Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Dharwad

*ಕುಡಿಯುವ ನೀರನ್ನು ಕೃಷಿಗೆ ಬಳಸಬೇಡಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್.


*ಧಾರವಾಡ  ನೀರನ್ನು ಸಂರಕ್ಷಿಸಿದರೆ, ಜೀವಸಂಕುಲವನ್ನು ಸಂರಕ್ಷಿಸಿದಂತೆ. ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಡಿಯುವ ನೀರನ್ನು ಕೃಷಿ ಚಟುವಟಿಕೆಗಳಿಗೆ ಬಳಸದೆ, ಮನೆಗಳಲ್ಲಿ ಮಿತವಾಗಿ ಬಳಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದರು.
 ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಸಂಗ್ರಹಣೆ ಹಾಗೂ ಬೆಳೆ ಪರಿಹಾರ ಕುರಿತು ಸಭೆ ಜರುಗಿಸಿ, ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಗುಣಮಟ್ಟವನ್ನು ಅಧಿಕಾರಿಗಳು ಪ್ರತಿ 15 ದಿನಗಳಿಗೊಮ್ಮೆ ಪರಿಶೀಲಿಸಬೇಕು. ಜಾನುವಾರುಗಳಿಗೆ ನೀರಿನ ಕೊರತೆಯಾಗದಂತೆ ನೀರಿನ ತೊಟ್ಟಿಗಳನ್ನು ತುಂಬಿಸಬೇಕು. ಸಾರ್ವಜನಿಕರು ಕುಡಿಯುವ ನೀರನ್ನು ಮಿತವಾಗಿ ಬಳಸಬೇಕು ಹಾಗೂ ನಲ್ಲಿಗಳನ್ನು ಅನಗತ್ಯವಾಗಿ ತೆರೆದಿಡಬಾರದು ಎಂದು ಸೂಚಿಸಿದರು.
ನಗರ ಮತ್ತು ಗ್ರಾಮೀಣ ಪ್ರದೇಶಗಳ ಜನರಿಗೆ ನೀರಿನ ಸಂರಕ್ಷಣೆ ಹಾಗೂ ಸುರಕ್ಷಿತ ಬಳಕೆಯ ಕುರಿತು ಜಾಗೃತಿ ಮೂಡಿಸಲು ಫೆÇೀನ್ ಕರೆಗಳ ಮೂಲಕ ಧ್ವನಿ ಸಂದೇಶಗಳನ್ನು ಕಳುಹಿಸಲಾಗುವುದು ಎಂದು ತಿಳಿಸಿದರು.
ವಿದ್ಯುತ್ ಕಿಡಿಯಿಂದಾಗಿ 10 ರೈತರ ಕಬ್ಬು ಬೆಳೆ ಸುಟ್ಟುಹೋಗಿರುವ ಕುರಿತು ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಎರಡು-ಮೂರು ದಿನಗಳೊಳಗೆ ಪರಿಹಾರ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
*ಕುಡಿಯುವ ನೀರಿನ ಸಮಸ್ಯೆಗಳಿಗೆ ಕೈಗೊಂಡ ಕ್ರಮಗಳ ವಿವರ:* ಪ್ರಸ್ತುತ ಜಿಲ್ಲೆಯ 3 ತಾಲ್ಲೂಕಿನ ಗ್ರಾಮೀಣ ಪ್ರದೇಶದ 17 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು, 19 ಖಾಸಗಿ ಕೊಳವೆಬಾವಿ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ಜಿಲ್ಲೆಯಲ್ಲಿ ಟ್ಯಾಂಕರ ಮೂಲಕ ನೀರು ಸರಬರಾಜು ಮಾಡುತ್ತಿಲ್ಲಾ.
ನವಲಗುಂದ, ಅಣ್ಣಿಗೇರಿ, ಹುಬ್ಬಳ್ಳಿ ಹಾಗೂ ಕುಂದಗೋಳ ತಾಲ್ಲೂಕುಗಳಲ್ಲಿ ಮಲಪ್ರಭಜಲಾಶಯದಿಂದ ಕಾಲುವೆಗಳ ಮುಖಾಂತರ 55 ಕುಡಿಯುವ ನೀರಿನ ಕೆರೆಗಳನ್ನು ಅಗಸ್ಟ್ ತಿಂಗಳಿನಲ್ಲಿ ಭರ್ತಿ ಮಾಡಿಕೊಂಡಿದ್ದು ನವೆಂಬರ್ ಅಂತ್ಯದವರೆಗೆ ನಿರ್ವಹಣೆ ಮಾಡಬಹುದಾಗಿರುತ್ತದೆ.
ಧಾರವಾಡ ಜಿಲ್ಲೆಯ 05 ಸ್ಥಳೀಯ ಸಂಸ್ಥೆಗಳಲ್ಲಿರುವ 100 ವಾರ್ಡ್‍ಗಳಿದ್ದು, 100 ವಾರ್ಡ್‍ಗಳಲ್ಲಿ ಪ್ರತಿ ದಿನ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ.
ಹುಬ್ಬಳ್ಳಿ-ಧಾರವಾಡ ಮಹಾನಗರದ ವ್ಯಾಪ್ತಿಯಲ್ಲಿ 82 ವಾರ್ಡ್‍ಗಳಿದ್ದು, ಅದರಲ್ಲಿ 13 ವಾರ್ಡ್‍ಗಳಲ್ಲಿ 24*7 ನೀರು ಪೆÇರೈಕೆ ಮಾಡಲಾಗುತ್ತಿದ್ದು, ಉಳಿದ ವಾರ್ಡ್‍ಗಳಲ್ಲಿ 2 ರಿಂದ 6 ದಿನಗಳಿಗೊಮ್ಮ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ.
ಕುಡಿಯುವ ನೀರಿನ ಸಮಸ್ಯೆ ಕುರಿತು ಸಾರ್ವಜನಿಕರ ಅನುಕೂಲಕ್ಕಾಗಿ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ದೂರುಗಳು ಸ್ವೀಕೃತವಾದ ತಕ್ಷಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಧಾರವಾಡ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಯ 22,862 ಹೆಕ್ಟರ್ ಗುರಿ ಇದ್ದು, ಪ್ರಸ್ತುತ 17,370 ಹೆಕ್ಟರ್ ಬಿತ್ತನೆಯಾಗಿದ್ದು ಶೇ. 76 ರಷ್ಟು ಸಾಧನೆಯಾಗಿರುತ್ತದೆ. ಸರ್ಕಾರವು ಧಾರವಾಡ ಜಿಲ್ಲೆಯ (08) ತಾಲ್ಲೂಕುಗಳನ್ನು ತೀವ್ರತರ ಬರಪೀಡಿತ ತಾಲ್ಲೂಕು ಎಂದು ಘೋಷಣೆಯನ್ನು ಮಾಡಿದ್ದು, 8 ತಾಲ್ಲೂಕುಗಳಲ್ಲಿ ಕೃಷಿ ಬೆಳೆ ಅಂದಾಜು 2.71 ಲಕ್ಷ ಹೆಕ್ಟರ್, ತೋಟಗಾರಿಕೆ ಬೆಳೆ ಅಂದಾಜು 0.17 ಲಕ್ಷ ಹೆಕ್ಟರ್ ಒಟ್ಟು ಅಂದಾಜು 2.88 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಅಂದಾಜು 1.88 ಲಕ್ಷ ರೈತರು ಹಾಗೂ ರೂ. 271.17 ಕೋಟಿಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆಯ 1,40,340 ಅರ್ಜಿ ಸ್ವೀಕರಿಸಲಾಗಿದೆ ಹಾಗೂ 1,30,371 ಹೆಕ್ಟರ್ ಪ್ರದೇಶದಲ್ಲಿ ಇಟಿಡಿoಟಟmeಟಿಣ ಆಗಿರುತ್ತದೆ ಎಂದರು. 
*ಮೇವಿನ ಲಭ್ಯತೆ:* ಧಾರವಾಡ ಜಿಲ್ಲೆಯಲ್ಲಿ 1,84,037 ದೊಡ್ಡ ಜಾನುವಾರ ಹಾಗೂ 1,83,524 ಸಣ್ಣ ಜಾನುವಾರುಗಳಿದ್ದು, ಸದರಿ ಜಾನುವಾರುಗಳಿಗೆ 2,78,917 ಟನ್ ಗಳಷ್ಟು ಮೇವಿನ ಲಭ್ಯತೆ ಇದ್ದು, ಮುಂದಿನ 33 ವಾರಗಳನ್ನು ಮೇವು ಸಾಕಾಗುತ್ತದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಲ್ಲಿ 07 ಮೇವು ಬ್ಯಾಂಕುಗಳನ್ನು ತೆರೆಯಲು ಸ್ಥಳವನ್ನು ಗುರುತಿಸಲಾಗಿದೆ.
ಸಭೆಯಲ್ಲಿ ಉಪವಿಭಾಗಾಧಿಕಾರಿ ಪ್ರಭಾವತಿ ಪಕೀರಪುರ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜಿನೀಯರ ಜಗದೀಶ ಪಾಟೀಲ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಕೆ.ಸಿ. ಭದ್ರಣ್ಣವರ, ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ಎಲ್ಲ ತಾಲೂಕಿನ ತಹಶೀಲ್ದಾರರು ಸೇರಿದಂತೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಪೊಲೀಸ್ ಇಲಾಖೆ, ಹೆಸ್ಕಾಂ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ