LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಂತ್ರಜ್ಞಾನದಿಂದ ದೇಶದ ಅಭಿವೃದ್ಧಿ ಸಾಧ್ಯ:ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು:  ತಂತ್ರಜ್ಞಾನದಿಂದ ದೇಶದ ಅಭಿವೃದ್ಧಿ ಸಾಧ್ಯ. ನಮ್ಮ ದೇಶದಲ್ಲಿರುವ ಜ್ಞಾನದ ಭಂಡಾರ ಪ್ರಪಂಚದಲ್ಲಿ ಎಲ್ಲೂ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಕುಮಾರ ಪಾರ್ಕ್ ಪಶ್ಚಿಮ ವ್ಯಾಪ್ತಿಯ ಕಿಯೋನಿಕ್ಸ್ ಸಂಸ್ಥೆಯ ಆವರಣದಲ್ಲಿ ಕಿಯೋನಿಕ್ಸ್ ಸಂಸ್ಥೆಯ ಇ-ಕಾಮರ್ಸ್ ಪೆÇೀರ್ಟಲ್ ಉದ್ಘಾಟಿಸಿ ಮಾತನಾಡಿದ ಅವರು, ಈ ಪೆÇೀರ್ಟಲ್ ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಯಗಳಲ್ಲಿನ ಇ-ಪೆÇ್ರಕ್ಯೂರ್‍ಮೆಂಟ್ ಪ್ರಕ್ರಿಯೆಯನ್ನು ಸುಲಭಗೊಳಿಸಲಿದೆ ಎಂದು ತಿಳಿಸಿದರು.

ನಾನು ಶಾಲೆಯಲ್ಲಿ ಓದುವಾಗ ಎಲೆಕ್ಟ್ರಾನಿಕ್ ಸಿಟಿ ಅಸ್ತಿತ್ವಕ್ಕೆ ಬಂದಿತು. ಕೇಂದ್ರದಲ್ಲಿ ಎಸ್.ಎಂ ಕೃಷ್ಣ ಅವರು ಹಾಗೂ ರಾಜ್ಯದಲ್ಲಿ ವೀರಪ್ಪ ಮೊಯ್ಲಿ ಕೈಗಾರಿಕಾ ಸಚಿವರಾಗಿದ್ದರು. ಎಲೆಕ್ಟ್ರಾನಿಕ್ ಸಿಟಿ ಬೆಳೆದು ಈಗ ಪ್ರಪಂಚವೇ ನಮ್ಮ ಬೆಂಗಳೂರನ್ನು ನೋಡುತ್ತಿದೆ. ನಮ್ಮ ರಾಜ್ಯ ತಂತ್ರಜ್ಞಾನದಲ್ಲಿ ಮುನ್ನಡೆ ಸಾಧಿಸಿದೆ ಎಂದು ತಿಳಿಸಿದರು.

ಕಿಯೋನಿಕ್ಸ್ ಸಂಸ್ಥೆ ಗ್ರಾಮೀಣ ಪ್ರದೇಶದ ಯುವಜನತೆಗೆ ತಂತ್ರಜ್ಞಾನ ಕುರಿತು ಶಿಕ್ಷಣ ನೀಡಿದೆ. ತಂತ್ರಜ್ಞಾನದಲ್ಲಿ ಮುನ್ನಡೆ ಸಾಧಿಸಿರುವ ಸಂಸ್ಥೆಯು ಎರಡು ವರ್ಷ ಮಂಕಾಗಿತ್ತು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಅವರ ತಂಡವು ಕಿಯೋನಿಕ್ಸ್ ಗೆ ಹೊಸ ರೂಪಕೊಟ್ಟಿದ್ದಾರೆ ಎಂದು ಶ್ಲಾಘಿಸಿದರು.

ಕಿಯೋನಿಕ್ಸ್ ಸಂಸ್ಥೆಯ ಅಧ್ಯಕ್ಷ ಶರತ್‍ಬಚ್ಚೇಗೌಡ ಮಾತನಾಡಿ ಕಿಯೋನಿಕ್ಸ್‍ನಲ್ಲಿದ್ದ ಲೋಪದೋಷಗಳನ್ನು ಸರಿಪಡಿಸಿ ಸುಮಾರು ಒಂದು ವರ್ಷದ ಸತತ ಪ್ರಯತ್ನದಿಂದ ಇಂದು ಕಿಯೊನಿಕ್ಸ್ ಸಂಸ್ಥೆಯ ಇ-ಕಾಮರ್ಸ್ ಪೆÇೀರ್ಟಲ್ ಉದ್ಘಾಟನೆಯಾಗಿದೆ.

ಕಂಪ್ಯೂಟರ್ ಆಧಾರಿತ ಆದೇಶ, ಪಾವತಿ, ವಿತರಣೆಯವರೆಗಿನ ಎಲ್ಲಾ ಹಂತಗಳು ಇ-ಕಾಮರ್ಸ್ ಪೆÇೀರ್ಟಲ್ ನಲ್ಲಿ ತರಲಾಗಿದೆ. ಇದರಿಂದ ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಯಗಳಲ್ಲಿನ ಇ-ಪೆÇ್ರಕ್ಯೂರ್‍ಮೆಂಟ್ ಪ್ರಕ್ರಿಯೆಯನ್ನು ಸುಲಭಗೊಳ್ಳುವುದರ ಜೊತೆಗೆ ಕೆಲಸ ವಿಳಂಬವಾಗುವುದು ತಪ್ಪುತ್ತದೆ. ತ್ವರಿತ, ಪಾರದರ್ಶಕ, ಕಾಗದ ರಹಿತ ಆಡಳಿತ ವ್ಯವಸ್ಥೆ ತರಲು ಸಹಕಾರಿಯಾಗಿದೆ. ಇ-ಕಾಮರ್ಸ್ ಬಟನ್ ಒತ್ತಿದರೆ ವಿತರಣೆಯಾಗುವವರೆಗೆ ಒಂದು ಪೆÇೀರ್ಟಲ್ ನಲ್ಲಿ ಎಲ್ಲಾ ವಿಷಯಗಳನ್ನು ಒಳಪಡಿಸಲಾಗಿದೆ. ಸಂಸ್ಥೆಯಲ್ಲಿನ ಜಡತ್ವ ಬಿಡಿಸುವ ಕೆಲಸವನ್ನು ಗ್ರಾಮೀಣಾಭಿವೃದ್ದಿ ಸಚಿವರು ಮಾಡಿದ್ದಾರೆ. ಸಚಿವರ ಮಾರ್ಗದರ್ಶನದಿಂದ ಸಂಸ್ಥೆಯ ಲೋಪದೋಷಗಳನ್ನು ಸರಿಪಡಿಸಲಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕಿಯೋನಿಕ್ಸ್ ಸಂಸ್ಥೆಯ ಸಾಧನೆ ಕುರಿತ ವಿಡಿಯೋ ಹಾಗೂ ಬ್ರೊಚರ್ ಅನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅನಾವರಣಗೊಳಿಸಿದರು.

ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕ ಪವನಕುಮಾರ್ ಮಾಲಪಾಟಿ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ, ಐಟಿಬಿಟಿ ಕಾರ್ಯದರ್ಶಿ ಏಕ್‍ರೂಪ್ ಕೌರ್ ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ