LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾರ್ವಜನಿಕರ ಕುಂದುಕೊರತೆಯನ್ನು ಪರಿಹರಿಸಲು ಸಮನ್ವಯ ಸಮಿತಿ ರಚನೆ :ಡಿ.ಎಸ್.ರಮೇಶ್

ಬೆಂಗಳೂರು :ಮುಖ್ಯ ಆಯುಕ್ತರು, ಗ್ರೇಟರ್ ಬೆಂಗಳೂರು ಪ್ರಾಧಿಕಾರರವರ ನಿರ್ದೇಶನದಂತೆ ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಂಟಿ ಆಯುಕ್ತರುಗಳ ನೇತೃತ್ವದಲ್ಲಿ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡಂತೆ ಸಮಿತಿಯನ್ನು ರಚಿಸಿದ್ದು, ಸಮಿತಿಯ ಕಾರ್ಯ ಚಟುವಟಿಕೆ ಕುರಿತು ಪೂರ್ವ ನಗರ ಪಾಲಿಕೆ ಆಯುಕ್ತರಾದ *ಶ್ರೀ ಡಿ.ಎಸ್.ರಮೇಶ್ ರವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ನಿರ್ದೇಶನಗಳನ್ನು ನೀಡಿದರು. ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ, ಪಾರದರ್ಶಕ ಹಾಗೂ ಪರಿಣಾಮಕಾರಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಈ ಸಮಿತಿ ಪ್ರಮುಖ ಪಾತ್ರವಹಿಸಲಿದೆ ಎಂದು ಆಯುಕ್ತರು ತಿಳಿಸಿದರು.

*ಸಮಿತಿ ರಚನೆ*

ವಲಯಗಳ ಜಂಟಿ ಆಯುಕ್ತರುಗಳು ಸಮಿತಿಯ ಮುಖ್ಯಸ್ಥರಾಗಿದ್ದು, ವಲಯಗಳ ಉಪ ಆಯುಕ್ತರುಗಳು – ಸದಸ್ಯ ಕಾರ್ಯದರ್ಶಿಗಳಾಗಿದ್ದು, ವಲಯ ಹಿರಿಯ ಸಹಾಯಕ ತೋಟಗಾರಿಕೆ ಅಧೀಕ್ಷಕರು, ಸಹಾಯಕ ನಿರ್ದೇಶಕರು (ಪಶುಪಾಲನೆ), ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಆರೋಗ್ಯಾಧಿಕಾರಿಗಳು, ವಲಯ ಸಹಾಯಕ ಪ್ರಧಾನ ವ್ಯವಸ್ಥಾಪಕರು (ಘನತ್ಯಾಜ್ಯ ನಿರ್ವಹಣೆ), ಕಾರ್ಯಪಾಲಕ ಅಭಿಯಂತರರು, ಕಂದಾಯ ಅಧಿಕಾರಿಗಳು , ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಂದಾಯ ಅಧಿಕಾರಿಗಳನ್ನು ಒಳಗೊಂಡ ಸಮಿತಿಯು ಇಂಜಿನಿಯರಿಂಗ್ ವಿಭಾಗವಾರು ಪ್ರತಿ ವಾರ ನಿಗದಿತ ದಿನಾಂಕದಂದು ಸಭೆ ನಡೆಸಿ, ಸಾರ್ವಜನಿಕರ ಅಹವಾಲು,ಕುಂದುಕೊರತೆ ಹಾಗೂ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಿ ತ್ವರಿತ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆಯುಕ್ತರು ಸೂಚಿಸಿದರು.

*ಸಮಯಬದ್ದ ಪರಿಹಾರ ಕ್ರಮಕ್ಕೆ ಆದ್ಯತೆ*

ವಸತಿ ಸಮುಚ್ಚಯ ಕ್ಷೇಮಾಭಿವೃದ್ಧಿ ಸಂಘ, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಮತ್ತು ಸಾರ್ವಜನಿಕರಿಗೆ ಸಂಬಂಧಿಸಿದ ದೂರುಗಳು ಹಾಗೂ ಕುಂದುಕೊರತೆಗಳನ್ನು ಸಮಿತಿಯು ಸಮಗ್ರವಾಗಿ ಪರಿಶೀಲಿಸಿ, ನಿಯಮಾನುಸಾರ ಮತ್ತು ಸಮಯಬದ್ಧವಾಗಿ ಪರಿಹಾರ ಒದಗಿಸಲು ಸಮನ್ವಯ ಸಮಿತಿಯ ಮೂಲಕ ಪರಿಣಾಮಕಾರಿ ಕಾರ್ಯಾಚರಣೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದರು.

*ಜಂಕ್ಷನ್ ಸುಧಾರಣೆ ಮತ್ತು ನಿರ್ವಹಣೆ*

ಪ್ರತಿ ವಲಯದಲ್ಲಿ ಇಂಜಿನಿಯರಿಂಗ್ ವಿಭಾಗವಾರು 10 ರಿಂದ 20 ಪ್ರಮುಖ ಜಂಕ್ಷನ್‌ಗಳನ್ನು ಗುರುತಿಸಿ, ಜಂಕ್ಷನ್‌ಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು,ಚರಂಡಿ ನಿರ್ವಹಣೆ ಹಾಗೂ ಮುರಿದ ಸ್ಲ್ಯಾಬ್‌ಗಳ ಬದಲಾವಣೆ, ಪಾದಚಾರಿ ಮಾರ್ಗಗಳ ಮಾರ್ಕಿಂಗ್, ಅನಧಿಕೃತ ಜಾಹೀರಾತುಗಳ ತೆರವು, ಅಪಾಯಕಾರಿ ಮರದ ಕೊಂಬೆ ಮತ್ತು ರೆಂಬೆಗಳ ತೆರವು, ರಸ್ತೆ ಮತ್ತುಜೀಬ್ರಾ ಕ್ರಾಸಿಂಗ್ ಹಾಗೂ ಕರ್ಬ್‌ಸ್ಟೋನ್ ಬಣ್ಣ ಬಳಿಯುವ ಮೂಲಕ ಜಂಕ್ಷನ್ ಗಳ ಸಮಗ್ರ ಸುಧಾರಣೆ ಮತ್ತು ನಿರ್ವಹಣೆ ಕಾರ್ಯ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

*ಅನಧಿಕೃತ ಕಟ್ಟಡಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ*

ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡಗಳನ್ನು ಗುರುತಿಸಿ, ಈಗಾಗಲೇ ಅಧಿಕಾರ ಪ್ರತ್ಯಾಯೋಜಿಸಿರುವಂತೆ ನಿಯಮಾನುಸಾರ ತೆರವು ಕಾರ್ಯಾಚರಣೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.

*ಪ್ಲೆಕ್ಸ್ / ಬ್ಯಾನರ್ ತೆರವು*

ಅನಧಿಕೃತವಾಗಿ ಅಳವಡಿಸಿರುವ ಪ್ಲೆಕ್ಸ್, ಬ್ಯಾನರ್‌ಗಳು ಮತ್ತು ಜಾಹೀರಾತುಗಳನ್ನು ತೆರವುಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ನಿರ್ದೇಶಿಸಲಾಯಿತು.

*ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ*

2022–23, 2023–24 ಹಾಗೂ 2024–25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಗಳನ್ನು ಮಾನದಂಡಗಳ ಅನ್ವಯ ಪರಿಶೀಲಿಸಿ, ಅರ್ಹ ಫಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸಿ ಕಲ್ಯಾಣ ಕಾರ್ಯಕ್ರಮದ ಸೌಲಭ್ಯವನ್ನು ಫಲಾನುಭವಿಗಳಿಗೆ ತಲುಪಿಸುವಂತೆ ಕಲ್ಯಾಣ ವಿಭಾಗದ ಅಧಿಕಾರಿಗಳಿಗೆ ಅಪರ ಆಯುಕ್ತರು(ಅಭಿವೃದ್ಧಿ) ಸೂಚಿಸಿದರು.

ಸಭೆಯಲ್ಲಿ ಹಾಜರಿದ್ದವರು ಅಪರ ಆಯುಕ್ತರು (ಅಭಿವೃದ್ಧಿ) ಶ್ರೀ ಲೋಖಂಡೆ ಸ್ನೇಹಲ್ ಸುಧಾಕರ್, ಜಂಟಿ ಆಯುಕ್ತರಾದ ಡಾ.ದಾಕ್ಷಾಯಿಣಿ.ಕೆ, ಸುಧಾ, ಉಪ ಆಯುಕ್ತರಾದ ಶಶಿಕುಮಾರ್, ಮುರಳೀಧರ, ಮುಖ್ಯ ಅಭಿಯಂತರರಾದ ಶ್ರೀ ಲೋಕೇಶ್, ಕಾರ್ಯಪಾಲಕ ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಂದಾಯಾಧಿಕಾರಿಗಳು ಮತ್ತು ಸಹಾಯಕ ಕಂದಾಯಾಧಿಕಾರಿಗಳು, ಹಿರಿಯ ಸಹಾಯಕ ನಿರ್ದೇಶಕರು(ತೋಟಗಾರಿಕೆ), ಸಹಾಯಕ ನಿರ್ದೇಶಕರು (ಪಶುಪಾಲನೆ), ಸಹಾಯಕ ಪ್ರಧಾನ ವ್ಯವಸ್ಥಾಪಕರು (BSWML) ಮತ್ತು ಇತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ