ ಕ್ರೀಡಾಪಟು ಅಥವಾ ತಂಡಗಳನ್ನು ಅನರ್ಹಗೊಳಿಸಲಾಗುವುದು, ಭಾಗವಹಿಸುವ ಕ್ರೀಡಾಪಟುಗಳು ತಮ್ಮ ಬ್ಯಾಂಕ್ ಪಾಸ್‌ಬುಕ್ ಪ್ರತಿ ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ ೦೮೩೧-೨೯೫೦೩೦೬ ಗೆ ಸಂಪರ್ಕಿಸಬಹುದು ಎಂದು ಬೆಳಗಾವಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ