Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ದೆಹಲಿಗೆ ಸ್ಥಳಾಂತರವಾದ ನಿಷ್ಕ್ರಿಯ ರಾಜ್ಯ ಆಡಳಿತ ಯಂತ್ರ: ಸಿ.ಟಿ. ರವಿ ಆರೋಪ

ಬೆಂಗಳೂರು: ರಾಜ್ಯದಲ್ಲಿ ನಿಷ್ಕ್ರಿಯವಾಗಿರುವ ಸರ್ಕಾರದ ಆಡಳಿತ ಯಂತ್ರ ದೆಹಲಿಗೆ ಶಿಫ್ಟ್ ಆಗಿದೆ ಎಂದು ಬಿಜೆಪಿ ನಾಯಕ ಸಿ.ಟಿ.ರವಿ (C.T. Ravi) ಸಿಎಂ-ಡಿಸಿಎಂ ಕುರ್ಚಿ ಪ್ರಹಸನದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ಸರ್ಕಾರ ಆರಂಭದಿಂದಲೇ ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದರು.

ಮುಂಚೆಯೇ ಈ ಸರ್ಕಾರ ಆಡಳಿತದಲ್ಲಿ ನಿಷ್ಕ್ರಿಯವಾಗಿತ್ತು, ಈಗ ಅದರ ಆಡಳಿತ ಚಟುವಟಿಕೆಗಳು ಸಂಪೂರ್ಣವಾಗಿ ದೆಹಲಿಯತ್ತ ಸ್ಥಳಾಂತರಗೊಂಡಿವೆ ಎಂದು ಟೀಕಿಸಿದರು. ಜನರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸದೇ ಇರುವುದೇ ಇದರ ಸ್ಪಷ್ಟ ಸಾಕ್ಷಿ ಎಂದು ಹೇಳಿದರು.

ಸಾರಿಗೆ ಇಲಾಖೆ ಹಾಗೂ ಅಂಗನವಾಡಿ ಕಾರ್ಯಕರ್ತರ ಪ್ರತಿಭಟನೆಗಳು ನಡೆಯುತ್ತಿರುವುದೇ ಸರ್ಕಾರದ ಅಸಮರ್ಥತೆಯನ್ನು ತೋರಿಸುತ್ತದೆ ಎಂದು ಅವರು ಹೇಳಿದರು. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವ ಈ ಸರ್ಕಾರಕ್ಕೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಅಧಿಕಾರಕ್ಕೆ ಬರುವಾಗ ಭ್ರಷ್ಟಾಚಾರರಹಿತ ಆಡಳಿತ ನೀಡುವುದಾಗಿ ಹೇಳಿದ್ದ ಸರ್ಕಾರ ಈಗ 60% ಸರ್ಕಾರ ಎಂಬ ಟೀಕೆಗೆ ಒಳಗಾಗಿದೆ ಎಂದು ಅವರು ಆರೋಪಿಸಿದರು. ಯಾವ ಇಲಾಖೆಯಲ್ಲೂ ಲಂಚಮುಕ್ತ ವ್ಯವಸ್ಥೆ ಕಾಣಿಸುತ್ತಿಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ ಎಂದರು.

ಯಾವ ಸಚಿವರೂ ತಾವು ಲಂಚ ಪಡೆಯುವುದಿಲ್ಲ ಎಂದು ಹೇಳುವ ಸ್ಥಿತಿಯಲ್ಲಿಲ್ಲ ಎಂದು ಆರೋಪಿಸಿದ ಅವರು, ಸಿಎಂ ಅವರೂ ಈ ಬಗ್ಗೆ ಸ್ಪಷ್ಟತೆ ನೀಡಿಲ್ಲ ಎಂದು ಹೇಳಿದರು. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ ಎಂದು ಅವರು ಗಮನ ಸೆಳೆದರು.

ಇದಾಗ್ಯೂ ಸಚಿವರು ಬೇರೆ ಚಟುವಟಿಕೆಗಳಲ್ಲಿ ಬ್ಯುಸಿಯಾಗಿದ್ದಾರೆ ಎಂದು ಟೀಕಿಸಿದ ಅವರು, ಕೆಲವರು ಮೋದಿ ವಿರೋಧ ಹಾಗೂ ಬಿಜೆಪಿ ಟೀಕೆ ಮಾಡುವುದರಲ್ಲೇ ತೊಡಗಿದ್ದಾರೆ ಎಂದು ಹೇಳಿದರು. ಜನರ ಸಮಸ್ಯೆ ಕೇಳುವವರು ಸರ್ಕಾರದಲ್ಲಿ ಯಾರಿದ್ದಾರೆ ಎಂದು ಪ್ರಶ್ನಿಸಿದರು.

ಜನರು 2023ರಲ್ಲಿ 136 ಸ್ಥಾನಗಳನ್ನು ನೀಡಿದ್ದು, ಕಿತ್ತಾಟ, ಭ್ರಷ್ಟಾಚಾರ ಹಾಗೂ ಬೆಲೆ ಏರಿಕೆಗೆ ಅವಕಾಶ ನೀಡಿಲ್ಲ ಎಂದು ಅವರು ಹೇಳಿದರು. ಈಗಲಾದರೂ ಕುರ್ಚಿ ಗಲಾಟೆ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಕುರ್ಚಿ ಗಲಾಟೆ ಮುಂದುವರಿದರೆ ಜನರೇ ಅಧಿಕಾರದಿಂದ ಕೆಳಗಿಳಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು. ಧಾರಾವಾಹಿಯಂತೆ ಕುರ್ಚಿ ಕದನ ನಡೆಯುತ್ತಿದೆ ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಿಎಂ ಸ್ಥಾನಕ್ಕೆ ಸಂಬಂಧಿಸಿದ ಚರ್ಚೆಗಳು ನಡೆಯುತ್ತಿವೆ ಎಂದು ಅವರು ಹೇಳಿದರು. ಇದರ ನಡುವೆ ಪರಮೇಶ್ವರ, ಸತೀಶ್ ಜಾರಕಿಹೊಳಿ, ಖರ್ಗೆ ಹೆಸರುಗಳೂ ಕೇಳಿಬರುತ್ತಿವೆ ಎಂದು ಹೇಳಿದರು.

ಇದರಿಂದ ಕರ್ನಾಟಕದ ಜನತೆ ಸಮಸ್ಯೆಗಳ ನಡುವೆ ಸೊರಗುತ್ತಿದ್ದಾರೆ ಎಂದು ಆರೋಪಿಸಿದ ಅವರು, ಸರ್ಕಾರ ಜನರ ಸಮಸ್ಯೆಗಳಿಗೆ ಪರಿಹಾರ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಸಿ.ಟಿ.ರವಿ ಕಿಡಿಕಾರಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ : ಬಸ್ ಚಾಲಕ ದುರ್ಮರಣದೇವರಾಜ್ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ, ಪೊಲೀಸ್ ತನಿಖೆಗೆ ಗ್ರಾಮಸ್ಥರ ಒತ್ತಾಯಉತ್ತಮ ವ್ಯಕ್ತಿತ್ವ, ಚಾಣಾಕ್ಷ ಕಾರ್ಯವೈಖರಿ; ವರ್ಗಾವಣೆಯಾದ ಚಾ ವಿ ಸ ನಿ ನಿ ಯ AE ಮತ್ತು ಪ್ರಭಾರ AEE ಅವರಿಗೆ ಭಾವಪೂರ್ಣ ಬೀಳ್ಕೊಡುಗೆಹಾಸನ: ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ವೇಳೆ ವಿದ್ಯುತ್ ಅವಘಡ – ಕುಣಿಗಲ್ ಆರ್‌ಎಫ್‌ಒ ಜಗದೀಶ್ ಸಾವುಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲವಿದ್ಯುತ್ ವಿತರಣಾ ಖಾಸಗೀಕರಣ ವಿರೋಧಿಸಿ ಸಂಸದರಿಗೆ ಮನವಿಇರಾನ್–ಅಮೆರಿಕ ಶಾಂತಿ ಮಾತುಕತೆ ನಡುವೆ ಖಮೇನಿ ಅಂತ್ಯಕ್ರಿಯೆ ದಿನಾಂಕ ಘೋಷಣೆಮಧ್ಯಪ್ರಾಚ್ಯದಲ್ಲಿ ಕಾಳಗದ ಕಾವು: US ನೌಕಾನೆಲೆ ಮೇಲೆ ಇರಾನ್ ದಾಳಿ, ಪ್ರತೀಕಾರ ಅನಿವಾರ್ಯ ಎಂದ ಟ್ರಂಪ್13 ಕಿ.ಮೀ ಕಾಮಗಾರಿ ಪೂರ್ಣಗೊಂಡ ತುಮಕೂರು–ಚಿತ್ರದುರ್ಗ ರೈಲು ಯೋಜನೆ; ಸಂಪೂರ್ಣ ಮಾರ್ಗ ಯಾವಾಗ ಸಿದ್ಧ?ಬಂಡೀಪುರದಲ್ಲಿ ಭದ್ರತಾ ಲೋಪ: ರೌಡಿ ಶೀಟರ್ ಗ್ಯಾಂಗ್‌ನ ಎಣ್ಣೆ ಪಾರ್ಟಿ ಬಹಿರಂಗ