Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಒಕ್ಕಲಿಗ ಸಮುದಾಯಕ್ಕೆ ಅಪಮಾನ ಮಾಡಿರುವ ಸುಳ್ಳಿನ ಶೂರ ಡಿಕೆ ಶಿವಕುಮಾರ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಒಕ್ಕಲಿಗ ಸಮುದಾಯ ಮತ್ತು ಪೂಜ್ಯ ಸ್ವಾಮೀಜಿ ಅವರಿಗೆ ನಿಮ್ಮ ಸರಕಾರ ಮಾಡಿಬಿಟ್ಟ ಅಪಚಾರ ಮುಚ್ಚಿಟ್ಟುಕೊಳ್ಳಲು ಇನ್ನೊಬ್ಬರ ಮೇಲೆ ಕೆಸರೆರೆಚುತ್ತಿದ್ದೀರಿ, ಯಾಕೆ? ಎಂದು ಜೆಡಿಎಸ್ ಡಿಸಿಎಂ ವಿರುದ್ಧ ವಾಗ್ದಾಳಿ ಮಾಡಿದೆ.

ಪೂಜ್ಯ ಸ್ವಾಮೀಜಿ ಅವರ ಮೇಲೆ ನೀವು ಎಫ್ಐಆರ್ ಹಾಕಿದ್ದು ಈಗ ಸಮುದಾಯದ ಸಿಟ್ಟಿಗೆ ಕಾರಣವಾಗಿದೆ. ಒಕ್ಕಲಿಗರ ಆಕ್ರೋಶಕ್ಕೆ ನೀವು ಗುರಿಯಾಗಿದ್ದೀರಿ. ಬೀಸುವ ದೊಣ್ಣೆಯಿಂದ ಪಾರಾಗಲು ಜೆಡಿಎಸ್ ಬಗ್ಗೆ ಹೊಸ ಹುಳುಕು ಹುಡುಕುತ್ತಿದ್ದೀರಿ ಎಂದು ಜೆಡಿಎಸ್ ಆಕ್ಷೇಪ ವ್ಯಕ್ತಪಡಿಸಿದೆ.

ಜೆಡಿಎಸ್ ಸರ್ಕಾರವಿದ್ದಾಗ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಮೇಲೆ ಕೇಸು ಹಾಕಲಾಗಿತ್ತು ಎಂದು ಬಾಲಬುದ್ಧಿಯ ನೀವು ಬಡಬಡಿಸಿದ್ದೀರಿ! ಹಳೆಯ ವಿಷಯ ಕೆದಕಿದ ನಿಮಗೆ ಆ ಪ್ರಕರಣ ಏನು? ಅದು ಮುಂದೇನಾಯಿತು? ಎನ್ನುವ ಮಾಹಿತಿ ಇಲ್ಲವೇ?

ಆ ಪ್ರಕರಣಕ್ಕೂ ಜೆಡಿಎಸ್ ಪಕ್ಷಕ್ಕೂ ಸಂಬಂಧ ಏನು? ಮುಂದೆ ಆ ಪ್ರಕರಣ ರದ್ದಾಯಿತು, ನಿಮಗೆ ಗೊತ್ತಿಲ್ಲವೇ? ಎಂದು ಡಿಕೆ ಶಿವಕುಮಾರ್ ಅವರನ್ನ ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.

ಪೂಜ್ಯ ಸ್ವಾಮೀಜಿ ಅವರ ವಿರುದ್ಧ ನಿಮ್ಮ ಇಡೀ ಕರ್ನಾಟಕ ಕಾಂಗ್ರೆಸ್ ಸರ್ಕಾರ ತೊಡೆತಟ್ಟಿ ನಿಂತಿದೆ. ಸಚಿವರುಗಳೆಲ್ಲ ಅವರ ಮೇಲೆ ರಕ್ಕಸರಂತೆ ಮುಗಿಬಿದ್ದಿದ್ದಾರೆ. ಹೇಳಿಕೆಯ ಬಗ್ಗೆ ಪರಮಪೂಜ್ಯರು ವಿಷಾದ ವ್ಯಕ್ತಪಡಿಸಿದ ಮೇಲೆಯೂ ಅವರ ಮೇಲೆ ಸರ್ಕಾರ ಯಾರದೋ ನಿರ್ದಿಷ್ಟ ಚಿತಾವಣೆಗೆ ಒಳಗಾಗಿ ಕಾಲು ಕೆರೆದು ಜಗಳಕ್ಕೆ ನಿಂತಿದೆ ಹಾಗೂ ಒಕ್ಕಲಿಗ ಸಮುದಾಯದ ಬಗ್ಗೆ ಅಪಮಾನಕರವಾಗಿ ವರ್ತಿಸುತ್ತಿದೆ. ಓಲೈಕೆ ರಾಜಕೀಯ, ತುಷ್ಟೀಕರಣದ ಪರಾಕಾಷ್ಠೆ ಇದು. ಒಕ್ಕಲಿಗರಿಗೆ ಇದೆಲ್ಲಾ ಅರ್ಥವಾಗುತ್ತಿದೆ ಎಂದು ಜೆಡಿಎಸ್ ತಿಳಿಸಿದೆ.

ಒಕ್ಕಲಿಗ ವಿರೋಧಿ ಡಿಕೆಶಿಯವರೇ.. ನಿಮಗಿದು ತರವೇ? ಮಿಸ್ಟರ್ ಡಿಕೆಶಿಯವರೇ.. ಒಕ್ಕಲಿಗರ ಅಸ್ಮಿತೆಯನ್ನು ಕೆಣಕಿದ್ದೀರಿ.. ನಿಮ್ಮ ಸರ್ಕಾರ, ನಿಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಿಗೆ ಬುದ್ಧಿ ಹೇಳುವ ಕನಿಷ್ಠ ಧೈರ್ಯವನ್ನಾದರೂ ಮಾಡಿ. ಅಧಿಕಾರಕ್ಕಾಗಿ ಸಮುದಾಯದಿಂದ ಪೆನ್ನು ಪೇಪರ್ ಭಿಕ್ಷೆ ಬೇಡಿದ ನಿಮಗೆ ಈಗ ಸಮುದಾಯ ಕಾಲ ಕಸವಾಗಿದೆ. ಇದಕ್ಕೆ ನೀವು ಬೆಲೆ ತೆರುತ್ತೀರಿ ಎಂದು ಜೆಡಿಎಸ್ ಎಚ್ಚರಿಸಿದೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ