Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Belagavi

*ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ: ಲಕ್ಷ್ಮೀ ಹೆಬ್ಬಾಳಕರ್*

*ಬಿಜೆಪಿ ಅಧೀನ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ; ಕಾಂಗ್ರೆಸ್ ಒಗ್ಗಟ್ಟಾಗಿ ಎದುರಿಸಲಿದೆ*

ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಗಳು ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿರುವ ದಾಳಿಯನ್ನು ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸತೀಶ್ ಜಾರಕಿಹೊಳಿ ಅವರ ವಿರುದ್ಧ ನಡೆದಿರುವ ಇಡಿ ದಾಳಿ ರಾಜಕೀಯ ಪ್ರೇರಿತವಾಗಿದ್ದು, ಕೇಂದ್ರದ ಬಿಜೆಪಿ ಸರ್ಕಾರ ತನಿಖಾ ಸಂಸ್ಥೆಗಳನ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
“ರಾಜಕೀಯ ಎದುರಾಳಿಗಳನ್ನು ಪ್ರಜಾಸತ್ತಾತ್ಮಕ ಹಾಗೂ ನ್ಯಾಯಯುತ ಮಾರ್ಗದಲ್ಲಿ ಎದುರಿಸುವ ಬದಲು, ಬಿಜೆಪಿ ತನ್ನ ಅಧೀನದಲ್ಲಿರುವ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವುದು ಹೊಸದೇನಲ್ಲ. ಇದೀಗ ಸತೀಶ್ ಜಾರಕಿಹೊಳಿ ಅವರ ನಿವಾಸಗಳ ಮೇಲೆ ನಡೆದಿರುವ ಇಡಿ ದಾಳಿಯೂ ಇದೇ ರೀತಿಯ ರಾಜಕೀಯ ದುರುದ್ದೇಶದ ಭಾಗವಾಗಿದೆ,” ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜನಪರ ಆಡಳಿತ ನೀಡುತ್ತಿದ್ದು, ಸರ್ಕಾರದ ಸಾಧನೆಗಳನ್ನು ಸಹಿಸಲಾಗದೆ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಇಂತಹ ದಾಳಿಗಳನ್ನು ನಡೆಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
“ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳು, ಅಭಿವೃದ್ಧಿ ಕಾರ್ಯಗಳು ಹಾಗೂ ಸಾಧನೆಗಳನ್ನು ಸಹಿಸಲಾಗದೆ ಬಿಜೆಪಿಯವರು ರಾಜಕೀಯವಾಗಿ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಳ್ಳುತ್ತಿದ್ದಾರೆ. ಅಧಿಕಾರದಲ್ಲಿರುವವರು ತಮ್ಮ ರಾಜಕೀಯ ಎದುರಾಳಿಗಳನ್ನು ಎದುರಿಸಲು ಇಡಿ, ಸಿಬಿಐ ಸೇರಿದಂತೆ ಕೇಂದ್ರದ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿರುವುದು ಪ್ರಜಾಪ್ರಭುತ್ವಕ್ಕೆ ಆರೋಗ್ಯಕರ ಬೆಳವಣಿಗೆಯಲ್ಲ,” ಎಂದು ಅವರು ತಿಳಿಸಿದ್ದಾರೆ.
ಸತೀಶ್ ಜಾರಕಿಹೊಳಿ ಅವರು ಹಿರಿಯ ಕಾಂಗ್ರೆಸ್ ನಾಯಕರಾಗಿದ್ದು, ಪಕ್ಷ ಹಾಗೂ ರಾಜ್ಯದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ವಿರುದ್ಧ ತನಿಖಾ ಸಂಸ್ಥೆಗಳ ಮೂಲಕ ಒತ್ತಡ ಹೇರುವ ಪ್ರಯತ್ನಗಳನ್ನು ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿ ಎದುರಿಸಲಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
“ಸತೀಶ್ ಜಾರಕಿಹೊಳಿ ಅವರೊಂದಿಗೆ ಇಡೀ ಕಾಂಗ್ರೆಸ್ ಪಕ್ಷ ನಿಲ್ಲುತ್ತದೆ. ಇಂತಹ ರಾಜಕೀಯ ಹುನ್ನಾರಗಳಿಗೆ ನಾವು ಹೆದರುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಇಂತಹ ಪ್ರಯತ್ನಗಳನ್ನು ಎದುರಿಸಲಿದ್ದಾರೆ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ತನಿಖಾ ಸಂಸ್ಥೆಗಳು ತಮ್ಮ ಸ್ವಾಯತ್ತತೆಯನ್ನು ಕಾಪಾಡಿಕೊಂಡು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ರಾಜಕೀಯ ಭಿನ್ನಾಭಿಪ್ರಾಯಗಳನ್ನು ತನಿಖಾ ಸಂಸ್ಥೆಗಳ ಮೂಲಕ ಬಗೆಹರಿಸುವ ಪ್ರಯತ್ನ ನಡೆಯಬಾರದು. ಪ್ರಜಾಪ್ರಭುತ್ವದಲ್ಲಿ ಪ್ರತಿಪಕ್ಷ ಹಾಗೂ ರಾಜಕೀಯ ಎದುರಾಳಿಗಳನ್ನು ರಾಜಕೀಯವಾಗಿಯೇ ಎದುರಿಸಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ್ ಒತ್ತಾಯಿಸಿದ್ದಾರೆ.
“ಕಾಂಗ್ರೆಸ್ ನಾಯಕರನ್ನು ಹೆದರಿಸಿ, ಬೆದರಿಸಿ ರಾಜಕೀಯವಾಗಿ ದುರ್ಬಲಗೊಳಿಸಬಹುದು ಎಂಬ ಬಿಜೆಪಿ ಭ್ರಮೆ ಹೊಂದಿದ್ದರೆ ಅದು ಎಂದಿಗೂ ಸಾಧ್ಯವಿಲ್ಲ. ಸತ್ಯ ಮತ್ತು ನ್ಯಾಯದ ಪರವಾಗಿ ಕಾಂಗ್ರೆಸ್ ಸದಾ ನಿಲ್ಲುತ್ತದೆ. ಈ ರಾಜಕೀಯ ಹುನ್ನಾರವನ್ನು ನಾವು ಒಗ್ಗಟ್ಟಾಗಿ ಎದುರಿಸುತ್ತೇವೆ,” ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ