Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಇಂಡಿಯಾ ಪ್ರಧಾನಿ ಅಭ್ಯರ್ಥಿ ಯಾರು ಗೊತ್ತೇ ?

 

ಪಾಟ್ನಾ :
ವಿರೋಧ ಪಕ್ಷಗಳ ಒಕ್ಕೂಟ 'ಇಂಡಿಯಾ'ದ ಪ್ರಧಾನಿ ಅಭ್ಯರ್ಥಿ ಯಾರು ಎಂಬ ಚರ್ಚೆ ತುಸು ಜೋರಾಗಿದೆ.

2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಒಗ್ಗಟ್ಟಾಗಿರುವ ವಿಪಕ್ಷಗಳು ಇಂಡಿಯಾ ಮೈತ್ರಿಕೂಟ ರಚಿಸಿದೆ.
ಇದೀಗ ಈ ಮೈತ್ರಿಕೂಟದಲ್ಲಿ ಪ್ರಧಾನಿ ಅಭ್ಯರ್ಥಿಗಾಗಿ ಕಸರತ್ತು ಶುರುವಾಗಿದೆ. ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ ಎಂದು ಕಾಂಗ್ರೆಸ್ ಬಾಯ್ಬಿಟ್ಟು ಹೇಳಿಲ್ಲ. ಆದರೆ ತೆರಮರೆಯಲ್ಲಿ ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲು ಕಸರತ್ತು ನಡೆಸುತ್ತಿದೆ. ಇತ್ತ ಆಮ್ ಆದ್ಮಿ ಪಾರ್ಟಿ ನಾಯಕರು ಅರವಿಂದ್ ಕೇಜ್ರಿವಾಲ್ ಹೆಸರು ಪ್ರಸ್ತಾಪಿಸಿದ್ದಾರೆ. ಇದರ ನಡುವೆ ಮಮತಾ ಬ್ಯಾನರ್ಜಿ ಸೇರಿದಂತೆ ಇತರ ಕೆಲ ನಾಯಕರ ಹೆಸರು ಕೇಳಿಬರುತ್ತಿದೆ. ಈ ಪೈಕಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೆಸರು ಮುಂಚೂಣಿಯಲ್ಲಿದೆ. ಈ ಬೆಳವಣಿಗೆ ನಡುವೆ ಜೆಡಿಯು ಮಹತ್ವದ ಘೋಷಣೆ ಮಾಡಿದೆ. ನಿತೀಶ್ ಕುಮಾರ್ ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಎಂದು ಜೆಡಿಯು ನಾಯಕ ಮಹೇಶ್ವರ ಹಜಾರಿ ಘೋಷಿಸಿದ್ದಾರೆ.

ಇಂಡಿಯಾ ಮೈತ್ರಿಕೂಟದಲ್ಲಿ ಪ್ರಧಾನಿ ಅಭ್ಯರ್ಥಿಯಾಗಲು ನಿತೀಶ್ ಕುಮಾರ್ ಮಾತ್ರ ಅರ್ಹರಾಗಿದ್ದಾರೆ. ಇತರೆ ನಾಯಕರಿಗೆ ಹೋಲಿಸಿದರೆ, ಮೋದಿಗೆ ಸರಿಸಮಾನಾಗಿ ನಿಲ್ಲಬಲ್ಲ ಏಕೈಕ ನಾಯಕ ನಿತೀಶ್ ಕುಮಾರ್. ಶೀಘ್ರದಲ್ಲೇ ಇಂಡಿಯಾ ಮೈತ್ರಿಕೂಟ ನಿತೀಶ್ ಕುಮಾರ್ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲಿದೆ ಎಂದು ಮಹೇಶ್ವರ್ ಹಜಾರಿ ಹೇಳಿದ್ದಾರೆ.

 

ಇಂಡಿಯಾ ಮೈತ್ರಿಕೂಟದಲ್ಲಿ ಪ್ರಧಾನಿ ಅಭ್ಯರ್ಥಿಯಾಗಲು ನಿತೀಶ್ ಕುಮಾರ್‌ಗಿಂತ ಉತ್ತಮ ನಾಯಕ ಮತ್ತೊಬ್ಬರಿಲ್ಲ. 18 ವರ್ಷದಿಂದ ಬಿಹಾರದಲ್ಲಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. 5 ಬಾರಿ ಕೇಂದ್ರದಲ್ಲಿ ಸಚಿವರಾಗಿ ಕೆಲಸ ಮಾಡಿದ ಅನುಭವವಿದೆ. ರಾಮ್ ಮನೋಹರ್ ಲೋಹಿಯಾ ಅವರ ಬಳಿಕ ಭಾರತದಲ್ಲಿ ನಿಂತಿರುವ ಸಾಮಾಜಿಕ ಹೋರಾಟಗಾರ ಎಂದರೆ ನಿತೀಶ್ ಕುಮಾರ್ ಎಂದು ಮಹೇಶ್ವರ ಹಜಾರಿ ಹೇಳಿದ್ದಾರೆ.

ಜೆಡಿಯು ನಾಯಕನ ಈ ಹೇಳಿಕೆಯಿಂದ ಇಂಡಿಯಾ ಮೈತ್ರಿಕೂಟದಲ್ಲಿ ಬಿರುಕು ಮೂಡಿದೆ. ಈ ಹೇಳಿಕೆಯನ್ನು ನಿತೀಶ್ ಕುಮಾರ್ ಅವರೇ ಹೇಳಿಸಿದ್ದಾರೆ ಎಂಬ ಮಾತುಗಳು ಕೇಳಿಬಂದಿದೆ. ಇಂಡಿಯಾ ಮೈತ್ರಿಕೂಟ ಸಾಮೂಹಿತ ನಾಯಕತ್ವದಲ್ಲಿ ಚುನಾವಣೆ ಎದುರಿಸಲಿದೆ. ಇಂಡಿಯಾ ಕೂಡದಲ್ಲಿ ಹಲವು ಪ್ರಧಾನಿ ಅಭ್ಯರ್ಥಿ ನಾಯಕರಿದ್ದಾರೆ. ಚುನಾವಣೆಯಲ್ಲಿ ಸಾಮೂಹಿಕ ನಾಯಕತ್ವವೇ ಗುರಿ ಎಂದು ಈಗಾಗಲೇ ಇಂಡಿಯಾ ಕೂಟದ ಸಭೆಗಳಲ್ಲಿ ಪುನರುಚ್ಚರಿಸಲಾಗಿದೆ.
ಇದರ ನಡುವೆ ಜೆಡಿಯು ನಾಯಕರ ಹೇಳಿಕೆ ಇಂಡಿಯಾ ಮೈತ್ರಿಕೂಟದಲ್ಲಿನ ಸಮನ್ವಯ ತಪ್ಪಿಸುವ ಎಲ್ಲಾ ಸಾಧ್ಯತೆಗಳಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ