LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನೀವು ಮೊಬೈಲ್ ರಿಪೇರಿಯನ್ನು ಉಚಿತವಾಗಿ ಕಲಿಯಬೇಕೆ.? ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಜನವರಿ 03 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸೇವೆಗೆ ಪ್ರಣವ್‌ ಮೊಹಾಂತಿ: ಎಸ್‌ಐಟಿ ಮುಖ್ಯಸ್ಥರ ಬದಲಾವಣೆ?ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ನಾಲ್ವರು ಮೀನುಗಾರರು ನೀರುಪಾಲುಬಿಗ್‌ಬಾಸ್ ಸೀಸನ್‌-12ರ ಸ್ಪರ್ಧಿಗಳ ಪಟ್ಟಿಯಲ್ಲಿ ಇವರೇ ಸೆಲೆಬ್ರಿಟಿಗಳು?ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆಆ. 5 ರಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಧರ್ಮಸ್ಥಳ ಪ್ರಕರಣ : ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಎಸ್‌ಐಟಿರಿಜಿಸ್ಟರ್ಡ್ ಪೋಸ್ಟ್ ಸೇವೆಗೆ ವಿದಾಯ ಹೇಳಿದ ಅಂಚೆ ಕಛೇರಿ!!ಕೋಚಿಂಗ್ ಇಲ್ಲದೆ ಎರಡನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸೌಭಾಗ್ಯಧರ್ಮಸ್ಥಳದ ಪ್ರಕರಣ: ಎಸ್​ಐಟಿ ಸಹಾಯವಾಣಿ ಆರಂಭ.!31-07-2025. ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.!