Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಡಾ ಫ.ಗು.ಹಳಕಟ್ಟಿ ಜಯಂತಿ: ಪುಷ್ಪನಮನ ಸಲ್ಲಿಕೆ

 

ಸುದ್ದಿಮೂಲವಾರ್ತೆ

ಕೊಪ್ಪಳ ಜುಲೈ 02 : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜುಲೈ 02ರಂದು ಜಿಲ್ಲಾ ಮಟ್ಟದ ಡಾ ಫ.ಗು.ಹಳಕಟ್ಟಿ ಜಯಂತಿ ಆಚರಿಸಲಾಯಿತು.

ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ ಕಡಿ ಅವರು ಡಾ ಫ.ಗು.ಹಳಕಟ್ಟಿಯವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಬಳಿಕ ಮಾತನಾಡಿ ಸಮಾಜದಲ್ಲಿರುವ ಎಲ್ಲ ಸಮಸ್ಯೆಗಳಿಗೆ ವಚನಗಳಲ್ಲಿ ಪರಿಹಾರವಿದೆ. ಅಂತಹ ವಚನಗಳನ್ನು ಮಕ್ಕಳಿಗೆ ಹೇಳಿಕೊಡಬೇಕು. ಕಾನೂನಿನಿಂದ ಒಬ್ಬ ವ್ಯಕ್ತಿಗೆ ಶಿಕ್ಷೆ ಕೊಡಬಹುದು. ಆದರೆ ಮನಸ್ಸನ್ನು ಪರಿವರ್ತನೆ ಮಾಡಲು ಸಾಧ್ಯವಿಲ್ಲ. ಅದು ವಚನಗಳಿಂದ ಮಾತ್ರ ಸಾಧ್ಯ. ನುಡಿದರೆ ಮುತ್ತಿನ ಹಾರದಂತಿರಬೇಕು ಎಂಬ ವಚನವನ್ನು ಸೂಕ್ಷ್ಮವಾಗಿ ಗಮನಿಸಿದರೆ ಅದರಡಿ ನಮಗೆ ಸಿ.ಆರ್.ಪಿ.ಸಿ., ಸಿಪಿಸಿ, ಐಪಿಸಿ ಹೀಗೆ ಹಲವಾರು ಕಾಯ್ದೆ, ಸೆಕ್ಷನಗಳು ಸಿಗುತ್ತವೆ. ವಚನಗಳ ಮೂಲಕ ಒಂದು ಸುಂದರವಾದ ಸಮಾಜ ನಿರ್ಮಾಣ ಸಾಧ್ಯವಾಗಿದ್ದು, ಇಂತಹ ವಚನಗಳ ರಕ್ಷಣೆಗೆ ಶ್ರಮಿಸಿದವರು ಡಾ ಫ.ಗು.ಹಳಕಟ್ಟಿಯವರು. ವೃತ್ತಿಯಿಂದ ವಕೀಲರಾಗಿ, ಸಾಹಿತಿ, ಸಹಕಾರಿಗಳಾಗಿ, ಸಂಘಸಂಸ್ಥೆಗಳ ಕಟ್ಟಿ ಬೆಳೆಸಿದ ಫ.ಗು.ಹಳಕಟ್ಟಿಯವರು ಸಮಾಜಕ್ಕಾಗಿ ತಮ್ಮ ತನು ಮನ ಧನವನ್ನು ನೀಡಿ ವಚನ ಸಾಹಿತ್ಯ ಉಳಿಸಿದ್ದಾರೆ. ಅದು ಮುಂದಿನ ನಮ್ಮ ಸಂಸ್ಕೃತಿಗೆ ಬಹುದೊಡ್ಡ ಕೊಡುಗೆಯಾಗಲಿದೆ ಎಂದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ, ಗಣ್ಯರಾದ ಗುಡದಪ್ಪ ಹಡಪದ, ಡಾ.ಸಂಗಮೇಶ ಕಲ್ಲಹಾಳ, ಹನ್ಮೇಶ ಕಲಮಂಗಿ, ಎಸ್.ಇಂಗಳದಾಳ, ಶೇಖರಗೌಡ ಪೊ.ಪಾಟೀಲ್, ಶಶಿಧರ ಗಾಣಿಗಾ, ಅರ್ಚನಾ ಸಸಿಮಠ, ಶರಣಮ್ಮ ಕಲಮಂಗಿ, ನೀಲಮ್ಮ ಪೊ.ಪಾಟೀಲ್, ಶ್ರೀದೇವಿ ಇಂಗಳದಾಳ, ವಿಶಾಲಕ್ಷಿ ಸಸಿಮಠ, ವಿಜಯಲಕ್ಷ್ಮೀ ಸೇರಿದಂತೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಮತ್ತಿತರರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ