Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

‘ಮಕ್ಕಳನ್ನು ಪ್ರತಿಭಟನೆಗೆ ಕಳುಹಿಸಬೇಡಿ’: ದೆಹಲಿಯ ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ

ಹೊಸದಿಲ್ಲಿ, ಅ. 9: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ ಕುಮಾರ ವಿರುದ್ಧ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಮುನ್ನ ರಾಜಧಾನಿಯಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಿರುವ ಪೊಲೀಸರು, ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡುವಂತೆ ಮಸೀದಿಯ ಧ್ವನಿವರ್ಧಕದ ಮೂಲಕ ಪೋಷಕರಿಗೆ ಮನವಿ ಮಾಡಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರು ಮಸೀದಿಯಲ್ಲಿ ಜನರನ್ನು ಉದ್ದೇಶಿಸಿ ಮಾತನಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಶನಿವಾರ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಳೆ ದೆಲಿಯ ಚಾಂದನಿ ಚೌಕ್ ಪ್ರದೇಶದ ಟೌನ್ ಹಾಲ್ ಸಮೀಪದ ಶಾಹಿ ಮಸೀದಿಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಈ ಮನವಿ ಮಾಡಿದ್ದಾರೆ.

ಮಸೀದಿಗೆ ಪ್ರಾರ್ಥನೆಗಾಗಿ ಆಗಮಿಸಿದ್ದ ಜನರನ್ನು ಉದ್ದೇಶಿಸಿ ಧ್ವನಿವರ್ಧಕದ ಮೂಲಕ ಮಾತನಾಡಿದ ಅಧಿಕಾರಿ, ನಗರದಲ್ಲಿ ಶಾಂತಿ ಮತ್ತು ಸೌಹಾರ್ದ ಕಾಪಾಡುವಂತೆ ಕೋರಿದ್ದಾರೆ. ಯಾವುದೇ ವದಂತಿಗಳು ಅಥವಾ ಪ್ರಚೋದನಕಾರಿ ಸಂದೇಶಗಳಿಗೆ ಕಿವಿಗೊಡದೆ ಪೊಲೀಸ್ ಇಲಾಖೆ ಮತ್ತು ಆಡಳಿತದೊಂದಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.

ವಿಶೇಷವಾಗಿ ಪೋಷಕರು ತಮ್ಮ ಮಕ್ಕಳನ್ನು ಪ್ರತಿಭಟನೆಗಳಿಗೆ ಕಳುಹಿಸಬಾರದು. ಕುಟುಂಬದ ಸದಸ್ಯರು, ಸ್ನೇಹಿತರು ಹಾಗೂ ಪರಿಚಿತರಿಗೆ ಅನಗತ್ಯವಾಗಿ ಜನಸಂದಣಿಯಲ್ಲಿ ಸೇರದಂತೆ ತಿಳಿಹೇಳಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಚಟುವಟಿಕೆಗಳಿಂದ ದೂರವಿರಬೇಕು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಮಸೀದಿಯ ಧ್ವನಿವರ್ಧಕದ ಮೂಲಕ ಪೊಲೀಸರು ಸಾರ್ವಜನಿಕರಿಗೆ ಈ ರೀತಿಯ ಮನವಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಶನಿವಾರದ ಪ್ರತಿಭಟನೆಗೆ ಮುನ್ನ ಕೈಗೊಳ್ಳಲಾಗುತ್ತಿರುವ ಭದ್ರತಾ ಕ್ರಮಗಳ ಭಾಗವಾಗಿ ಈ ಬೆಳವಣಿಗೆ ನಡೆದಿದೆ.

ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆಗೆ ಕರೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ ಕುಮಾರ ಅವರ ಕಾರ್ಯವೈಖರಿಯನ್ನು ವಿರೋಧಿಸಿ ಸಿಜೆಪಿ ಅಕ್ಟೋಬರ್ 10ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಕರೆ ನೀಡಿದೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಜಧಾನಿಯ ವಿವಿಧೆಡೆ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಸಾರ್ವಜನಿಕ ಸಂಚಾರಕ್ಕೂ ನಿರ್ಬಂಧಗಳನ್ನು ವಿಧಿಸಲಾಗಿದೆ.

ಕಾನೂನು ಸುವ್ಯವಸ್ಥೆಯ ಕಾರಣ ನೀಡಿ ಪೊಲೀಸರು ವಿಧಿಸಿರುವ ನಿರ್ಬಂಧಗಳು ಸುಪ್ರೀಂ ಕೋರ್ಟ ಮೆಟ್ಟಿಲೇರಿವೆ. ಮೆಟ್ರೋ ನಿಲ್ದಾಣಗಳನ್ನು ಮುಚ್ಚಿರುವುದು, ರೈಲು ಸಂಚಾರ ರದ್ದುಗೊಳಿಸಿರುವುದು ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸಿರುವ ಕ್ರಮಗಳ ವಿರುದ್ಧ ನ್ಯಾಯಾಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ.

ಈ ಕುರಿತು ಶುಕ್ರವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ, ಪ್ರತಿಭಟನೆಯನ್ನು ನಿಯಂತ್ರಿಸುವ ನೆಪದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನೇ ಸಂಪೂರ್ಣ ಸ್ಥಗಿತಗೊಳಿಸುವುದು ಸರಿಯಲ್ಲ ಎಂದು ಕೇಂದ್ರ ಸರ್ಕಾರಕ್ಕೆ ತಿಳಿಸಿದೆ.

ಪ್ರತಿಭಟಿಸುವ ಹಕ್ಕಿನ ಜತೆಗೆ ಸಾಮಾನ್ಯ ನಾಗರಿಕರ ಸಂಚಾರ ಮತ್ತು ಮೂಲಭೂತ ಸೌಲಭ್ಯಗಳನ್ನು ಪಡೆಯುವ ಹಕ್ಕನ್ನೂ ರಕ್ಷಿಸಬೇಕು. ಭದ್ರತಾ ಕ್ರಮಗಳು ಸಾರ್ವಜನಿಕರಿಗೆ ಅನಗತ್ಯ ತೊಂದರೆ ಉಂಟುಮಾಡಬಾರದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ನಿರ್ಬಂಧಗಳಿಗೆ ಸಂಬಂಧಿಸಿದಂತೆ ಪೊಲೀಸರು ಹೊರಡಿಸಿರುವ ನೈಜ ಆದೇಶವನ್ನು ಸಲ್ಲಿಸುವಂತೆಯೂ ಸೂಚಿಸಿದೆ.

ಇದರ ನಡುವೆಯೇ ದೆಹಲಿ ಪೊಲೀಸರು ಮಸೀದಿಗಳ ಮೂಲಕ ಸಾರ್ವಜನಿಕರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡುತ್ತಿರುವುದು ಗಮನ ಸೆಳೆದಿದೆ. ಪ್ರತಿಭಟನೆಗೆ ಒಂದು ದಿನ ಬಾಕಿ ಇರುವಾಗ ರಾಜಧಾನಿಯಲ್ಲಿ ಭದ್ರತಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ