ಹಾವೇರಿ: ಪರ ಸಂಬಂಧದ ಅನುಮಾನ (Illicit Relationship) ಹಿನ್ನೆಲೆ ಅಂಗನವಾಡಿ ಕೇಂದ್ರದಲ್ಲೇ ಅಕ್ಕನನ್ನು (Sister) ತಮ್ಮ ಮಚ್ಚಿನಿಂದ ಕೊಚ್ಚಿ ಕೊಲೆಗೈದ ಘಟನೆ ಹಾವೇರಿ (Haveri) ಜಿಲ್ಲೆಯ ಶಿಗ್ಗಾವಿಯಲ್ಲಿ (Shiggaon) ನಡೆದಿದೆ. ಸುಮಾ ಶಿವಶಂಕರ್ ವನಹಳ್ಳಿ (29) ಮೃತ ಮಹಿಳೆ. ಸುಮಾ ಶಿಗ್ಗಾವಿ ಪಟ್ಟಣದ ಮೌಲಾಲಿ ಗುಡ್ಡದ ಅಂಗನವಾಡಿ ಕೇಂದ್ರದಲ್ಲಿ ಆಯಾ ಕೆಲಸ ಮಾಡುತ್ತಿದ್ದಳು. ಬೆಳಗ್ಗೆ ಸುಮಾರು 10:15ರ ವೇಳೆಗೆ ಸ್ವಂತ ತಮ್ಮ ಸಂಜು ಮಚ್ಚಿನಿಂದ ಸುಮಾಳ ಕುತ್ತಿಗೆ ಹಾಗೂ ಕೈ ಭಾಗಕ್ಕೆ ದಾಳಿ ನಡೆಸಿದ್ದಾನೆ. ಹಲ್ಲೆಯ ತೀವ್ರತೆಗೆ ಸುಮಾಳ ಒಂದು ಕೈ ತುಂಡಾಗಿದ್ದು, ಕುತ್ತಿಗೆಗೆ ಗಂಭೀರ ಗಾಯಗಳಾಗಿವೆ. ಪರಿಣಾಮ ಸ್ಥಳದಲ್ಲೇ ಸುಮಾ ಮೃತಪಟ್ಟಿದ್ದಾಳೆ. ಮಾಹಿತಿ ತಿಳಿದು ಶಿಗ್ಗಾವಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.