ತಾಳಿಕೋಟೆ, ಕರ್ನಾಟಕ ಪಬ್ಲಿಕ್ ಸ್ಕೂಲ್ ತಾಳಿಕೋಟೆಯ ೧೯೯೭-೯೮ನೇ ಸಾಲಿನ ಹಿರಿಯ ವಿದ್ಯಾರ್ಥಿಗಳು ಶಾಲೆಯ ಮಕ್ಕಳಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ನೀರಿನ ಟ್ಯಾಂಕ್ನ್ನು ಕೊಡುಗೆಯಾಗಿ ನೀಡುವ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದಾರೆ.
ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುದ್ದೇಬಿಹಾಳ ತಾಲೂಕಿನ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಆರ್.ಬಿ. ದಮ್ಮೂರಮಠ ಅವರು ನೀರಿನ ಟ್ಯಾಂಕ್ನ್ನು ಉದ್ಘಾಟಿಸಿ, ಹಿರಿಯ ವಿದ್ಯಾರ್ಥಿಗಳ ಸೇವಾ ಮನೋಭಾವವನ್ನು ಶ್ಲಾಘಿಸಿದರು. ತಾವು ಕಲಿತ ಶಾಲೆಯ ಬಗ್ಗೆ ಅಭಿಮಾನ ಹೊಂದಿ, ಪ್ರಸ್ತುತ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳ ಅನುಕೂಲಕ್ಕಾಗಿ ನೀರಿನ ಟ್ಯಾಂಕ್ ಕೊಡುಗೆ ನೀಡಿರುವುದು ಶ್ಲಾಘನೀಯ ಕಾರ್ಯವಾಗಿದೆ. ಇಂತಹ ಸೇವಾ ಕಾರ್ಯಗಳು ಇತರ ಹಿರಿಯ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿ ಎಂದು ಶುಭ ಹಾರೈಸಿದರು.
ಈ ಸಮಯದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು, ಹಳೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.