Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Belagavi

ಹೂವು–ಬೊಕ್ಕೆ ಬದಲು ರಕ್ತದಾನ: ಕಿತ್ತೂರಿನಲ್ಲಿ ವಿಭಿನ್ನ ಶಿಕ್ಷಕರ ದಿನಾಚರಣೆ

ಕಿತ್ತೂರಿನಲ್ಲಿ ಯಶಸ್ವಿಯಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ

 

 

 

 

ಚನ್ನಮ್ಮನ ಕಿತ್ತೂರು: ಶಿಕ್ಷಕರ ದಿನಾಚರಣೆಯನ್ನು ಸಮಾಜಮುಖಿ ಸೇವೆಯೊಂದಿಗೆ ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಕಿತ್ತೂರು ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಪಟ್ಟಣ ಪಂಚಾಯಿತಿ ಹಾಗೂ ವಿವಿಧ ಸರ್ಕಾರಿ ನೌಕರರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಗುರುವಾರ ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಯಿತು.

ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಸಾಂಸ್ಕೃತಿಕ ಭವನದಲ್ಲಿ ಬೆಳಗ್ಗೆ 9 ಗಂಟೆಗೆ ಆರಂಭವಾದ ಶಿಬಿರದಲ್ಲಿ ‘ರಕ್ತದಾನವೇ ಮಹಾದಾನ’ ಎಂಬ ಸಂದೇಶ ಸಾರಲಾಯಿತು. ಸರ್ಕಾರಿ ನೌಕರರು, ಯುವಕರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹಾಗೂ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಮಾನವೀಯ ಸೇವೆಗೆ ಕೈಜೋಡಿಸಿದರು.

ಶಿಬಿರದಲ್ಲಿ ರಕ್ತದಾನದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ, ತುರ್ತು ಸಂದರ್ಭಗಳಲ್ಲಿ ಅಗತ್ಯವಿರುವ ರಕ್ತದ ಕೊರತೆ ನೀಗಿಸುವ ನಿಟ್ಟಿನಲ್ಲಿ ರಕ್ತ ಸಂಗ್ರಹಿಸುವ ಗುರಿ ಹೊಂದಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದರು.ಶಿಬಿರದಲ್ಲಿ ಒಟ್ಟು 142 ಮಂದಿ ರಕ್ತದಾನ ಮಾಡಿದ್ದು, ಪ್ರತಿಯೊಬ್ಬರಿಂದ 350 ಎಮ್‌ ಎಲ್‌ ರಕ್ತವನ್ನು ಸಂಗ್ರಹಿಸಲಾಗಿದೆ.ಈ ಸಂದರ್ಭದಲ್ಲಿ ಪಿಎಸ್ಐ ಎಸ್. ಭರತ, ತಾಲೂಕಾ ಆರೋಗ್ಯ ಅಧಿಕಾರಿ ಡಾ ಸಂತೋಷ ಗಡೆನ್ನವರ, ವೈದ್ಯಾಧಿಕಾರಿ ಡಾ ಇಮಾದ ರಾಜಗೋಳಿ, ಶಿಕ್ಷಣ ಸಮನ್ವಯ ಅಧಿಕಾರಿ ಗಾಯತ್ರಿ ಅಜ್ಜನ್ನವರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಸುನಂದಾ ಪಾಟೀಲ, ಡಾ. ಗಜಾನಂದ ಸೊಗಲದ, ಸಂಜೀವ ಲೋಕಾಪೂರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

 

ಬಾಕ್ಸ್: 1

 “ಈ ಬಾರಿಯ ಶಿಕ್ಷಕರ ದಿನಾಚರಣೆಯನ್ನು ಕೇವಲ ಹೂವು, ಬೊಕ್ಕೆ ಹಾಗೂ ಪ್ರಶಸ್ತಿಗಳಿಗೆ ಸೀಮಿತಗೊಳಿಸದೆ, ರಕ್ತದಾನದಂತಹ ಸಮಾಜಮುಖಿ ಸೇವೆಯ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ರಕ್ತದಾನ ಮಾಡಿರುವುದು ಸಂತಸದ ಸಂಗತಿ.”

— ಮಹೇಶ ಹೂಲಿ, ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯಿತಿ, ಕಿತ್ತೂರು

 “ಒಬ್ಬರು ರಕ್ತದಾನ ಮಾಡುವುದರಿಂದ ಮೂರು ಜನರ ಪ್ರಾಣ ಉಳಿಸಲು ಸಾಧ್ಯ. ರಕ್ತದಾನವು ಕೇವಲ ಒಬ್ಬರ ಜೀವ ಉಳಿಸುವ ಕಾರ್ಯವಲ್ಲ, ಸಂಕಷ್ಟದಲ್ಲಿರುವ ಕುಟುಂಬವೊಂದಕ್ಕೆ ಆಶಾಕಿರಣವಾಗುವ ಮಾನವೀಯ ಸೇವೆಯಾಗಿದೆ. ವಿಶೇಷವಾಗಿ ಯುವಕರು ಹಾಗೂ ವಿದ್ಯಾರ್ಥಿಗಳು ರಕ್ತದಾನದ ಮಹತ್ವವನ್ನು ಅರಿತುಕೊಂಡು ಇಂತಹ ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ರಕ್ತದಾನ ಶಿಬಿರ ಆಯೋಜಿಸಿರುವುದು ಶಿಕ್ಷಕರ ಸಾಮಾಜಿಕ ಬದ್ಧತೆಯನ್ನು ತೋರಿಸುತ್ತದೆ,”— ಚನ್ನಬಸಪ್ಪ ತುಬಾಕದ, ಕ್ಷೇತ್ರ ಶಿಕ್ಷಣಾಧಿಕಾರಿ, ಚ. ಕಿತ್ತೂರು

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ