Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಚಿನ್ಮೂಲಾದ್ರಿ ಅಕ್ಷರೋತ್ಸವ ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಡಾ.ಎಲ್.ಪಾಲಾಕ್ಷಯ್ಯ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಕನ್ನಡ ಮಾಧ್ಯಮದಲ್ಲಿ ಓದಿದವರು ದಡ್ಡರಲ್ಲ. ಇಂಗ್ಲಿಷ್ ಮಾಧ್ಯಮದಲ್ಲಿ ಓದಿದವರು ಬುದ್ದಿವಂತರಲ್ಲ ಎಂದು ಬಸವೇಶ್ವರ ಮೆಡಿಕಲ್ ಕಾಲೇಜಿನ ವೈದ್ಯಕೀಯ ಅಧೀಕ್ಷಕ ಡಾ.ಎಲ್.ಪಾಲಾಕ್ಷಯ್ಯ ಹೇಳಿದರು.

ಭಾರತೀಯ ವೈದ್ಯಕೀಯ ಸಂಘ, ಅಕ್ಷರ ಚಪ್ಪರ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆ, ಚಿನ್ಮುಲಾದ್ರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ, ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಇವುಗಳ ಸಹಯೋಗದೊಂದಿಗೆ ಐ.ಎಂ.ಎ.ಹಾಲ್‌ನಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಚಿನ್ಮುಲಾದ್ರಿ ಅಕ್ಷರೋತ್ಸವ ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಾನು ಕೂಡ ಆಂಗ್ಲ ಮಾಧ್ಯಮದಲ್ಲಿ ಓದಿ ವೈದ್ಯನಾಗಿದ್ದೇನೆ. ಪ್ರತಿಯೊಬ್ಬರು ಮಕ್ಕಳನ್ನು ಕನ್ನಡ ಮಾಧ್ಯಮದಲ್ಲಿ ಓದಿಸಿ. ಆಗ ಕನ್ನಡ ನಾಡು, ನುಡಿ, ನೆಲ, ಜಲದ ಬಗ್ಗೆ ಅಭಿಮಾನ ಮೂಡುತ್ತದೆ ಎಂದು ಕರೆ ನೀಡಿದರು.

ವೈಜ್ಞಾನಿಕ ಯುಗದಲ್ಲಿ ಎಲ್ಲರು ರಕ್ತದೊತ್ತಡ ಮತ್ತು ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವ ಇಂದಿನ ದಿನಮಾನಗಳಲ್ಲಿ ಸಾಹಿತ್ಯ ಮತ್ತು ಕವಿತೆಗಳಿಂದ ಪ್ರತಿಯೊಬ್ಬರು ಒತ್ತಡದಿಂದ ಹೊರ ಬಂದು ತುಸು ನೆಮ್ಮದಿ ಕಂಡುಕೊಳ್ಳಬಹುದು ಎಂದು ನುಡಿದರು.

ಚಿನ್ಮೂಲಾದ್ರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಗೌರವಾಧ್ಯಕ್ಷ ಬಿ.ಕೆ.ರಹಮತ್‌ವುಲ್ಲಾ ಮಾತನಾಡಿ ವೈದ್ಯರು ತಮ್ಮ ಕರ್ತವ್ಯದಲ್ಲಿ ನಿರ್ಲಕ್ಷೆ ವಹಿಸಿದರೆ ರೋಗಿ ಸಾಯುತ್ತಾನೆ. ವಕೀಲರು ಸರಿಯಾಗಿ ವಾದ ಮಂಡಿಸದಿದ್ದರೆ ಕಕ್ಷಿದಾರ ಶಿಕ್ಷೆ ಅನುಭವಿಸಬೇಕಾಗುತ್ತದೆ. ಹಾಗಾಗಿ ಸಮಾಜದಲ್ಲಿ ವೈದ್ಯರು ಮತ್ತು ವಕೀಲರ ಪಾತ್ರ ಅತ್ಯಂತ ಅಮೂಲ್ಯವಾದುದು. ಆಧುನಿಕ ಯುಗದಲ್ಲಿ ಎಲ್ಲರೂ ಒತ್ತಡದ ಜೀವನದಲ್ಲಿ ಮುಳುಗಿರುವುದರಿಂದ ಇಂತಹ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮನಸ್ಸಿಗೆ ಮುದ ನೀಡುತ್ತದೆ ಎಂದು ಅಭಿಪ್ರಾಯಪಟ್ಟರು.

ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮ ಖಂಡಿಸಿ ಸಾವಿರಾರು ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದಾಗ ಪೊಲೀಸರು ಲಾಠಿ ಪ್ರಹಾರ ನಡೆಸಬೇಕಾಯಿತು. ಶಾಂತಿಯುತ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತು. ವಿದ್ಯಾರ್ಥಿಗಳಿಗೆ ರಕ್ಷಣೆ ಇಲ್ಲದಂತಾಗಿದೆ.

ಜೈಲಿಗೆ ಹೋಗಿ ಬಂದವರು, ಕೊಲೆ, ದರೋಡೆ, ರೇಪ್ ಕೇಸ್‌ನಲ್ಲಿ ಸಿಲುಕಿದವರು, ಹಣ ಕೊಳ್ಳೆ ಹೊಡೆದವರು ರಾಜಕೀಯ ಪ್ರವೇಶಿಸುವಂತಾಗಿದೆ. ಒಂದು ದಿನ ಜೈಲಿಗೆ ಹೋಗಿ ಬಂದವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎನ್ನುವ ಹೊಸ ಕಾನೂನು ಜಾರಿಗೆ ಬಂದಾಗ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ ಎಂದರು.

ಅಕ್ಷರ ಚಪ್ಪರ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷೆ ಮಧುಶ್ರಿ ಎ.ಪಿ. ಪ್ರಾಸ್ತಾವಿಕವಾಗಿ ಮಾತನಾಡಿದರು.

ಅಕ್ಷರ ಚಪ್ಪರ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆಯ ಗೌರವಾಧ್ಯಕ್ಷ ಆರ್.ನಾಗೇಶ್, ಚಿನ್ಮೂಲಾದ್ರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷೆ ಶಾರದಾ ಜೈರಾಮ್, ದಂತ ವೈದ್ಯೆ ಡಾ.ಆರ್.ಗೌರಮ್ಮ, ಚಿನ್ಮೂಲಾದ್ರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಸಂಸ್ಥಾಪಕಿ ದಯಾ ಪುತ್ತೂರ್ಕರ್ ಇವರುಗಳು ವೇದಿಕೆಯಲ್ಲಿದ್ದರು. ಮೂವತ್ತಕ್ಕೂ ಹೆಚ್ಚು ಕವಿಗಳು ಕವನಗಳನ್ನು ವಾಚಿಸಿದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ