ಬೆಳಗಾವಿ :
೨೦೨೩-೨೪ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಗ್ರಾಮೀಣ ವಲಯದ ಬ್ಲಾಕ್ ಹಂತದ ಶಿಕ್ಷಣ ಅದಾಲತ್ ಕಾರ್ಯಕ್ರಮವನ್ನು ಅ.೧೩ ೨೦೨೩ ರಂದು ಹಮ್ಮಿಕೊಳ್ಳಲಾಗಿದೆ.
ಬೆಳಗಾವಿ ಗ್ರಾಮೀಣ ವಲಯದ ಎಲ್ಲಾ ಶಿಕ್ಷಕರಿಗೆ ಹಾಗೂ ಸಾರ್ವಜನಿಕರಲ್ಲಿ ತಿಳಿಸುವುದೇನೆಂದರೆ ಕಚೇರಿಯಿಂದ ಇತ್ಯರ್ಥ ಆಗಬೇಕಾದ ಯಾವುದಾದರೂ ಪ್ರಕರಣಗಳು ಇದ್ದಲ್ಲಿ ಹಾಗೂ ಶೈಕ್ಷಣಿಕ ಬೋಧನೆ ಕಲಿಕೆಗೆ ಸಂಬಂಧಿಸಿದಂತೆ ಕುಂದುಕೊರತೆಗಳಿಗೆ ಸೌಹಾರ್ದವಾಗಿ ಶೀಘ್ರವಾಗಿ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸದರಿ ಅಹವಾಲುಗಳೇನಾದರೂ ಇದ್ದಲ್ಲಿ ಅ.೧೦ ೨೦೨೩ ರೊಳಗಾಗಿ ಬೆಳಗಾವಿ ಗ್ರಾಮೀಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಬೆಳಗಾವಿ ಗ್ರಾಮೀಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ದಾಸಪ್ಪನವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.