LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಬೆಂಗಳೂರು ಅಭಿವೃದ್ಧಿಗೆ ಬಿಜೆಪಿ ಅಡ್ಡಿ' - ಡಿ.ಕೆ. ಸುರೇಶ್ ಆಕ್ರೋಶ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಬೆಂಗಳೂರಿನ ಅಭಿವೃದ್ಧಿ ಆಗಬಾರದು ಎಂದು ಬಿಜೆಪಿ ಕುತಂತ್ರ ನಡೆಸುತ್ತಿದೆ, ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಜೆಪಿಯವರಿಗೆ ಬೆಂಗಳೂರಿನ ಅಭಿವೃದ್ಧಿ ಬೇಡವಾಗಿದೆ. ಡಿ.ಕೆ. ಶಿವಕುಮಾರ್ ಸಂಚಾರ ದಟ್ಟಣೆಗೆ ಶಾಶ್ವತ ಪರಿಹಾರ ನೀಡಲು ಮುಂದಾಗಿದ್ದರೆ, ಅದನ್ನು ವಿರೋಧಿಸುತ್ತಾ ಅಸೂಯೆ ವ್ಯಕ್ತಪಡಿಸುತ್ತಿದ್ದಾರೆ,” ಎಂದು ಟೀಕಿಸಿದರು. ಅವರು ಮುಂದುವರಿಸಿ, “ಬಿಜೆಪಿ ನಾಯಕರು ಟನಲ್‌ ರಸ್ತೆ ಬದಲು ಸಾರ್ವಜನಿಕರು ಸಮೂಹ ಸಾರಿಗೆ ಬಳಸಲಿ ಎಂದು ಹೇಳುತ್ತಾರೆ. ಹಾಗಾದರೆ ಸಂಸದ ತೇಜಸ್ವಿ ಸೂರ್ಯ ಮೊದಲು ತಮ್ಮ ಪಕ್ಷದ ನಾಯಕರು, ಕಾರ್ಯಕರ್ತರಿಗೆ ಕಾರು ಖರೀದಿ ಮಾಡಬೇಡಿ ಎಂದು ಕರೆ ನೀಡಲಿ,” ಎಂದು ಕಿಡಿಕಾರಿದರು.

ಡಿ.ಕೆ. ಸುರೇಶ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ನಿಲುವಿನ ಮೇಲೂ ಟೀಕೆ ಮಾಡಿದ್ದಾರೆ. “ಪ್ರಧಾನಿ ಮೋದಿ ಟನಲ್‌ ರಸ್ತೆ ಮಾಡಿದರೆ ಅದನ್ನು ಚಮತ್ಕಾರ ಎನ್ನುವವರು, ಕಾಂಗ್ರೆಸ್‌ ಸರ್ಕಾರ ಮಾಡಿದರೆ ಬಲಾತ್ಕಾರ ಎಂದು ಹೇಳುತ್ತಾರೆ. ಮುಂಬೈನಲ್ಲಿ ಟನಲ್‌ ರಸ್ತೆ ಮಾಡಲಾಗಿದೆ, ಅದರ ಬಗ್ಗೆ ಮಾತನಾಡುವುದಿಲ್ಲ,” ಎಂದು ವ್ಯಂಗ್ಯವಾಡಿದರು. “ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಷಡ್ಯಂತ್ರ ಮಾಡಲಾಗುತ್ತಿದೆ. ಸಿಎಂ ಹಾಗೂ ಡಿಸಿಎಂ ಸಂಚಾರ ದಟ್ಟಣೆಗೆ ಪರಿಹಾರ ನೀಡಲು ಹೊರಟರೆ, ಅಸೂಯೆಯಿಂದ ವಿರೋಧಿಸುತ್ತಿದ್ದಾರೆ,” ಎಂದು ಆರೋಪಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026