ಕಾಂಗ್ರೆಸ್ ಸಂಸದ ಇ.ತುಕಾರಾಂ ನಿವಾಸ ಹಾಗೂ ಶಾಸಕರ ನಿವಾಸದ ಮೇಲೆ ಇಡಿ ದಾಳಿ.!
ಬಳ್ಳಾರಿ : ಕಾಂಗ್ರೆಸ್ ಸಂಸದ ಇ.ತುಕಾರಾಂ ನಿವಾಸ ಹಾಗೂ ಶಾಸಕರ ನಿವಾಸದ ಮೇಲೆ ಇಡಿ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದೆ.
ಬಳ್ಳಾರಿಯಲ್ಲಿ ಕಾಂಗ್ರೆಸ್ ಸಂಸದ ಇ.ತುಕಾರಾಂ ಮನೆ ಮೇಲೆ ಇಡಿ ದಾಳಿ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಾಲ್ಮೀಕಿ ನಿಗಮದ ಹಣ ಲೋಕಸಭೆ ಚುನಾವಣೆಗೆ ಬಳಸಿದ ಆರೋಪದ ಮೇಲೆ ಇಡಿ ದಾಳಿ ನಡೆಸಿ ದಾಖಲೆಗಳನ್ನು ಕೆದಕುತ್ತಿದೆ.
ಲೋಕಸಭೆ ಚುನಾವಣೆ ವೇಳೆ ಹಣ ಬಳಕೆ ಆರೋಪದ ಮೇರೆಗೆ ಕಾಂಗ್ರೆಸ್ ಸಂಸದ ಇ.ತುಕಾರಾಂ ಮನೆ ಮೇಲೆ ಇಡಿ ದಾಳಿ ನಡೆಸಿದೆ. ಅದೇ ರೀತಿ ಶಾಸಕ ನಾರಾ ಭರತ್ ರೆಡ್ಡಿ, ಕಂಪ್ಲಿ ಗಣೇಶ್ ಮನೆ ಮೇಲೂ ಕೂಡ ದಾಳಿ ನಡೆಸಲಾಗಿದೆ.ಅದೇ ರೀತಿ ಮಾಜಿ ಸಚಿವ ನಾಗೇಂದ್ರ ಪಿಎ ಗೋವರ್ಧನ್ ಗೂ ಇಡಿ ಶಾಕ್ ಎದುರಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.