Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bijapur

ಹಿರಿಯ ನಾಗರಿಕರಲ್ಲಿ ಸ್ಮರಣಶಕ್ತಿ ಕುಂಠಿತ ಆರಂಭಿಕ ಹಂತದಲ್ಲೇ ಪತ್ತೆ ಅಗತ್ಯ: ಅಧಿಕಾರಿ ಜಗದೀಶ.ಕೆ

ಇಂಡಿ: ಹಿರಿಯ ನಾಗರಿಕರಲ್ಲಿ ಕಂಡುಬರುವ ನೆನಪಿನ ಶಕ್ತಿಯ ಕುಂದುಕೊರತೆಗಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಬೇಕು. ಇದಕ್ಕೆ ಸೂಕ್ತ ವೈದ್ಯಕೀಯ ಸಲಹೆ ಮತ್ತು ಅಗತ್ಯ ಚಿಕಿತ್ಸೆಗೆ ಮಾರ್ಗದರ್ಶನ ನೀಡುವುದು ಈ ಶಿಬಿರದ ಮುಖ್ಯ ಉದ್ದೇಶವಾಗಿದೆ ಎಂದು ವಿಜಯಪುರ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಜಗದೀಶ.ಕೆ ಹೇಳಿದರು.
ಅವರು ನಗರದ ಸಾರ್ವಜನಿಕ ತಾಲೂಕಾ ಆಸ್ಪತ್ರೆಯಲ್ಲಿ ಹಮ್ಮಿಕೊಂಡ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬಿ.ಎಲ್.ಡಿ.ಇ.ಸಂಸ್ಥೆಯ ಬಿ.ಎಮ್.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಹಿರಿಯ ನಾಗರಿಕರ ಆರೋಗ್ಯ ಕೇಂದ್ರ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ತಾಲೂಕು ಆರೋಗ್ಯ ಕೇಂದ್ರ ಇವರ ಸಹಯೋಗದಲ್ಲಿ ಹಿರಿಯ ನಾಗರಿಕರ ಮರೆವಿನ ಕಾಯಿಲೆ ಪತ್ತೆ ಮತ್ತು ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಇಂದಿನ ದಿನಮಾನಗಳ್ಳಲ್ಲಿ ಹಿರಿಯ ನಾಗರಿಕರ ಆರೋಗ್ಯದ ಹಿತದೃಷ್ಟಿಯಿಂದ ಮರೆವಿನ ಕಾಯಿಲೆ (ಡಿಮೆನ್ಷಿಯಾ) ಪತ್ತೆ ಮತ್ತು ಆರೋಗ್ಯ ತಪಾಸಣಾ ಮಾಡುವುದು ಅತಿ ಅವಶ್ಯಕವಾಗಿದೆ. ಹಿರಿಯ ನಾಗರಿಕರ ನೆನಪಿನ ಶಕ್ತಿ, ಆಲೋಚನಾ ಸಾಮರ್ಥ್ಯ, ದೈನಂದಿನ ಚಟುವಟಿಕೆಗಳನ್ನು ನಿರ್ವಹಿಸುವ ಸಾಮರ್ಥ್ಯ ತಿಳಿಯಲು ಸಹಕಾರಿಯಾಗುತ್ತದೆ. ಅವರ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ತಪಾಸಣೆ ನಡೆಸುವುದು ಸೂಕ್ತ.  ಆ ನಿಟ್ಟಿನಲ್ಲಿ ಇಂದು ಉಚಿತ ಶಿಬಿರವನ್ನು ಆಯೋಜಿಸಿರುವುದು ಸ್ವಾಗತಾರ್ಹ ಎಂದರು.
  
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು  ವಹಿಸಿದ ನೇತ್ರ ತಜ್ಞರಾದ ಡಾ||  ಜಗದೀಶ ಬಿರಾದಾರ  ಮಾತನಾಡಿ ಹಿರಿಯ ನಾಗರಿಕರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದರ ಜೊತೆಗೆ ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಕುಟುಂಬದ ಸದಸ್ಯರು ಹಿರಿಯರೊಂದಿಗೆ ಪ್ರೀತಿ, ಗೌರವ ಮತ್ತು ತಾಳ್ಮೆಯಿಂದ ವರ್ತಿಸಿ. ಅವರ ಮಾನಸಿಕ ಆರೋಗ್ಯ ಮತ್ತು ದೈನಂದಿನ ಅಗತ್ಯಗಳಿಗೆ ಸೂಕ್ತ ಬೆಂಬಲ ನೀಡಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಜುನಾಥ ಮಸಳಿ,  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾನಸಿಕ ರೋಗಿ ತಜ್ಞ ವೈದ್ಯರಾದ ಡಾ|| ಮಂಜುನಾಥ ಮಸಳಿ,  .
ವಿಜಯಪುರ ನಗರದ ಬಿ.ಎಲ್.ಡಿ.ಇ ಡೀಮ್ಡ ವಿಶ್ವ ವಿದ್ಯಾಲಯದ ಶ್ರೀ ಬಿ.ಎಂ. ಪಾಟೀಲ್ ವೈದ್ಯಕೀಯ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ: ಅಬ್ರಾರ್ ಉಲ್ ಹಕೆ,  ಮನೊವಿಜ್ಞಾನಿ ಡಾ||ಸನಿಸಾಭ್ ಜೈನಾಪುರ.  ಜಿಲ್ಲಾ ಆಸ್ಪತ್ರೆ, ಡಾ: ಕೊಕಿಲೋದಯಚಂದ್ರ ಟಿ. ಸಿ., ಡಾ: ತಬಸ್ಸುಮ್ ಭೂಪತಿ, ಡಾ|| ಸೃಷ್ಟೀ ಉಡುಪಿ, ಡಾ: ಕಮನಾ ಕೆ, ಮುತ್ತುರಾಜ ಸಾತಿಹಾಳ, ಶಿವಲಿಂಗಪ್ಪ ನಾಯ್ಕೋಡಿ, ಸಿದ್ದು ಗುಲೆ, ಬಾಬುಶ್ಯಾ ಹೊಸಮನಿ ಇದ್ದರು. ಸೂರ್ಯಕಾಂತ ಸೂರೆಗಾಂವ ನಿರೂಪಿಸಿದರು. ಸುನೀಲಕುಮಾರ ವಂದಿಸಿದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ