Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Belagavi

ನಶಾ ಮುಕ್ತ ಯುವ; ವಿಕಸಿತ ಭಾರತ ಅಭಿಯಾನಕ್ಕೆ ವಿದ್ಯಾರ್ಥಿಗಳ ಬದ್ಧತೆ

“ನನ್ನ ಆರೋಗ್ಯ ? ನನ್ನ ಹೆಮ್ಮೆ”; ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತಿ

 

 

ಬೆಳಗಾವಿ, ಸೆ26: ನಶಾ ಮುಕ್ತ ಯುವ? ವಿಕಸಿತ ಭಾರತ” ಅಭಿಯಾನದ ಅಂಗವಾಗಿ ಬೆಳಗಾವಿಯ ರಾಷ್ಟ್ರೀಯ ಸೇವಾ ಯೋಜನೆ (ಓSS) ಅಡಿಯಲ್ಲಿ “ನನ್ನ ಆರೋಗ್ಯ?ನನ್ನ ಹೆಮ್ಮ” ಕಾರ್ಯಕ್ರಮ ಶುಕ್ರವಾರ (ಸೆ.೨೫) ಸರಕಾರಿ ಸರಸ್ವತಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಶಹಾಪುರ ಇಲ್ಲಿ ಆಯೋಜಿಸಲಾಗಿತ್ತು.ಆರೋಗ್ಯಕರ ಜೀವನಶೈಲಿಯ ಮಹತ್ವ : ೧೫ ರಿಂದ ೧೮ ವರ್ಷದ ಹದಿಹರೆಯದ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸನೆ ಕಾರ್ಯಕ್ರಮವನ್ನು ಖ.ಃ.S.ಏ ತಾಲೂಕು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಚೈತನ್ಯ ಹಿರೇಮಠ ಅವರು ನಡೆಸಿಕೊಟ್ಟರು.ಕೆ.ಎಲ್.ಇ. ಕಂಕನವಾಡಿ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಸಹಾಯಕ ಪ್ರಾಧ್ಯಾಪಕರಾದ ಡಾ. ಕಾದಂಬರಿ ಸಗರೆ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಉತ್ತಮ ಆರೋಗ್ಯ ಹಾಗೂ ಸಮತೋಲನದ ಪೌಷ್ಟಿಕ ಆಹಾರದ ಮಹತ್ವವನ್ನು ವಿವರಿಸಿದರು.ಎನ್‌ಟಿಸಿಪಿ ಕಾರ್ಯಕ್ರಮದ ವೈದ್ಯಾಧಿಕಾರಿಗಳಾದ ಡಾ. ಶ್ವೇತಾ ಪಾಟೀಲ ಅವರು ಆರೋಗ್ಯಕರ ಜೀವನಶೈಲಿಯಿಂದ ಉಂಟಾಗುವ ಸಕಾರಾತ್ಮಕ ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ತಿಳಿಸಿದರು.ಬೆಳಗಾವಿಯ ಜಿಲ್ಲಾ ಸಮಾಜ ಸೇವಕಿಯಾದ  ಕವಿತಾ ರಾಜ್ ಅವರು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯಗಳು, ಗುಟ್ಕಾ ಹಾಗೂ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು, ಅವುಗಳನ್ನು ತಡೆಗಟ್ಟುವ ಕ್ರಮಗಳು ಮತ್ತು ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ವ್ಯಸನಮುಕ್ತಿಗಾಗಿ ಲಭ್ಯವಿರುವ ಚಿಕಿತ್ಸಾ ಹಾಗೂ ಸಲಹಾ ಸೇವೆಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು.ಕಾರ್ಯಕ್ರಮದ ಮುಖ್ಯ ಉದ್ದೇಶಗಳು: ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವುದು. ಮಾದಕ ವ್ಯಸನದಿಂದ ದೂರವಿದ್ದು ಆರೋಗ್ಯಕರ ಮತ್ತು ಜವಾಬ್ದಾರಿಯುತ ಜೀವನ ನಡೆಸುವಂತೆ ಪ್ರೇರೇಪಿಸುವುದು. ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಆರೋಗ್ಯ, ಕುಟುಂಬ, ಶಿಕ್ಷಣ ಹಾಗೂ ಸಾಮಾಜಿಕ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವುದು. ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳುವಂತೆ ಉತ್ತೇಜಿಸುವುದು.ನಶಾ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನರ ಬದ್ಧತೆ : ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು “ನಶಾ ಮುಕ್ತ ಭಾರತ” ನಿರ್ಮಾಣಕ್ಕೆ ತಮ್ಮ ಬದ್ಧತೆಯನ್ನು ಕವಿತಾ ರಾಜ್ ವ್ಯಕ್ತಪಡಿಸಿದರುಇದೇ ಸಂದರ್ಭದಲ್ಲಿ ಮಾದಕ ವ್ಯಸನಮುಕ್ತ ಸಮಾಜ ನಿರ್ಮಾಣದಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ ಎಂಬ ಸಂದೇಶವನ್ನು ನೀಡಲಾಯಿತು.ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿಗಳಾದ  ಅನುಸೂಯ ವಿ. ಹಿರೇಮಠ, ಸಹಾಯಕ ಕಾರ್ಯಕ್ರಮ ಅಧಿಕಾರಿಗಳಾದ ಜೆ.ಆರ್ ಮರೆಗುದ್ದಿ ಹಾಗೂ, ಉಪನ್ಯಾಸಕರಾದ ವಿ. ಡಿ ಮನೋಜ, ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

***

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ