LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಮುಡಾ ಹಗರಣದ ಬಗ್ಗೆ ಇಡಿಯವರು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾ, ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ಬಿಜೆಪಿಯವರು ಈ ಪತ್ರಿಕಾ ಪ್ರಕಟಣೆಯನ್ನು ಅನಗತ್ಯವಾಗಿ ಇಡಿಯವರ ಮೂಲಕ ಬಿಡುಗಡೆ ಮಾಡಿಸಿದ್ದಾರೆ ಎಂದರು.

ಹಣ ದುರುಪಯೋಗದ ಪ್ರಶ್ನೆ ಇಲ್ಲ

ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣದ ಪ್ರತಿಪಕ್ಷಗಳ ಆರೋಪ ಹಾಗೂ ರಾಜ್ಯದ ತೆರಿಗೆ ಹಣದಲ್ಲಿ ನಾಳಿನ ಸಮಾರಂಭ ನಡೆಸುತ್ತಿರುವ ಬಗ್ಗೆ ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಣ ದುರುಪಯೋಗ ಆಗಿರುವ ಪ್ರಶ್ನೆಯೇ ಇಲ್ಲ ಎಂದರು.

ತಪ್ಪಿತಸ್ಥರ ವಿರುದ್ಧ ಕ್ರಮ

ವಿಜಯಪುರದಲ್ಲಿ ಕಾರ್ಮಿಕರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ‍್ಳಲಾಗುವುದು ಎಂದರು.

ಮೈಕ್ರೋ ಫೈನಾನ್ಸ್ ದಂಧೆ- ಕಾನೂನು ರೀತ್ಯ ಕ್ರಮ

ಮೈಸೂರು ಚಾಮರಾಜನಗರ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ಹೆಚ್ಚಿದ್ದು, ಜನರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ, ಜನರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ದಂಧೆ ನಡೆಸುತ್ತಿರುವ ಸಂಸ್ಥೆಯ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

1924ರ ಬೆಳಗಾವಿ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ ಸ್ಮರಣಾರ್ಥವಾಗಿ ಮಹಾತ್ಮಾ ಗಾಂಧೀಜಿ ಪ್ರತಿಮೆ ಅನಾವರಣ ನಂತರ ಸಾರ್ವಜನಿಕ ಸಭೆ ನಡೆಸಲಾಗುವುದು ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್ ಪಕ್ಷಕ್ಕೆ ವಿಚ್ಛೇದನ ಕೊಟ್ಟಿದ್ದಕ್ಕೆ ಕಾರಣ ಕೊಟ್ಟ ಮಾಜಿ ಪ್ರಧಾನಿಗಳುಅಂಕಿ-ಅಂಶಗಳ ಬಜೆಟ್‌, ದಿಕ್ಕು ದಿಸೆಯಿಲ್ಲದ ಆಯವ್ಯಯ’: ಅರವಿಂದ ಬೆಲ್ಲದಮಾ.21ರಂದು ರಾಮಾನಂದಾಚಾರ್ಯರ ಆಧ್ಯಾತ್ಮಿಕ ಪ್ರವಚನಗ್ರಾಮ ಸಹಾಯಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಸಹಕಾರಿ ಧುರೀಣ ಕೆ.ಹೆಚ್ ಪಾಟೀಲರು ಅಪರೂಪದ ರಾಜಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯಜನ್ಮಧಾತೆ ಕನ್ನಡ ಸಿನೆಮಾ ಮಾ.20 ರಂದು ಪ್ರದರ್ಶನಕನ್ನಡಿಗರ ಉದ್ಯೋಗಿಗಳನ್ನು ಕೇಂದ್ರ ಸರ್ಕಾರ ಅತಂತ್ರ ಸ್ಥಿತಿಗೆ ತಳ್ಳಿದೆ: ಸಿಎಂಹಲಸೂರು ಕೆರೆ ಹೂಳೆತ್ತುವುದರಿಂದ ನೀರು ಸಂಗ್ರಹ ಅಂತರ್ಜಲ ವೃದ್ಧಿ :ಚೋಳನ್ಏಕ ಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಒಟ್ಟು 78 ಲಕ್ಷ ರೂ ದಂಡಎಲ್ ಪಿಜಿ ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ-CM ಸಿದ್ದರಾಮಯ್ಯ