Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಡಾ. ರಾಜಕುಮಾರ ಬಳಿಕ ಅನಂತ ನಾಗ್‌ಗೆ ದಾದಾಸಾಹೇಬ ಫಾಲ್ಕೆ ಪ್ರಶಸ್ತಿ

ಬೆಂಗಳೂರು, ಸೆ. 16 : ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ಬಹಿರಂಗವಾಗಿ ಪ್ರಶಂಸಿಸುತ್ತ ಹಾಗೂ ಇತ್ತೀಚಿನ ಜೆನ್ ಝಡ್ ಯುವಜನರ ಪ್ರತಿಭಟನೆ ಕುರಿತು ಟೀಕಾತ್ಮಕ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ಕನ್ನಡದ ಹಿರಿಯ ನಟ ಅನಂತ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ 2024ನೇ ಸಾಲಿನ ದಾದಾಸಾಹೇಬ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ. ಕನ್ನಡ ಚಿತ್ರರಂಗದ ಮೇರುನಟ ಡಾ. ರಾಜಕುಮಾರ ಅವರ ಬಳಿಕ ಹಿರಿಯ ನಟ ಅನಂತ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ದಾದಾಸಾಹೇಬ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ..

ಡಾ. ರಾಜಕುಮಾರ ಅವರಿಗೆ 1995ನೇ ಸಾಲಿನ ದಾದಾಸಾಹೇಬ ಫಾಲ್ಕೆ ಪ್ರಶಸ್ತಿ ನೀಡಲಾಗಿತ್ತು. ಇದೀಗ ಸುಮಾರು ಮೂರು ದಶಕಗಳ ಬಳಿಕ ಕನ್ನಡ ಚಿತ್ರರಂಗದ ನಟ ಅನಂತ ನಾಗ್ ಈ ಪ್ರತಿಷ್ಠಿತ ಗೌರವಕ್ಕೆ ಪಾತ್ರರಾಗಿದ್ದಾರೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅನಂತ ನಾಗ್, ಯುವಜನರ ಪ್ರತಿಭಟನೆಯ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದರು. ಇಂತಹ ಪ್ರತಿಭಟನಾ ಪ್ರವೃತ್ತಿಯನ್ನು ನಗರಗಳಲ್ಲಿ ಹರಡುತ್ತಿರುವ ‘ರೋಗ’ ಎಂದು ಬಣ್ಣಿಸಿದ್ದ ಅವರು, ಪ್ರತಿಭಟನಾನಿರತ ಯುವಜನರ ಕ್ಷಮೆಯನ್ನು ಪ್ರಧಾನಿ ನರೇಂದ್ರ ಮೋದಿ ಕೋರಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದರು. ಪ್ರಧಾನಿ ಕ್ಷಮೆ ಕೇಳುವ ಅಗತ್ಯವಿರಲಿಲ್ಲ; ತಾವು ಅವರ ಸ್ಥಾನದಲ್ಲಿದ್ದರೆ ಕ್ಷಮೆ ಕೇಳುತ್ತಿರಲಿಲ್ಲ ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿದ್ದರು.

ಅವರ ಈ ಹೇಳಿಕೆಗಳು ರಾಜಕೀಯ ವಲಯದಲ್ಲೂ ಪ್ರತಿಕ್ರಿಯೆಗೆ ಕಾರಣವಾಗಿದ್ದವು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರ ಎಂ.ಜಿ. ಹೆಗಡೆ ಅವರು ಅನಂತ ನಾಗ್ ಹೇಳಿಕೆಗಳನ್ನು ಟೀಕಿಸಿದ್ದರು. ವಿದ್ಯಾರ್ಥಿಗಳು ಮತ್ತು ಯುವಜನರ ಪ್ರತಿಭಟನೆ ಕುರಿತು ಅವರು ನೀಡಿದ ಹೇಳಿಕೆಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿಯೂ ಪರ-ವಿರೋಧ ಚರ್ಚೆ ನಡೆದಿತ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ