Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Sports News

‘ದೋಸೆ-ಇಡ್ಲಿ’ ಹಾಡು ವಿವಾದ: RCB ಪಂದ್ಯದಲ್ಲಿ CSK-BCCI ನಡುವಿನ ಹೊಸ ಚರ್ಚೆ

ಸಿಎಸ್‌ಕೆ ವ್ಯವಸ್ಥಾಪಕ ನಿರ್ದೇಶಕ ಕಾಶಿ ವಿಶ್ವನಾಥನ್ ಈ ವಿವಾದದ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಡಿಜೆ ಆಯ್ಕೆ ಮಾಡಿದ ಹಾಡುಗಳು ಮತ್ತು ಕಾಮೆಂಟ್‌ಗಳ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ದೂರು ನೀಡಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ. ದಕ್ಷಿಣ ಭಾರತೀಯ ಸ್ಟೀರಿಯೋಟೈಪ್‌ಗಳಿಗೆ ಸಂಬಂಧಿಸಿದಂತೆ ವೈರಲ್ ಆಗಿರುವ ‘ದೋಸೆ, ಇಡ್ಲಿ, ಸಾಂಬಾರ್, ಚಟ್ನಿ’ ಹಾಡನ್ನು ಪಂದ್ಯ ಸಮಯದಲ್ಲಿ ಹಾಕುವುದು ‘ಸೂಕ್ತವಲ್ಲ’ ಎಂದು ಸಿಎಸ್‌ಕೆ ತನ್ನ ದೂರಿನಲ್ಲಿ ಉಲ್ಲೇಖಿಸಿದೆ. ಐಪಿಎಲ್‌ನ ಹಿರಿಯ ಅಧಿಕಾರಿಯೊಬ್ಬರು ಈ ವಿಚಾರವನ್ನು ದೃಢಪಡಿಸಿ, ಆಡಳಿತ ಮಂಡಳಿ ಪರಿಶೀಲನೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

‘ನಮಗೆ ಸಿಎಸ್‌ಕೆಯಿಂದ ದೂರು ಬಂದಿದೆ, ನಾವು ಅದನ್ನು ಪರಿಶೀಲಿಸುತ್ತಿದ್ದೇವೆ’ ಎಂದು ಅಧಿಕಾರಿಯು ಹೇಳಿದ್ದಾರೆ.

ಈ ಕುರಿತು ಸಿಎಸ್‌ಕೆ ವ್ಯವಸ್ಥಾಪಕ ನಿರ್ದೇಶಕ ಕಾಶಿ ವಿಶ್ವನಾಥನ್ ಪ್ರತಿಕ್ರಿಯೆ ನೀಡಿದ್ದು, ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

‘ಸಾಮಾನ್ಯವಾಗಿ ಡಿಜೆಗಳು ತವರು ತಂಡಕ್ಕೆ ಬೆಂಬಲವಾಗಿ ಕೆಲಸ ಮಾಡುತ್ತಾರೆ. ಆದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಘಟನೆ ವಿಭಿನ್ನವಾಗಿತ್ತು. ನಮ್ಮ ಆಟಗಾರರ ವಿರುದ್ಧ ಕೆಲವು ಟೀಕೆಗಳು ಕೇಳಿಬಂದವು. ಈ ಹಿನ್ನೆಲೆಯಲ್ಲಿ ನಾವು ಬಿಸಿಸಿಐಗೆ ಪತ್ರ ಬರೆದು ಪರಿಶೀಲನೆ ಕೋರಿದ್ದೇವೆ’ ಎಂದು ಅವರು ಹೇಳಿದ್ದಾರೆ.

ಸಂಗೀತ ನಿರ್ದೇಶಕ ಗಾನ ಅಪ್ಪು ರಚಿಸಿದ ಈ ಹಾಡು ಸಿಎಸ್‌ಕೆ-ಆರ್‌ಸಿಬಿ ಪೈಪೋಟಿಗೆ ಬಹಳ ಕಾಲದಿಂದ ಸಂಬಂಧ ಹೊಂದಿದೆ. ಅಭಿಮಾನಿಗಳು ಇದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ಬಳಸುತ್ತಿದ್ದಾರೆ. ಕಳೆದ ವರ್ಷವೂ ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೂ ಮುನ್ನ ಆರ್‌ಸಿಬಿಯ ಜಿತೇಶ್ ಶರ್ಮಾ ಈ ಹಾಡನ್ನು ಹಾಡಿದ ವಿಡಿಯೋ ಹಂಚಿಕೊಂಡಿದ್ದು, ಇದಕ್ಕೆ ಸಿಎಸ್‌ಕೆ ಅಭಿಮಾನಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಬಳಿಕ ಇಂತಹ ಘಟನೆಗಳು ಮರುಕಳಿಸಿಲ್ಲ. ಡಿಜೆಗಳು ಎದುರಾಳಿ ಆಟಗಾರರ ಕುರಿತು ಟೀಕೆ ಮಾಡಬಾರದು. ಜೊತೆಗೆ ನಮ್ಮನ್ನು ಬೆಂಬಲಿಸುವ ಉತ್ತಮ ಅಭಿಮಾನಿ ಬಳಗ ಇರುವುದೇ ನಮ್ಮ ಬಲ’ ಎಂದು ವಿಶ್ವನಾಥನ್ ತಿಳಿಸಿದ್ದಾರೆ.

ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಸಿಎಸ್‌ಕೆ ಆಟಗಾರರು ಔಟ್ ಆದಾಗ ಡಿಜೆ ಮಾಡಿದ ಕಾಮೆಂಟ್‌ಗಳು ಕೂಡ ತಂಡದ ಆಡಳಿತ ಮಂಡಳಿಗೆ ಅಸಮಾಧಾನ ಉಂಟುಮಾಡಿವೆ. ‘ಎದುರಾಳಿ ತಂಡವನ್ನು ಹೀನಾಯಗೊಳಿಸುವುದು ಅಥವಾ ಅವಮಾನಿಸುವುದು ಸರಿಯಲ್ಲ’ ಎಂದು ಸಿಎಸ್‌ಕೆ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಗೆಲುವಿನೊಂದಿಗೆ ಆರ್‌ಸಿಬಿ ಐಪಿಎಲ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಇನ್ನು ಸಿಎಸ್‌ಕೆ ಐದು ಪಂದ್ಯಗಳಲ್ಲಿ ಎರಡು ಗೆಲುವು ಸಾಧಿಸಿ 4 ಅಂಕಗಳೊಂದಿಗೆ ಎಂಟನೇ ಸ್ಥಾನದಲ್ಲಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ : ಬಸ್ ಚಾಲಕ ದುರ್ಮರಣದೇವರಾಜ್ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ, ಪೊಲೀಸ್ ತನಿಖೆಗೆ ಗ್ರಾಮಸ್ಥರ ಒತ್ತಾಯಉತ್ತಮ ವ್ಯಕ್ತಿತ್ವ, ಚಾಣಾಕ್ಷ ಕಾರ್ಯವೈಖರಿ; ವರ್ಗಾವಣೆಯಾದ ಚಾ ವಿ ಸ ನಿ ನಿ ಯ AE ಮತ್ತು ಪ್ರಭಾರ AEE ಅವರಿಗೆ ಭಾವಪೂರ್ಣ ಬೀಳ್ಕೊಡುಗೆಹಾಸನ: ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ವೇಳೆ ವಿದ್ಯುತ್ ಅವಘಡ – ಕುಣಿಗಲ್ ಆರ್‌ಎಫ್‌ಒ ಜಗದೀಶ್ ಸಾವುಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲವಿದ್ಯುತ್ ವಿತರಣಾ ಖಾಸಗೀಕರಣ ವಿರೋಧಿಸಿ ಸಂಸದರಿಗೆ ಮನವಿಇರಾನ್–ಅಮೆರಿಕ ಶಾಂತಿ ಮಾತುಕತೆ ನಡುವೆ ಖಮೇನಿ ಅಂತ್ಯಕ್ರಿಯೆ ದಿನಾಂಕ ಘೋಷಣೆಮಧ್ಯಪ್ರಾಚ್ಯದಲ್ಲಿ ಕಾಳಗದ ಕಾವು: US ನೌಕಾನೆಲೆ ಮೇಲೆ ಇರಾನ್ ದಾಳಿ, ಪ್ರತೀಕಾರ ಅನಿವಾರ್ಯ ಎಂದ ಟ್ರಂಪ್13 ಕಿ.ಮೀ ಕಾಮಗಾರಿ ಪೂರ್ಣಗೊಂಡ ತುಮಕೂರು–ಚಿತ್ರದುರ್ಗ ರೈಲು ಯೋಜನೆ; ಸಂಪೂರ್ಣ ಮಾರ್ಗ ಯಾವಾಗ ಸಿದ್ಧ?ಬಂಡೀಪುರದಲ್ಲಿ ಭದ್ರತಾ ಲೋಪ: ರೌಡಿ ಶೀಟರ್ ಗ್ಯಾಂಗ್‌ನ ಎಣ್ಣೆ ಪಾರ್ಟಿ ಬಹಿರಂಗ