LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಡೊನಾಲ್ಡ್ ಟ್ರಂಪ್ ಹೆಸರನ್ನು ನೋಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದ ಪಾಕ್

ಇಸ್ಲಾಮಾಬಾದ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು 2026 ರ ನೊಬೆಲ್ ಶಾಂತಿ ಪ್ರಶಸ್ತಿಗೆ ಪಾಕಿಸ್ತಾನ ನಾಮನಿರ್ದೇಶನ ಮಾಡಿದೆ.

ಇತ್ತೀಚಿನ ಭಾರತ - ಪಾಕಿಸ್ತಾನ ಸೇನಾ ಉದ್ವಿಗ್ನತೆಯ ಸಮಯದಲ್ಲಿ ಟ್ರಂಪ್ ರಾಜತಾಂತ್ರಿಕ ನಡೆಯ ಮೂಲಕ ಕದನ ವಿರಾಮಕ್ಕೆ ಕಾರಣರಾದರು ಎಂದು ಪಾಕಿಸ್ತಾನ ಹೇಳಿಕೊಂಡಿದ್ದು, ಇದಕ್ಕಾಗಿ ಅವರ ಹೆಸರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದೆ. ಆದರೆ, 'ಭಾರತ - ಪಾಕಿಸ್ತಾನ ಸಂಘರ್ಷದಲ್ಲಿ ಮತ್ತು ಕದನ ವಿರಾಮದಲ್ಲಿ ಮೂರನೇಯವರ ಪಾತ್ರವಿಲ್ಲ. ಪಾಕಿಸ್ತಾನ ನೇರವಾಗಿ ಮನವಿ ಮಾಡಿದ ನಂತರವೇ ದಾಳಿ ನಿಲ್ಲಿಸಲಾಯಿತು' ಎಂದು ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

ಈ ನಡುವೆ '2026 ರ ನೊಬೆಲ್ ಶಾಂತಿ ಪ್ರಶಸ್ತಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಜೆ. ಟ್ರಂಪ್ ಅವರನ್ನು ಔಪಚಾರಿಕವಾಗಿ ನಾಮನಿರ್ದೇಶನ ಮಾಡಲು ಸರ್ಕಾರ ನಿರ್ಧರಿಸಿದೆ' ಎಂದು ಪಾಕಿಸ್ತಾನವು ಎಕ್ಸ್ ಸಂದೇಶದಲ್ಲಿ ತಿಳಿಸಿದೆ.

ಪ್ರಧಾನಿ ಮೋದಿ ಅವರು ನೀಡಿದ ಸ್ಪಷ್ಟನೆ ಹೊರತಾಗಿಯೂ, ಭಾರತ - ಪಾಕಿಸ್ತಾನದ ನಡುವೆ ಶಾಂತಿಗಾಗಿ ಮಧ್ಯಸ್ಥಿಕೆಯನ್ನು ಮಾಡುವೆ ಎಂದು ಪದೇ ಪದೇ ಟ್ರಂಪ್ ಹೇಳುತ್ತಿದ್ದಾರೆ. ಇದೀಗ ಮತ್ತೆ ಶುಕ್ರವಾರ ನನ್ನ ಮಧ್ಯಸ್ಥಿಕೆಯಲ್ಲಿ ಪಾಕಿಸ್ತಾನ - ಭಾರತ ಯುದ್ಧ ನಿಂತಿದ್ದು. ಇದೀಗ ಎರಡು ರಾಷ್ಟ್ರಗಳ ನಡುವೆ ಶಾಂತಿ ಮಾತುಕತೆ ಮಾಡುವೆ. ಈ ಕೆಲಸಕ್ಕೆ ನನಗೆ ಯಾರು ನೊಬೆಲ್ ಶಾಂತಿ ಪ್ರಶಸ್ತಿ ನೀಡುವುದಿಲ್ಲ ಎಂದು ಶುಕ್ರವಾರ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ.

ಇನ್ನು 'ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್ ಪ್ರಶಸ್ತಿ ಸಿಗುವುದಿಲ್ಲ. ಸೆರ್ಬಿಯಾ ಮತ್ತು ಕೊಸೊವೊ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್ ಪ್ರಶಸ್ತಿ ಸಿಗುವುದಿಲ್ಲ, ಈಜಿಪ್ಟ್ ಮತ್ತು ಇಥಿಯೋಪಿಯಾ ನಡುವೆ ಶಾಂತಿ ಕಾಪಾಡಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ, ಮತ್ತು ಮಧ್ಯಪ್ರಾಚ್ಯದಲ್ಲಿ ಅಬ್ರಹಾಂ ಒಪ್ಪಂದಗಳನ್ನು ಮಾಡಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ. ನಾನು ಏನೇ ಮಾಡಿದರೂ, ಫಲಿತಾಂಶ ಒಂದೇ ಆಗಿರಬೇಕು. ಇದರಿಂದ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ. ಆದರೆ ಜನರಿಗೆ ತಿಳಿದಿದೆ ಅದು ನನಗೆ ಮುಖ್ಯ' ಎಂದು ತಮ್ಮ ಟ್ರುತ್ ಸೋಶಿಯಲ್ ಖಾತೆಯಲ್ಲಿ ಟ್ರಂಪ್ ಪೋಸ್ಟ್ ಮಾಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026