Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಯಾದಗಿರಿಯಲ್ಲಿ ಮೂಲಭೂತ ಸೌಕರ್ಯವಿಲ್ಲದೆ ಲೇಔಟ್‌ಗೆ ಇ-ಖಾತಾ: ಅಧಿಕಾರ ದುರುಪಯೋಗ ಆರೋಪ

ಯಾದಗಿರಿ, ಏ.10: ನಗರದ ಹೊರವಲಯದ ಸರ್ವೆ ಸಂಖ್ಯೆ 689ರ ವ್ಯಾಪ್ತಿಯಲ್ಲಿ ಇರುವ ಲೇಔಟ್‌ನಲ್ಲಿ ಯಾವುದೇ ಮೂಲಭೂತ ಸೌಕರ್ಯಗಳಿಲ್ಲದೆ ಇ-ಖಾತಾ ಅನುಮೋದನೆ ನೀಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಮಾದಿಗ ಮೀಸಲಾತಿ ಹೋರಾಟ ಸಮಿತಿ (ಪಾವಗಡ ಶ್ರೀರಾಮ್ ಬಣ) ಜಿಲ್ಲಾಧ್ಯಕ್ಷ ಶಿವರಾಜ್ ದಾಸನಕೇರಿ ಅವರು ಈ ಕುರಿತು ಶನಿವಾರ ಅಪರ ಜಿಲ್ಲಾಧಿಕಾರಿ ರಮೇಶ್ ಕೋಲಾರ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಆರೋಪಿಸಿದರು.

ಲೇಔಟ್‌ನ ಸರ್ವೆ ಸಂಖ್ಯೆ 689/*/4, 5, 6, 9 ವ್ಯಾಪ್ತಿಯಲ್ಲಿ ರಸ್ತೆ ಡಾಂಬರೀಕರಣ, ಒಳಚರಂಡಿ ವ್ಯವಸ್ಥೆ, ಕುಡಿಯುವ ನೀರಿನ ಪೈಪ್‌ಲೈನ್ ಹಾಗೂ ವಿದ್ಯುತ್ ಸಂಪರ್ಕ ಸೇರಿದಂತೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸದೇ ಇದ್ದರೂ, ಇ-ಖಾತಾ ನೀಡಿರುವುದು ಕಾನೂನು ಬಾಹಿರ ಕ್ರಮವಾಗಿದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ನಗರಾಭಿವೃದ್ಧಿ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 17(2ಎ) ಮತ್ತು 17(2ಬಿ) ಪ್ರಕಾರ, ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡು ಸ್ಥಳೀಯ ಸಂಸ್ಥೆಗೆ ಹಸ್ತಾಂತರಿಸಿದ ನಂತರವೇ ನಿವೇಶನಗಳನ್ನು ಬಿಡುಗಡೆ ಮಾಡಬೇಕು. ಆದರೆ ಇಲ್ಲಿ ಕಾಮಗಾರಿ ಪ್ರಾರಂಭವಾಗುವ ಮುನ್ನವೇ ನಿವೇಶನಗಳನ್ನು ಬಿಡುಗಡೆ ಮಾಡಿರುವುದು ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದರು.

ಪೌರಾಯುಕ್ತರು ನಗರಾಭಿವೃದ್ಧಿ ಪ್ರಾಧಿಕಾರದ ಪ್ರಭಾರದಲ್ಲಿದ್ದು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಅವರು ದೂರಿದರು. ಸಂಬಂಧಪಟ್ಟ ಅಧಿಕಾರಿಗಳಿಗೆ ನಿಯಮಗಳ ಅರಿವು ಇದ್ದರೂ ಉದ್ದೇಶಪೂರ್ವಕವಾಗಿ ಅವುಗಳನ್ನು ಮೀರಿ ಕಾರ್ಯನಿರ್ವಹಿಸಿರುವುದು ಕಂಡು ಬರುತ್ತಿದೆ ಎಂದರು.

ಈ ಹಿನ್ನೆಲೆಯಲ್ಲಿ ಅನಧಿಕೃತವಾಗಿ ನೀಡಲಾದ ಇ-ಖಾತಾಗಳನ್ನು ರದ್ದುಪಡಿಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇಲ್ಲದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷ ನಾಗಪ್ಪ ಹೊಸಮನಿ, ರಾಜು ಎದುರಮನಿ, ಮಹದೇವಪ್ಪ ಧರೆನ್, ಹಣಮಂತ ವಲ್ಲ್ಯಾಪುರ ಸೇರಿದಂತೆ ಇತರರು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಗನ ಕೊಲೆಯ ಸೇಡು: ರಣಚಂಡಿಯಾದ ಹೆತ್ತವಳು! ರಕ್ತಕ್ಕೆ ರಕ್ತವೆಂದು 12 ವರ್ಷಗಳ ಬಳಿಕ ಮುಹೂರ್ತ ಇಟ್ಟ ತಾಯಿ!₹281.48 ಕೋಟಿ ಮಲ್ಲಾಬಾದ್ ಏತ ನೀರಾವರಿ ಯೋಜನೆಯಲ್ಲಿ ಅಕ್ರಮ ಆರೋಪ; ಸರ್ಕಾರದ ತನಿಖೆಗೆ ಆಗ್ರಹಫ್ರೀಡಂ ಹಬ್ಬದಲ್ಲಿ ‘ಮೋದಿ ಮೋದಿ’ ಘೋಷಣೆ; ಡಿಕೆಶಿ ಮಾತಿನಲ್ಲೇ ಜನರಿಗೆ ಟಾಂಗ್ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚಂದ್ರಶೇಖರ ದಂಡಿನ ಆಯ್ಕೆ ಮಾಡುವಂತೆ ಸಿದ್ದು ತುಮಕೂರು ಆಗ್ರಹನಕಲಿ ಎನ್‌ಕೌಂಟರ್ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ: ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿಹಳಿಸಗರ ಸರ್ಕಾರಿ ಶಾಲೆಯ ದುಸ್ಥಿತಿ: ಪುಟಾಣಿಗಳ ಜೀವದೊಂದಿಗೆ ಚೆಲ್ಲಾಟ; ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಅನಾಹುತ ತಪ್ಪದುಗೃಹ ಸಚಿವರ ಘೋಷಣೆಗೆ ಸವಾಲೇ? ಶಹಾಪುರದಲ್ಲಿ ಮತ್ತೆ ಜೋರಾದ ಅಕ್ರಮ ಮರಳು ಸಾಗಾಟಒಂದು ವಾರದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಿ: ಇಲ್ಲದಿದ್ದರೆ ಬೃಹತ್ ಪ್ರತಿಭಟನೆ – ಕರ್ನಾಟಕ ಪ್ರಾಂತ ರೈತ ಸಂಘ ಎಚ್ಚರಿಕೆಕೆನಾಲ್ ಒಡೆದು ಸಾವಿರಾರು ಲೀಟರ್ ನೀರು ಪೋಲು: ರೈತರ ಜಮೀನು ಜಲಾವೃತ, ಕೆಬಿಜೆಎನ್ಎಲ್ ಅಧಿಕಾರಿಗಳ ವಿರುದ್ಧ ಕರ್ತವ್ಯಲೋಪದ ಆರೋಪನಾರಾಯಣಪುರ ಬಲದಂಡೆ ಕಾಲುವೆ ಕೊನೆ ಭಾಗಕ್ಕೆ ನೀರು ತಲುಪುತ್ತಿಲ್ಲ: ತಕ್ಷಣ ನಿರ್ವಹಣೆಗೆ ರೈತ ಸಂಘ ಆಗ್ರಹ