LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

21ನೇ ವಯಸ್ಸಿಗೆ ಐಪಿಎಸ್, 23ನೇ ವಯಸ್ಸಿಗೆ ಐಎಎಸ್ ಅಧಿಕಾರಿಯಾದ ದಿವ್ಯಾ ತನ್ವಾರ್

ಹರಿಯಾಣ : ಯುಪಿಎಸ್‌ಸಿ ಪರೀಕ್ಷೆ ಭಾರತದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾಗಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಅನೇಕ ಅಭ್ಯರ್ಥಿಗಳ ಕನಸಾಗಿರುತ್ತದೆ. ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಅಧಿಕಾರಿಗಳಾದವರ ಪಯಣ ಅನೇಕ ಆಕಾಂಕ್ಷಿಗಳಿಗೆ ಪ್ರೇರಣೆ ನೀಡುತ್ತದೆ. ಅಂತಹವರಲ್ಲಿ ಐಎಎಸ್ ಅಧಿಕಾರಿ ದಿವ್ಯಾ ತನ್ವಾರ್ ಕೂಡ ಒಬ್ಬರು.

ದಿವ್ಯಾ ತನ್ವಾರ್ ಅವರು ತಮ್ಮ 21ನೇ ವಯಸ್ಸಿನಲ್ಲಿ ಮೊದಲ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಕಿರಿಯ ಮಹಿಳಾ ಐಪಿಎಸ್ ಅಧಿಕಾರಿಯಾದರು. ನಂತರ ಅವರು ಮತ್ತೆ ಯುಪಿಎಸ್‌ಸಿ ಪರೀಕ್ಷೆ ಬರೆದು ಉತ್ತಮ ರ‍್ಯಾಂಕ್ ಗಳಿಸಿ, 23ನೇ ವಯಸ್ಸಿನಲ್ಲಿ ಐಎಎಸ್ ಅಧಿಕಾರಿಯಾದರು.

ದಿವ್ಯಾ ತನ್ವಾರ್ ಅವರು ಹರಿಯಾಣದ ನಿಂಬಿ ಎಂಬ ಸಣ್ಣ ಗ್ರಾಮದವರು. 2011 ರಲ್ಲಿ ತಂದೆಯ ಅಕಾಲಿಕ ಮರಣದಿಂದಾಗಿ ದಿವ್ಯಾ ಅವರ ಕುಟುಂಬವು ಆರ್ಥಿಕ ಸಂಕಷ್ಟಗಳನ್ನು ಎದುರಿಸಬೇಕಾಯಿತು. ದಿವ್ಯಾ ಮತ್ತು ಅವರ ಮೂವರು ಒಡಹುಟ್ಟಿದವರ ಶಿಕ್ಷಣಕ್ಕಾಗಿ ಅವರ ತಾಯಿ ಕಾರ್ಮಿಕರಾಗಿ ಕೆಲಸ ಮಾಡಿದರು.

ದಿವ್ಯಾ ತನ್ವಾರ್ ನವೋದಯ ವಿದ್ಯಾಲಯದಲ್ಲಿ ಅಧ್ಯಯನ ಮಾಡಿದರು. ಅವರು ಮಹೇಂದ್ರಗಢದ ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನದಲ್ಲಿ ಪದವಿ ಪಡೆದರು. ಪದವಿಯ ನಂತರ, ಅವರು ಯುಪಿಎಸ್‌ಸಿ ಪರೀಕ್ಷೆಗೆ ತಮ್ಮ ಸಿದ್ಧತೆಗಳನ್ನು ಪ್ರಾರಂಭಿಸಿದರು.

ದಿವ್ಯಾ ಅವರು ಯುಪಿಎಸ್‌ಸಿ ಪರೀಕ್ಷೆ ಬರೆಯಲು ಸ್ವಯಂ ಅಧ್ಯಯನ ನಡೆಸಿದರು. 21ನೇ ವಯಸ್ಸಿನಲ್ಲಿ, ಅವರು 2021 ರಲ್ಲಿ ತಮ್ಮ ಮೊದಲ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುತ್ತಾರೆ. ಅವರು 438ನೇ ರ‍್ಯಾಂಕ್ ಗಳಿಸಿ ದೇಶದ ಕಿರಿಯ ಮಹಿಳಾ ಐಪಿಎಸ್ ಅಧಿಕಾರಿಯಾಗುತ್ತಾರೆ.

ಬಳಿಕ ದಿವ್ಯಾ ಅವರು 2022 ರಲ್ಲಿ ಮತ್ತೆ ಯುಪಿಎಸ್‌ಸಿ ಪರೀಕ್ಷೆ ಬರೆಯುತ್ತಾರೆ. ಈ ಬಾರಿ ಅವರು 105ನೇ ಅಖಿಲ ಭಾರತ ರ‍್ಯಾಂಕ್ ಗಳಿಸುವ ಮೂಲಕ ಐಎಎಸ್ ಅಧಿಕಾರಿಯಾಗುತ್ತಾರೆ. ಪ್ರಸ್ತುತ, ಅವರು ಮಣಿಪುರ ಕೇಡರ್‌ನಲ್ಲಿ ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026