LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಂಗಳೂರು ವಿ.ವಿಗೆ ಡಾ. ಮನಮೋಹನ್ ಸಿಂಗ್ ಯೂನಿವರ್ಸಿಟಿ ಮರುನಾಮಕರಣ

ಬೆಂಗಳೂರು  : ಜ್ಞಾನಭಾರತಿ ಕ್ಯಾಂಪಸ್​ನಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯದ ಹೆಸರನ್ನು ಬದಲಾಯಿಸಲಾಗುತ್ತಿದೆ. ಮಾಜಿ ಪ್ರಧಾನಿ, ದಿವಂಗತ ಡಾ| ಮನಮೋಹನ್ ಸಿಂಗ್ ಅವರ ಹೆಸರನ್ನು ಬೆಂಗಳೂರು ವಿವಿಗೆ ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್​​ನಲ್ಲಿ ತಿಳಿಸಿದ್ದಾರೆ.

ಎರಡು ಅವಧಿಗೆ ಒಟ್ಟು ಹತ್ತು ವರ್ಷ ಕಾಲ ಭಾರತದ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ 2024ರ ಡಿಸೆಂಬರ್ ತಿಂಗಳಲ್ಲಿ ಇಹಲೋಕ ತ್ಯಜಿಸಿದ್ದಾರೆ. ಭಾರತದ ಆಧುನಿಕ ಆರ್ಥಿಕತೆಯ ರೂವಾರಿಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿರುವ ಮನಮೋಹನ್ ಸಿಂಗ್ ಅವರ ಗೌರವ ಸೂಚಕವಾಗಿ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಅವರ ಹೆಸರನ್ನು ಇಡಲಾಗಿದೆ.

1991ರಲ್ಲಿ ಭಾರತದಲ್ಲಿ ಉದಾರೀಕರಣ ಆರ್ಥಿಕ ನೀತಿ ಜಾರಿಗೆ ತರಲಾಯಿತು. ಆಗ ಜಾಗತೀಕರಣಕ್ಕೆ ಭಾರತ ಇಟ್ಟ ಮೊದಲ ಹೆಜ್ಜೆಯಾಗಿತ್ತು. ಅಂದು ಪ್ರಧಾನಿಯಾಗಿದ್ದವರು ಪಿ.ವಿ. ನರಸಿಂಹರಾವ್. ಆ ಸರ್ಕಾರದಲ್ಲಿ ಡಾ. ಮನಮೋಹನ್ ಸಿಂಗ್ ಅವರು ಹಣಕಾಸು ಸಚಿವರು. ಈ ಉದಾರೀಕರಣ ನೀತಿಯ ರೂವಾರಿ ಮನಮೋಹನ್ ಸಿಂಗ್ ಅವರೇ ಆಗಿದ್ದರು. 2004ರಿಂದ 2014ರವರೆಗೆ ಮನಮೋಹನ್ ಸಿಂಗ್ ಪ್ರಧಾನಿಯೂ ಆಗಿದ್ದರು.

ಅವರು ಹಣಕಾಸು ಸಚಿವರಾಗಿ ಮತ್ತು ಪ್ರಧಾನಿಯಾಗಿ ಮಾಡಲಾಗಿದ್ದ ಸಾಧನೆಗಳು, ದೇಶದ ಅರ್ಥ ವ್ಯವಸ್ಥೆಯ ಸುಧಾರಣೆಗೆ ತೆಗೆದುಕೊಂಡ ಕ್ರಮಗಳು, ಅವುಗಳ ಪರಿಣಾಮಗಳನ್ನು ಅಧ್ಯಯನ ಮಾಡಿ ಗುರುತಿಸಲೆಂದು ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ಸಂಶೋಧನೆ ಮತ್ತು ಅಧ್ಯಯನ ಕೇಂದ್ರವನ್ನು ಸ್ಥಾಪಿಸುತ್ತಿರುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಡಿಸೆಂಬರ್​​ನಲ್ಲಿ ಘೋಷಿಸಿದ್ದರು. ಇದೀಗ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮನಮೋಹನ್ ಸಿಂಗ್ ಅವರ ಹೆಸರನ್ನೇ ಇಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್​​ನಲ್ಲಿ ಘೋಷಣೆ ಮಾಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST