LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಮಸ್ವಾಮಿ ಪಾಳ್ಯ ಕೊಳಗೇರಿ ಪ್ರದೇಶದಲ್ಲಿ ಫೀವರ್ ಕ್ಲಿನಿಕ್ ಗೆ ಚಾಲನೆ

ಬೆಂಗಳೂರು: ವಸಂತನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶೀಘ್ರ ಉಚಿತ ಡಯಾಲಿಸಿಸ್ ಕೇಂದ್ರ ಪ್ರಾರಂಭಿಸಲು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಪೂರ್ವ ವಲಯ ವ್ಯಾಪ್ತಿಯಲ್ಲಿ ಇಂದು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ವಸಂತನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಡಯಾಲಿಸಿಸ್ ಕೇಂದ್ರಕ್ಕೆಂದು ಸ್ಥಾಪಿಸಿರುವ ಕಟ್ಟಡದಲ್ಲಿ ಇನ್ನೂ ಡಯಾಲಿಸಿಸ್ ಕೇಂದ್ರ ಸ್ಥಾಪನೆಯಾಗಿರುವುದಿಲ್ಲ. ಈ ಸಂಬಂಧ ಸರ್ಕಾರಿ ಉಚಿತ ಡಯಾಲಿಸಿಸ್ ಸೇವೆ ಯೋಜನೆಯಡಿ, ಸದರಿ ಸ್ಥಳದಲ್ಲಿ ಡಯಾಲಿಸಿಸ್ ಸೇವೆ ಪ್ರಾರಂಭಿಸಬೇಕು. ಉಚಿತ ಡಯಾಲಿಸಿಸ್ ಸೇವೆ ಪ್ರಾರಂಭಿಸಿಸುವುದರಿಂದ ಇಲ್ಲಿನ ಸುತ್ತಮುತ್ತಲಿನ ಬಡವರ್ಗದ ಜನರಿಗೆ ಸಾಕಷ್ಟು ಅನುಕೂಲವಾಗಲಿದ್ದು, ಅದಕ್ಕಾಗಿ ಅಗತ್ಯ ಉಪಕರಣಗಳ ವ್ಯವಸ್ಥೆ ಮಾಡಿಕೊಂಡು ತ್ವರಿತಗತಿಯಲ್ಲಿ ಕೇಂದ್ರವನ್ನು ಪ್ರಾರಂಭಿಸಬೇಕೆಂದು ತಿಳಿಸಿದರು.

ವಸಂತನಗರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆರೋಗ್ಯ ಕೇಂದ್ರದ ಕಾರ್ಯವೈಖರಿಯನ್ನು ಪರಿಶೀಲಿಸಿ, ಪ್ರತಿನಿತ್ಯ ಎಷ್ಟು ಮಂದಿ ಆಸ್ಪತ್ರೆಗೆ ಭೇಟಿ ನೀಡುತ್ತಾರೆ, ಎಷ್ಟು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬಿತ್ಯಾದಿ ಮಾಹಿತಿಯನ್ನು ಪಡೆದುಕೊಂಡರು.

ರಾಮಸ್ವಾಮಿ ಪಾಳ್ಯದ ಕೊಳಗೇರಿ ಪ್ರದೇಶದಲ್ಲಿ ಫೀವರ್ ಕ್ಲೀನಿಕ್ ಗೆ ಚಾಲನೆ

ಪೂರ್ವ ವಲಯದ ರಾಮಸ್ವಾಮಿ ಪಾಳ್ಯದ ಕೊಳಗೇರಿ ಪ್ರದೇಶದಲ್ಲಿ ಸ್ಥಾಪಿಸಿರುವ ಫೀವರ್ ಕ್ಲೀನಿಕ್ ಗೆ ಚಾಲನೆ ನೀಡಲಾಯಿತು. ಡೆಂಘೀ ಪ್ರಕರಣಗಳನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಹೆಚ್ಚು ಪ್ರಕರಣಗಳು ಕಂಡುಬರುವ ಕೊಳಗೇರಿ ಪ್ರದೇಶಗಳಲ್ಲಿ ಫೀವರ್ ಕ್ಲೀನಿಕ್ ಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸ್ವತಃ ಫಾಗಿಂಗ್ ಮಾಡಿದ ಸಚಿವರು:

ರಾಮಸ್ವಾಮಿ ಪಾಳ್ಯದ ಕೊಳಗೇರಿ ಪ್ರದೇಶದ ರಸ್ತೆಗಳಲ್ಲಿ ಸೊಳ್ಳೆ ನಿಯಂತ್ರಣಕ್ಕಾಗಿ, ಆರೋಗ್ಯ ಸಚಿವರೇ ಸ್ವತ: ಪಾಗಿಂಗ್ ಮಾಡಿದರು. ಇದೇ ವೇಳೆ ಮನೆ ಮನೆ ಭೇಟಿ ನೀಡಿ ಬಿತ್ತಿ ಪತ್ರಗಳನ್ನು ವಿತರಿಸಿ, ನಾಗರೀಕರಲ್ಲಿ ಸೊಳ್ಳೆ ಉತ್ಪತ್ತಿಯಾಗದಂತೆ ನೋಡಿಕೊಳ್ಳಲು ಸೂಚನೆ ನೀಡಿದರು. ಸ್ವಚ್ಛ ನೀರಿನಿಂದ ಸೊಳ್ಳೆಗಳು ಉತ್ಪತ್ತಿಯಾಗಲಿದ್ದು, ನೀರನ್ನು ಶೇಖರಿಸಿಟ್ಟುಕೊಳ್ಳದೆ ಬದಲಾವಣೆ ಮಾಡುತ್ತಿರಬೇಕೆಂದು ಅರಿವು ಮೂಡಿಸಿದರು.

ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳಲ್ಲಿ ಅರಿವು:

ರಾಮಸ್ವಾಮಿ ಪಾಳ್ಯದ ಕೊಳಗೇರಿ ಪ್ರದೇಶದಲ್ಲಿರುವ ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಡೀಟ್(Odomos) ಕ್ರೀಮ್ ವಿತರಿಸಿ ಕೈ ಮತ್ತು ಕಾಲುಗಳಿಗೆ ಹಚ್ಚಿಕೊಳ್ಳಲು ತಿಳಿಸಿದರು. ಅಲ್ಲದೆ ಡೆಂಘೀ ನಿಯಂತ್ರಣಕ್ಕಾಗಿ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸಲು ನಿಮ್ಮ ಮನೆಯಲ್ಲಿ ಪೋಷಕರು ಹಾಗೂ ಸುತ್ತಮುತ್ತಲಿನ ಮನೆಯವರಲ್ಲಿ ಅರಿವು ಮೂಡಿಸಲು ವಿದ್ಯಾರ್ಥಿಗಳಲ್ಲಿ ತಿಳಿಸಿದರು.

2ಕ್ಕಿಂತ ಹೆಚ್ಚು ಡೆಂಘೀ ಪ್ರಕರಣಗಳು ಕಂಡು ಬಂದರೆ ಹಾಟ್ ಸ್ಪಾಟ್ ಎಂದು ಗುರುತು

ನಗರದಲ್ಲಿ 100 ಮೀಟರ್ ಪ್ರದೇಶದ ವ್ಯಾಪ್ತಿಯಲ್ಲಿ 2 ಕ್ಕಿಂತ ಹೆಚ್ಚು ಡೆಂಘೀ ಪ್ರಕರಣಗಳು ಕಂಡು ಬಂದರೆ ಅದನ್ನು ಹಾಟ್ ಸ್ಪಾಟ್ ಎಂದು ಗುರುತಿಸಬೇಕು. ಜೊತೆಗೆ 100 ಮೀಟರ್ ವ್ಯಾಪ್ತಿಯಲ್ಲಿ ಬರುವ ಮನೆಗಳಿಗೆ ಭೇಟಿ ನೀಡಿ ಫೀವರ್ ಪರೀಕ್ಷೆ, ಲಾರ್ವಾ ಸರ್ವೆ, ಫಾಗಿಂಗ್, ಸ್ಪ್ರೇ ಹಾಗೂ ಡೆಂಘೀ ಹರಡದಂತೆ ಮುಂಜಾಗ್ರತಾ ವಹಿಸಲು ಬಿತ್ತಿ ಪತ್ರಗಳನ್ನು ವಿತರಿಸಿ ಅರಿವು ಮೂಡಿಸಬೇಕು. ಇದಲ್ಲದೆ ಸೊಳ್ಳೆಗಳು ಕಚ್ಚದಂತೆ ಡೀಟ್(Odomos) ಕ್ರೀಮ್ ವಿತರಿಸಿ ಕೈ ಮತ್ತು ಕಾಲುಗಳಿಗೆ ಹಚ್ಚಿಕೊಳ್ಳಲು ತಿಳಿಸಬೇಕೆಂದು ಹೇಳಿದರು.

ನಗರದಲ್ಲಿ ಡೆಂಘೀ ಹರಡದಂತೆ ಮುಂಜಾಗ್ರತಾ ಕ್ರಮ:

ನಗರದಲ್ಲಿ ಡೆಂಘೀ ತಡೆಗಟ್ಟಲು ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸುಮಾರು 3161 ತಂಡಗಳಿಂದ 25 ಲಕ್ಷ ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಾಗುತ್ತಿದೆ. ನಗರದಲ್ಲಿ ಪ್ರತಿನಿತ್ಯ ಸರಾಸರಿ 130 ರಿಂದ 150 ಪ್ರಕರಣಗಳು ಕಂಡು ಬರುತ್ತಿವೆ.

ಈ ವೇಳೆ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ರಿಜ್ವಾನ್ ಹರ್ಷದ್, ಆರೋಗ್ಯ ಇಲಾಖೆಯ ಆಯುಕ್ತರಾದ ಡಿ. ರಂದೀಪ್, ರಾಷ್ಟರೀಯ ಆರೋಗ್ಯ ಮಿಷನ್ ನಿರ್ದೇಶಕರಾದ ಡಾ. ನವೀನ್ ಭಟ್, ಮುಖ್ಯ ಆರೋಗ್ಯಾಧಿಕಾರಿಗಳಾದ ಡಾ. ಸೈಯದ್ ಸಿರಾಜುದ್ದೀನ್ ಮದನಿ, ಡಾ. ನಿರ್ಮಲಾ ಬುಗ್ಗಿ, ಪಶ್ವಿಮ ವಲಯ ಆರೋಗ್ಯಾಧಿಕಾರಿಯಾದ ಡಾ. ಭಾಗ್ಯಲಕ್ಷ್ಮೀ, ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು:ಮುಖ್ಯಮಂತ್ರಿ ಸಿದ್ದರಾಮಯ್ಯದಕ್ಷಿಣ ನಗರ ಪಾಲಿಕೆ 2026-27ನೇ ಸಾಲಿನ ಆಯವ್ಯಯ ಅಂದಾಜು ಪ್ರಸ್ತುತಿ ಪಡಿಸುವಿಕೆ ಕಾರ್ಯಕ್ರಮಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚಾರಣೆಕಿಸ್ನಾ ವಜ್ರ ಮತ್ತು ಚಿನ್ನದ ಆಭರಣಗಳ ಸಂಸ್ಥೆಯಿಂದ ಮಹಿಳಾ ದಿನಾಚರಣೆಸೈಬರ್ ಥ್ರಿಲ್ಲರ್ ಅಂಶಗಳ ಒಳಗೊಂಡ ಅಚ್ಯುತ ಅವತಾರಂಮೋದಿ ‘ವಂದೇ ಮಾತರಂ’ಗೆ ನೀಡಿದ ಗೌರವ ವಿರೋಧಿಸಲು ಕಾಂಗ್ರೆಸ್ ಅಧಃಪತನದ ಹಾದಿಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ ಸ್ವಚ್ಛತಾ ಅಭಿಯಾನ