LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಒಗ್ಗಟ್ಟಿನಿಂದ ಕೆಲಸ ಕಾರ್ಯಗಳನ್ನು ಕೈಗೊಂಡಲ್ಲಿ ಅಧಿಕ ಫಲ ಶ್ರುತಿಯನ್ನು ಕಾಣಲು ಸಾಧ್ಯ- ಡಾ. ಕೆ. ಪಿ. ಅಂಶುಮಂತ್

ಶಿವಮೊಗ್ಗ, ಮಾರ್ಚ್ 20: ನೀರಾವರಿ ಕ್ಷೇತ್ರದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಕಾರ್ಯಗಳನ್ನು ಕೈಗೊಂಡಲ್ಲಿ ಅಧಿಕ ಫಲ ಶ್ರುತಿಯನ್ನು ಕಾಣಲು ಸಾಧ್ಯ ಎಂದು ಕಾಡಾ ಅಧ್ಯಕ್ಷರಾದ ಡಾ. ಕೆ. ಪಿ. ಅಂಶುಮಂತ್ ರವರು ತಿಳಿಸಿದರು.

ಅವರು ಇತ್ತೀಚೆಗೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಕಚೇರಿಯ ಸಭಾಂಗಣದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಬಲವರ್ಧನೆಗಾಗಿ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೃಷಿ ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ. ಶಶಿಧರ್ ರವರು ಮಾತನಡುತ್ತಾ, ಕೃಷಿಯಲ್ಲಿ ತಾಂತ್ರಿಕತೆಯನ್ನು ಸಮರ್ಥವಾಗಿ ಬಳಸುವಂತೆ ತಿಳಿಸಿದರು. ಸಂಪನ್ಮೂಲಗಳನ್ನು ಬಳಸುವ ಮುನ್ನ ತಮ್ಮ ಕೃಷಿ ಕ್ಷೇತ್ರದ ಕುರಿತು ಅಂದರೆ ಮಣ್ಣಿನ ಗುಣ ಮತ್ತು ಆರೋಗ್ಯ. ಬೆಳೆಗೆಬೇಕಾದ ನೀರಿನ ಅಗತ್ಯ ಇವುಗಳನ್ನು ಮೊದಲು ತಿಳಿದುಕೊಂಡು ತಂತ್ರಜ್ಞಾನವನ್ನು ಅತ್ಯಂತ ಕಡಿಮೆ ವೆಚ್ಚದಲ್ಲಿ ಬಳಸಿಕೊಳ್ಳುವುದನ್ನು ಉದಾಹರಣೆ ಸಹಿತವಾಗಿ ವಿವರಿಸಿದರು.

ಸಹಾಯಕ ಕೃಷಿ ನಿರ್ದೇಶಕರು ಕಾಶಿನಾಥ್ ರವರು ಮಾತನಾಡುತ್ತಾ, ಇಲಾಖೆಯಿಂದ ನೀಡುವ ಸೌಲಭ್ಯಗಳಾದ ಬಿತ್ತನೆಬೀಜ, ಪೈಪ್ ಗಳು, ಕೃಷಿಯಂತ್ರೋಪಕರಣಗಳು, ಕೃಷಿ ಮತ್ತು ತೋಟಗಾರಿಕೆಗೆ ಸಂಬoಧಿಸಿದ ವಿವಿಧ ಯೋಜನೆಗಳು, ಪಶುಸಂಗೋಪನೆ ಯೋಜನೆಗಳ ಕುರಿತಾದ ಮಾಹಿತಿಯನ್ನು ತಿಳಿಸಿ ಇವುಗಳ ಸದುಪಯೋಗವನ್ನು ಸಂಘಗಳ ಮೂಲಕ ಪಡೆಯುವಂತೆ ತಿಳಿಸಿದರು.

ಈ ತರಬೇತಿಯಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಮತ್ತು ಅಚ್ಚುಕಟ್ಟು ಭಾಗದ ರೈತರುಗಳು ಹಾಗೂ ಕಾಡಾ ಆಡಳಿತಾಧಿಕಾರಿಗಳು ಆರ್, ಸತೀಶ್ ಹಾಗೂ ಭೂ ಅಭಿವೃದ್ಧಿ ಅಧಿಕಾರಿಗಳು ಕೆ ಪ್ರಶಾಂತ್ (ತಾಂತ್ರಿಕ), ಶ್ರೀಮತಿ ರಾಜಸುಲೋಚನಾ (ಕೃಷಿ), ಹಾಗೂ ಡಾ. ನಾಗೇಶ್ ಎಸ್, ಡೋಂಗರೆ (ಸಹಕಾರ) ಮತ್ತು ಭದ್ರ ಕಾಡಾ ಕಚೇರಿಯ ಅಧಿಕಾರಿ ಮತ್ತು ಸಿಬ್ಬಂದಿಯವರು ಉಪಸ್ಥಿತರಿದ್ದರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು