Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಶೋಭಾ ಕರಂದ್ಲಾಜೆ ಹೇಳಿಕೆಗೆ ಟಾಂಗ್ ನೀಡಿದ ಡಿ.ಕೆ. ಶಿವಕುಮಾರ್

 

 

 

ಶೋಭಾ ಕರಂದ್ಲಾಜೆ ಹೇಳಿಕೆಗೆ ಟಾಂಗ್ ನೀಡಿದ ಡಿ.ಕೆ. ಶಿವಕುಮಾರ್

15 ಲಕ್ಷ ಹಾಕುತ್ತೇವೆ ಎಂದಾಗ ಮಿದುಳು ಇರಲಿಲ್ಲವೇ?

 

ಸುದ್ದಿಮೂಲ ವಾರ್ತೆ

ಬೆಂಗಳೂರು, ಜೂ.22: ನಾವು ಜನರಿಗೆ ಕೊಟ್ಟಿರುವ ಮಾತು ಉಳಿಸಿಕೊಳ್ಳುತ್ತೇವೆ. ವಿರೋಧ ಪಕ್ಷಗಳು ಬಹಳ ಟೀಕೆ ಮಾಡುತ್ತಿವೆ, ಮಾಡಲಿ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದು, ನಾವು ಪುಗಸಟ್ಟೆ ಅಕ್ಕಿ ಕೇಳುತ್ತಿಲ್ಲ. ಅಕ್ಕಿ ಪೂರೈಕೆಗೆ ನಮ್ಮ ಸರ್ಕಾರ ಬೇರೆ ರಾಜ್ಯಗಳ ಜತೆ ಸಂಪರ್ಕದಲ್ಲಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಈ ಯೋಜನೆ ಘೋಷಣೆ ಮಾಡುವ ಮುನ್ನ ಕಾಂಗ್ರೆಸ್ ಮುಖಂಡರಿಗೆ ಮಿದುಳು ಇರಲಿಲ್ಲವೇ ಎಂದು ಕೇಳಿದ್ದಾರೆ. ವಿದೇಶದಿಂದ ಕಪ್ಪುಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಹಾಕುತ್ತೇವೆ, ರೈತರ ಆದಾಯ ಡಬಲ್ ಮಾಡುತ್ತೇವೆ, ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದಾಗ ಅವರ ತಲೆಯಲ್ಲಿ ಮಿದುಳು ಇರಲಿಲ್ಲವೇ? ಎಂದು ಪ್ರಶ್ನಿಸಿದರು.

ನಮ್ಮ ಪಕ್ಷ ಅವರ ಪಕ್ಷಕ್ಕಿಂತ ವಿಭಿನ್ನವಾಗಿದೆ. ಅವರು ನಾಲ್ಕು ವರ್ಷ ಆಡಳಿತ ಮಾಡಿದರೂ ಅವರ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆ ಈಡೇರಿಸಲಿಲ್ಲ. 1 ಲಕ್ಷವರೆಗಿನ ರೈತರ ಸಾಲಮನ್ನಾ ಮಾಡುತ್ತೇವೆ ಎಂದಿದ್ದರು ಆದರೆ ಮಾಡಲಿಲ್ಲ. ನಾವು ಘೋ,ಣೆ ಮಾಡಿರುವ ಯೋಜನೆ ಜಾರಿಗೆ ಮುಂದಾಗಿದ್ದೇವೆ. ನಮಗೆ ಬಡವರ ಬಗ್ಗೆ ಅಷ್ಟಾದರೂ ಕಾಳಜಿ ಇದೆ. ಅವರು ತಾಳ್ಮೆಯಿಂದ ಇದ್ದರೆ ಉತ್ತಮ.

ಕೇಂದ್ರ ಸರ್ಕಾರ ಸಹಕಾರ ನೀಡದಿದ್ದರೆ ಮುಂದಿನ ಆಯ್ಕೆ ಏನು ಎಂದು ಕೇಳಿದಾಗ, ‘ಮುಖ್ಯಮಂತ್ರಿಗಳು ಹಾಗೂ ಸಚಿವರು ಚರ್ಚೆ ಮಾಡುತ್ತಿದ್ದಾರೆ. ಸ್ವಲ್ಪ ತಡವಾದರೂ ನಾವು ಈ ಯೋಜನೆ ಜಾರಿ ಮಾಡಿಯೇ ಮಾಡುತ್ತೇವೆ. ಆರಂಭದಲ್ಲಿ ಎಫ್ ಸಿಐ ಅಕ್ಕಿ ನೀಡುವುದಾಗಿ ತಿಳಿಸಿತ್ತು. ಆದರೆ ನಂತರ ತಮ್ಮ ನೀತಿ ಬದಲಿಸಿರುವುದಾಗಿ ತಿಳಿಸಿದೆ. ಅವರಿಗೆ ರಾಜಕಾರಣವೇ ಮುಖ್ಯವಾಗಿದೆ’ ಎಂದು ತಿಳಿಸಿದರು.

ಯೋಜನೆ ಘೋಷಣೆ ಮಾಡುವಾಗ ಜ್ಞಾನ ಇರಲಿಲ್ಲವೇ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ‘ನಮಗೆ ಜ್ಞಾನ ಇರಲಿಲ್ಲ. ಕುಮಾರಣ್ಣನಿಗೆ ಜ್ಞಾನ ಇದೆಯಲ್ಲಾ, ಅಷ್ಟು ಸಾಕು’ ಎಂದು ತಿಳಿಸಿದರು.

ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವ ಪಿಯೂಶ್ ಗೋಯಲ್ ಅವರ ಭೇಟಿ ವಿಚಾರವಾಗಿ ಕೇಳಿದಾಗ, ‘ನಾನು ಈ ವಿಚಾರವಾಗಿ ಪ್ರತಿಕ್ರಿಯೆ ನೀಡುವುದಿಲ್ಲ. ಮುಖ್ಯಮಂತ್ರಿಗಳು ಹಾಗೂ ಆಹಾರ ಸಚಿವರು ಪ್ರತಿಕ್ರಿಯೆ ನೀಡುತ್ತಾರೆ. ಸಿಎಂ ಹಾಗೂ ಸಚಿವರು ಯಾರನ್ನು ಸಂಪರ್ಕ ಮಾಡಿದ್ದಾರೆ ಗೊತ್ತಿಲ್ಲ. ನಾನು ದೆಹಲಿಗೆ ಹೋಗಿಲ್ಲ. ನಾನು ಹೋಗುವ ಸಮಯ ಬಂದಾಗ ಹೋಗುತ್ತೇನೆ’ ಎಂದು ತಿಳಿಸಿದರು.

ಮೊದಲ ಬಾರಿಗೆ ಪ್ರಧಾನಮಂತ್ರಿಗಳು ವಿದೇಶದಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಬಗ್ಗೆ ಕೇಳಿದಾಗ, ‘ಬಹಳ ಸಂತೋಷ, ಈಗಲಾದರೂ ಪ್ರಧಾನಮಂತ್ರಿಗಳು ನಮ್ಮ ದೇಶದ ಮಾಧ್ಯಮಗಳ ಬಳಿ ಅಲ್ಲದಿದ್ದರೂ ವಿದೇಶಿ ಮಾಧ್ಯಮಗಳ ಬಳಿ ಮಾತನಾಡಿದ್ದಾರೆ. ನೀವು ಖುಷಿಪಡಿ’ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ