Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪೂರ್ವ ಮುಂಗಾರು ಎಫೆಕ್ಟ್: ಹಾಸನ-ಕೊಡಗು-ಮೈಸೂರು ಭಾಗಗಳಲ್ಲಿ ಭಾರೀ ಮಳೆಯ ಸಾಧ್ಯತೆ

ಹೈಲೈಟ್ಸ್‌:
ಸಂಜೆ ವೇಳೆಗೆ ಕೋಲಾರದಲ್ಲಿ ಗಾಳಿ-ಮಳೆ ಸಾಧ್ಯತೆ: ಹವಾಮಾನ ಇಲಾಖೆಯಿಂದ ತಕ್ಷಣದ ಅಲರ್ಟ್
ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮೇ 7–8ರಂದು ಭಾರೀ ಮಳೆಯ ಮುನ್ಸೂಚನೆ
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ; ಉತ್ತರ ಕನ್ನಡದಲ್ಲಿ ಮೇ 8ರಿಂದ ಮಳೆ ಆರಂಭ ಸಾಧ್ಯತೆ

ಬೆಂಗಳೂರು: ಬಿಸಿಲಿನ ತಾಪದಿಂದ ಬಳಲುತ್ತಿದ್ದ ಜನರಿಗೆ ಪೂರ್ವ ಮುಂಗಾರು ಸ್ವಲ್ಪ ತಂಪು ನೀಡುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 6ರಿಂದ 12ರವರೆಗೆ ಕೆಲವೆಡೆ ಮಳೆಯ ಸಾಧ್ಯತೆ ಇದೆ. ವಿಶೇಷವಾಗಿ ಮೇ 7 ಮತ್ತು 8ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದೇ ವೇಳೆ ಸಂಜೆ ವೇಳೆಗೆ ಕೋಲಾರ ಭಾಗದಲ್ಲಿ ಗಾಳಿ-ಮಳೆಯ ತಕ್ಷಣದ ಎಚ್ಚರಿಕೆಯೂ ನೀಡಲಾಗಿದೆ.

ದಕ್ಷಿಣ ಒಳನಾಡಿನಲ್ಲಿ ಮಳೆಯ ತೀವ್ರತೆ
ಹವಾಮಾನ ಇಲಾಖೆ ಪ್ರಕಾರ, ಉತ್ತರ ತೆಲಂಗಾಣ ಹಾಗೂ ಮನ್ನಾರ್ ಕೊಲ್ಲಿಯ ಮೇಲ್ಭಾಗದಲ್ಲಿ ಸುಳಿಗಾಳಿ ನಿರ್ಮಾಣವಾಗಿದೆ. ಇದರ ಪರಿಣಾಮವಾಗಿ ಉತ್ತರ ಒಳನಾಡಿನಿಂದ ಮನ್ನಾರ್ ಕೊಲ್ಲಿಯವರೆಗೆ ವಾಯುಭಾರ ಕುಸಿತ (ಟ್ರಫ್) ಉಂಟಾಗಿ, ರಾಜ್ಯದಲ್ಲಿ ಮಳೆಯ ವಾತಾವರಣ ರೂಪುಗೊಂಡಿದೆ.

ಭಾರೀ ಮಳೆಯ ಮುನ್ನೆಚ್ಚರಿಕೆ
ಹಾಸನ, ಕೊಡಗು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮೇ 7 ಮತ್ತು 8ರಂದು ಭಾರೀ ಮಳೆಯ ಸಾಧ್ಯತೆ ಇದೆ. ಚಿಕ್ಕಮಗಳೂರಿನಲ್ಲಿ ಮೇ 8ರಂದು ಹೆಚ್ಚು ಮಳೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.

ಗುಡುಗು-ಬಿರುಗಾಳಿ ಎಚ್ಚರಿಕೆ:
ಒಳನಾಡು: ಮೇ 6ರಿಂದ 10ರವರೆಗೆ ಹಲವೆಡೆ ಗುಡುಗು-ಮಿಂಚು ಸಹಿತ ಬಿರುಗಾಳಿ ಬೀಸಲಿದ್ದು, ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ಇರಬಹುದು.
ಕರಾವಳಿ: ಕರಾವಳಿ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದ್ದು, ಗುಡುಗು ಸಹಿತ ಮಳೆಯಾಗಲಿದೆ.

ಯಾವ ಜಿಲ್ಲೆಗಳಲ್ಲಿ ಮಳೆ?
ದಕ್ಷಿಣ ಒಳನಾಡು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ತುಮಕೂರು, ರಾಮನಗರ, ಕೋಲಾರ, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡು: ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಬೆಳಗಾವಿ ಜಿಲ್ಲೆಗಳಲ್ಲಿ ಚದುರಿದ ಮಳೆಯ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ.
ಕರಾವಳಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಕನ್ನಡದಲ್ಲಿ ಮೇ 8ರಿಂದ ಮಳೆ ಆರಂಭವಾಗುವ ಸೂಚನೆ ಇದೆ.

ಹವಾಮಾನ ತಜ್ಞ ಸಿ.ಎಸ್ ಪಾಟೀಲ್ ಅವರ ಪ್ರಕಾರ, ಮೇ 6ರಿಂದ 12ರವರೆಗೆ ರಾಜ್ಯದ ಶೇ.25ಕ್ಕಿಂತ ಕಡಿಮೆ ಪ್ರದೇಶದಲ್ಲಿ ಮಾತ್ರ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಈ ಅವಧಿಯಲ್ಲಿ ಗಾಳಿಯ ವೇಗ ಗಂಟೆಗೆ 40ರಿಂದ 50 ಕಿ.ಮೀ ಇರಬಹುದು. ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ತಾಪಮಾನ 42°C ವರೆಗೆ ಏರಿಕೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ತಾಪಮಾನ 37°C ಸುತ್ತಮುತ್ತ ಇರಲಿದೆ.

ಬೆಂಗಳೂರು ಹವಾಮಾನ ವರದಿ:
ನಗರದಲ್ಲಿ ಮುಂದಿನ 24ರಿಂದ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ವೇಳೆ ಎರಡು ದಿನ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಗಾಳಿಯ ವೇಗ 40-50 ಕಿ.ಮೀ ಇರಬಹುದು. ಗರಿಷ್ಠ ತಾಪಮಾನ 34°C–35°C ಹಾಗೂ ಕನಿಷ್ಠ ತಾಪಮಾನ 22°C ಸುತ್ತಮುತ್ತ ಇರಲಿದೆ.

ತಾಪಮಾನ ಸ್ಥಿತಿ:
ಕಳೆದ 24 ಗಂಟೆಗಳಲ್ಲಿ ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವೆಡೆ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚು ದಾಖಲಾಗಿದೆ. ಆದರೆ ಮುಂದಿನ ಐದು ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ನಿರೀಕ್ಷೆಯಿಲ್ಲ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ : ಬಸ್ ಚಾಲಕ ದುರ್ಮರಣದೇವರಾಜ್ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ, ಪೊಲೀಸ್ ತನಿಖೆಗೆ ಗ್ರಾಮಸ್ಥರ ಒತ್ತಾಯಉತ್ತಮ ವ್ಯಕ್ತಿತ್ವ, ಚಾಣಾಕ್ಷ ಕಾರ್ಯವೈಖರಿ; ವರ್ಗಾವಣೆಯಾದ ಚಾ ವಿ ಸ ನಿ ನಿ ಯ AE ಮತ್ತು ಪ್ರಭಾರ AEE ಅವರಿಗೆ ಭಾವಪೂರ್ಣ ಬೀಳ್ಕೊಡುಗೆಹಾಸನ: ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ವೇಳೆ ವಿದ್ಯುತ್ ಅವಘಡ – ಕುಣಿಗಲ್ ಆರ್‌ಎಫ್‌ಒ ಜಗದೀಶ್ ಸಾವುಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲವಿದ್ಯುತ್ ವಿತರಣಾ ಖಾಸಗೀಕರಣ ವಿರೋಧಿಸಿ ಸಂಸದರಿಗೆ ಮನವಿಇರಾನ್–ಅಮೆರಿಕ ಶಾಂತಿ ಮಾತುಕತೆ ನಡುವೆ ಖಮೇನಿ ಅಂತ್ಯಕ್ರಿಯೆ ದಿನಾಂಕ ಘೋಷಣೆಮಧ್ಯಪ್ರಾಚ್ಯದಲ್ಲಿ ಕಾಳಗದ ಕಾವು: US ನೌಕಾನೆಲೆ ಮೇಲೆ ಇರಾನ್ ದಾಳಿ, ಪ್ರತೀಕಾರ ಅನಿವಾರ್ಯ ಎಂದ ಟ್ರಂಪ್13 ಕಿ.ಮೀ ಕಾಮಗಾರಿ ಪೂರ್ಣಗೊಂಡ ತುಮಕೂರು–ಚಿತ್ರದುರ್ಗ ರೈಲು ಯೋಜನೆ; ಸಂಪೂರ್ಣ ಮಾರ್ಗ ಯಾವಾಗ ಸಿದ್ಧ?ಬಂಡೀಪುರದಲ್ಲಿ ಭದ್ರತಾ ಲೋಪ: ರೌಡಿ ಶೀಟರ್ ಗ್ಯಾಂಗ್‌ನ ಎಣ್ಣೆ ಪಾರ್ಟಿ ಬಹಿರಂಗ