LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಡ್ರಗ್ಸ್ ಪ್ರಕರಣ: ಜನಪ್ರಿಯ ನಟ ಶ್ರೀರಾಮ್ ಬಂಧನ; ಮತ್ತೊಬ್ಬ ನಟನಿಗಾಗಿ ಹುಡುಕಾಟ

ಚೆನ್ನೈ : ತೆಲುಗು ಹಾಗೂ ತಮಿಳಿನ ಹಲವಾರು ಸಿನಿಮಾಗಳಲ್ಲಿ ನಾಯಕನಾಗಿ, ಎರಡನೇ ನಾಯಕನಾಗಿ ನಟಿಸಿರುವ ಜನಪ್ರಿಯ ನಟ ಚೆನ್ನೈ ಮೂಲದ ಶ್ರೀಕಾಂತ್ (ಶ್ರೀರಾಮ್) ಅವರನ್ನು ತಮಿಳುನಾಡು ಪೊಲೀಸರು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಿದ್ದಾರೆ.

ಕೆಲ ದಿನಗಳ ಹಿಂದೆ ಸೇಲಂನಲ್ಲಿ ಪ್ರದೀಪ್ ಹೆಸರಿನ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಆತನ ಪರೀಕ್ಷೆ ನಡೆಸಿದಾಗ ಆತ ಡ್ರಗ್ಸ್ ಸೇವಿಸಿರುವುದು ಪತ್ತೆಯಾಗಿತ್ತು. ಆ ವ್ಯಕ್ತಿಯ ವಿಚಾರಣೆ ನಡೆಸಿದ ಬಳಿಕ ಜಾನ್ ಹೆಸರಿನ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಆತನಿಂದ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿತ್ತು. ಆ ಬಳಿಕ ಇನ್ನೂ ಕೆಲವು ವ್ಯಕ್ತಿಗಳ ಬಂಧನ ಆಗಿತ್ತು. ಜಾನ್ ಡ್ರಗ್ ಡೀಲರ್ ಆಗಿದ್ದು, ಆತನಿಂದ ನಟ ಶ್ರೀರಾಮ್, ಡ್ರಗ್ಸ್ ಖರೀದಿ ಮಾಡಿದ್ದಾರೆ ಎಂಬುದು ಪೊಲೀಸರ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.

ಶ್ರೀರಾಮ್ ಅವರು ಡ್ರಗ್ಸ್ ಖರೀದಿ ಮಾಡಿರುವ ವಿಚಾರ ಬೆಳಕಿಗೆ ಬಂದ ಬೆನ್ನಲ್ಲೇ, ಪೊಲೀಸರು ನಟನಿಗೆ ಕೆಲ ದಿನಗಳ ಹಿಂದೆ ಸಮನ್ಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದರು. ಅಂತೆಯೇ ಶ್ರೀರಾಮ್ ಅವರ ರಕ್ತ ತಪಾಸಣೆ ನಡೆಸಲಾಗಿ ಶ್ರೀರಾಮ್ ಡ್ರಗ್ಸ್ ಸೇವಿಸಿರುವುದು ದೃಢಪಡುತ್ತಿದ್ದಂತೆ ಅವರನ್ನು ಬಂಧಿಸಲಾಗಿದೆ.

ಜೂನ್ 23 ರಂದು ಶ್ರೀರಾಮ್ ಬಂಧನ ಆಗಿದ್ದು, ಇನ್ನೊಬ್ಬ ನಟ ಕೃಷ್ಣಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಮಾದಕ ವಸ್ತು ಮಾರಾಟ ಜಾಲವೊಂದರಿಂದ ನಟ ಶ್ರೀರಾಮ್ ಹಾಗೂ ನಟ ಕೃಷ್ಣ ಅವರು ಡ್ರಗ್ಸ್ ಖರೀದಿ ಮಾಡಿ ಸೇವಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026