ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯ ಹಲವು ಹೋಟೆಲ್ಗಳು ಬಂದ್..!
ಬೆಂಗಳೂರು: ಗಲ್ಫ್ ರಾಷ್ಟ್ರಗಳ ಯುದ್ಧದ ಬಿಸಿ ಬೆಂಗಳೂರಿಗೆ ತಟ್ಟಿದೆ. ಬೆಲೆ ಏರಿಕೆ ನಡುವೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಇದರಿಂದ ಹೋಟೆಲ್ ಬಂದ್ ಆಗುವ ಆತಂಕ ಎದುರಾಗಿದೆ. ಏಕಾಏಕಿ ಗ್ಯಾಸ್ ಸರಬಾರದು ನಿಂತಿರುವುದೇ ಈ ಸಮಸ್ಯೆಗೆ ಕಾರಣವಾಗಿದೆ. ಅನಿವಾರ್ಯವಾಗಿ ಬಂದ್ ಮಾಡಬೇಕಾದ ಪರಿಸ್ಥಿತಿ ಎಂದು ಹೊಟೆಲ್ ಮಾಲೀಕರ ಸಂಘ ಎಚ್ಚರಿಸಿದೆ.
ಹೋಟೆಲ್ ಅಸೋಸಿಯೇಷನ್ ನ ಜಂಟಿ ಕಾರ್ಯದರ್ಶಿ ಕೃಷ್ಣರಾಜ್ ಈ ಕುರಿತು ಪ್ರತಿಕ್ರಿಯಿಸಿದ್ದು, ಇದು ನಮ್ಮ ನಿರ್ಧಾರ ಅಲ್ಲ ಸರ್ಕಾರ ನಮ್ಮ ಮೇಲೆ ಹಾಕುತ್ತಿರುವ ಒತ್ತಡ ಎಂದಿದ್ದಾರೆ. ಮೊದಲೇ ನಮಗೆ ಮುನ್ಸೂಚನೆ ನೀಡಿದ್ರೆ ಈ ರೀತಿಯ ಪರಿಸ್ಥಿತಿ ಎದುರಿಸುವ ಪ್ರಮೇಯವೇ ಇರುತ್ತಿರಲಿಲ್ಲ. ನಾವು ಬಂದ್ ಮಾಡೋದಕ್ಕೆ ನಿರ್ಧಾರ ತೆಗೆದುಕೊಂಡಿಲ್ಲ. ನಮಗೆ ಸಿಲಿಂಡರ್ ಪೂರೈಕೆಯಾಗುತ್ತಿಲ್ಲ. ನಾಳೆ ಮಧ್ಯಾಹ್ನಕ್ಕೆ ಆಗುವಷ್ಟು ಸಿಲಿಂಡರ್ ಮಾತ್ರ ನಮ್ಮ ಹತ್ರ ಇದೆ.
ಅಷ್ಟರೊಳಗೆ ಸರ್ಕಾರ ಪೂರೈಕೆ ಮಾಡದಿದ್ರೆ ಎಲ್ಲಾ ಹೋಟೆಲ್ ಗಳು ಬಂದ್ ಮಾಡಲಾಗುತ್ತೆ ಎಂದು ಕೃಷ್ಣರಾಜ್ ಹೇಳಿದ್ದಾರೆ. 15 ದಿನಗಳ ಮೊದಲೇ ಒಂದು ಸೂಚನೆ ನೀಡಬೇಕಿತ್ತು . ದಿಢೀರ್ ಪೂರೈಕೆ ಸ್ಥಗಿತಗೊಂಡರೆ ನಾವು ಬಂದ್ ಮಾಡದೇ ಬೇರೆ ದಾರಿ ಇಲ್ಲ ಎಂದಿದ್ದಾರೆ. ಹೊಟೆಲ್ ಮಾಲೀಕರ ಸಂಘ ಯಾವುದೇ ಬಂದ್‌ಗೆ ಕರೆ ಕೊಟ್ಟಿಲ್ಲ. ಆದರೆ ಆಹಾರ, ತಿನಿಸುಗಳು ಇಲ್ಲದಿದ್ದರೆ ಬಂದ್ ಮಾಡಲೇಬೇಕು ಎಂದಿದ್ದಾರೆ. ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.