LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಮಗಾರಿಯ ಸ್ಥಳದಲ್ಲಿ ನಾಗರಿಕ ಘೋಷಣಾ ಫಲಕ ಅಳವಡಿಸಿ: ಡಾ. ರಾಜೇಂದ್ರ ಕೆ.ವಿ

ಬೆಂಗಳೂರು : ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಯುವ ಸ್ಥಳದಲ್ಲಿ "ನಾಗರಿಕ ಘೋಷಣಾ ಫಲಕ" ಅಳವಡಿಸಲು ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರು ಪಶ್ವಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಮುಖ ರಸ್ತೆಗಳಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಇಂದು ಮಲ್ಲೇಶ್ವರಂ ಐಪಿಪಿ ಕೇಂದ್ರದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಪಶ್ವಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಕಾಮಗಾರಿ ನಡೆಯಲಿ, ಆ ಸ್ಥಳದಲ್ಲಿ ಪ್ರತಿಯೊಂದು ಕಾಮಗಾರಿಯ ಸ್ಥಳದಲ್ಲಿ ನಾಗರಿಕ ಘೋಷಣಾ ಫಲಕ (Citizen Charter Board) ಪ್ರದರ್ಶಿಸಬೇಕು. ಜೊತೆಗೆ ನಿರ್ದಿಷ್ಟ ಕಾಲ ಮಿತಿಯೊಳಗೆ ಕೆಲಸಗಳನ್ನು ಪರಿಣಾಮಕಾರಿಯಾಗಿ ಪೂರ್ಣಗೊಳಿಸಲು ಸೂಚನೆ ನೀಡಿದರು.

ಪ್ರತಿಯೊಂದು ಕಾಮಗಾರಿ ನಡೆಯುವ ಸ್ಥಳದಲ್ಲೂ ಸುರಕ್ಷತಾ ಕ್ರಮಗಳು — ಪ್ರತಿಫಲಕಗಳು(reflectors), ಸೂಚನಾ ಫಲಕಗಳು(signage boards), ಬ್ಯಾರಿಕೇಡ್ಸ್ ಸೇರಿದಂತೆ ಇನ್ನಿತರ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವುದು, ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆ ಅತ್ಯಂತ ಪ್ರಾಮುಖ್ಯತೆಯ ವಿಷಯ. ಆದ್ದರಿಂದ ಕಾಮಗಾರಿ ನಡೆಯುವ ಸ್ಥಳದಲ್ಲಿ ಕಡ್ಡಾಯವಾಗಿ ಸುರಕ್ಷಾ ಕ್ರಮಗಳನ್ನು ಕೈಗೊಂಡು ಕಾಮಗಾರಿ ನಡೆಸಲು ಸೂಚನೆ ನೀಡಿದರು.

ರಸ್ತೆ ಗುಂಡಿ ಮುಚ್ಚುವ ಕಾರ್ಯವನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳಬೇಕು. ರಸ್ತೆ ಗುಂಡಿ ಮುಚ್ಚುವ ವಿಚಾರದಲ್ಲಿ ಯಾವುದೇ ಅಧಿಕಾರಿಯಾಗಲಿ ವಿಳಂಬ ಧೋರಣೆಯನ್ನು ಸಹಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಈ ವೇಳೆ ಅಭಿವೃದ್ಧಿ ಆಯುಕ್ತರಾದ ದಿಗ್ವಿಜಯ್ ಬೋಡ್ಕೆ, ಮುಖ್ಯ ಇಂಜಿನಿಯರ್‌ ಆದ ಸ್ವಯಂ ಪ್ರಭಾ, ಕಾರ್ಯಪಾಲಕ ಇಂಜಿನಿಯರ್‌ಗಳು, ಗುತ್ತಿಗೆದಾರರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ